ಕರ್ನಾಟಕ ಬಜೆಟ್‌ 2023-2024

Highlights of budget

ಕರ್ನಾಟಕ ಬಜೆಟ್‌ 2023-2024

ಸಿದ್ಧ ರಾಮ ರಾಜ್ಯದ ಕಲ್ಯಾಣ ಬಜೆಟ್!

ಬೆಂಗಳೂರು :ಹೆಚ್ಚುತ್ತಿರುವ ಅಸಮಾನತೆ ಮತ್ತು ನಿರುದ್ಯೋಗದಿಂದ ಜರ್ಜರಿತರಾಗಿರುವ ರಾಜ್ಯದ ಜನ ಸಾಮಾನ್ಯರು, ರೈತರು, ಯುವಜನರು ಹಾಗೂ ಸಮಾಜದ ಕಟ್ಟ ಕಡೆಯ ವರ್ಗದವರಿಗೆ ಅಗತ್ಯವಿರುವ ಬೆಂಬಲವನ್ನು ಒದಗಿಸಲು ಸಮಗ್ರ ಮತ್ತು ಸಮೃದ್ಧ ಕರ್ನಾಟಕವನ್ನು ಕಲ್ಪಿಸುವ ದೃಷ್ಟಿಕೋನದೊಂದಿಗೆ ಕಲ್ಯಾಣ ಆಧಾರಿತ ಬಜೆಟ್‌ ಅನ್ನು ಮಂಡಿಸುತ್ತಿದ್ದೇನೆ.


ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಡಲಿದೆ ಎಂಬ ವಿರೋಧಿಗಳ ಭವಿಷ್ಯವನ್ನು ನಾವು ಸುಳ್ಳು ಮಾಡಿದ್ದೇವೆ. 5 ಖಾತರಿ ಯೋಜನೆಗಳಷ್ಟೇ ಅಲ್ಲದೆ ಹಲವಾರು ಹೊಸ ಕಲ್ಯಾಣ ಯೋಜನೆಗಳಿಗೂ ಮತ್ತು ಮೂಲ ಸೌಕರ್ಯ ಕಾರ್ಯಕ್ರಮಗಳಿಗೂ ಅಗತ್ಯವಿರುವ ಆಯವ್ಯಯವನ್ನು ಒದಗಿಸಿದ್ದೇವೆ.


ದಾಖಲೆಯ 3.71 ಲಕ್ಷಕೋಟಿ ರೂ.ಗಳ ಅಂದಾಜು ವೆಚ್ಚದ ಬೃಹತ್ ಬಜೆಟ್‌ಅನ್ನು ವಿಧಾನಸಭೆಯಲ್ಲಿ ಶುಕ್ರವಾರ ಮಂಡಿಸಿದ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಟ್ಟಿ ಮಾತುಗಳಿವು.


ಬೆಳಗಿನ 10.15ರಿಂದ ಸುಮಾರು ಮೂರುಗಂಟೆ ಕಾಲ ನಿರಂತರ ನಿಂತು ಬಜೆಟ್ ಭಾಷಣ ಓದಿದ ಸಿದ್ದರಾಮಯ್ಯನವರು ಸಂಪನ್ಮೂಲ ಕ್ರೋಡೀಕರಣಕ್ಕೆ ಮದ್ಯ (ಐಎಂಎಲ್) ಮತ್ತು ಬಿಯರ್ ದರಗಳನ್ನು ನೆರೆರಾಜ್ಯಗಳ ಸ್ಲಾಬ್‌ ಗನುಗುಣವಾಗಿ ಪರಿಷ್ಕರಿಸುವುದಾಗಿ ಪ್ರಕಟಿಸಿದ್ದು 15ನೇ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.


ಕೇಂದ್ರ ಸರ್ಕಾರದಿಂದ 44,885 ಕೋಟಿ ರೂ.ಗಳ ತೆರಿಗೆ ಪಾಲು 15,300 ಕೋಟಿ ರೂ.ಗಳ ಸಹಾಯಧನ ಬರುವ ನಿರೀಕ್ಷೆಯಿದೆ. ಜೊತೆಗೆ 1,05,245 ಕೋಟಿ ರೂ.ಗಳ ಸಾಲ ಮಾಡುವ ಮುನ್ಸೂಚನೆ ನೀಡಿದ್ದಾರೆ. 38 ಕೋಟಿ ರೂ.ಗಳ ಋಣೇತರ ಸ್ವೀಕೃತಿ ಮತ್ತು 213 ಕೋಟಿ ರೂ.ಗಳ ಸಾಲ ವಸೂಲು ಮೊತ್ತವನ್ನು ಅಂದಾಜಿಸಿ ಒಟ್ಟು ಸಂಪನ್ಮೂಲವನ್ನು 3,68,674 ಕೋಟಿ ರೂ.ಗಳೆಂದು ಲೆಕ್ಕ ಹಾಕಿದ್ದಾರೆ. ಇದರಜೊತೆ ವೆಚ್ಚಗಳ ಬಾಬ್ತಿನಲ್ಲಿ 2,90,531 ಕೋಟಿ ರೂ.ಗಳ ರಾಜಸ್ವ ವೆಚ್ಚವನ್ನು ನಿಗದಿ ಮಾಡಿದ್ದಾರೆ. ಬಂಡವಾಳ ವೆಚ್ಚಕ್ಕೆ 55,877 ಕೋಟಿ ರೂ.ಗಳನ್ನು ನಿಗದಿ ಮಾಡಿದ್ದರೆ ಸಾಲದ ಮರುಪಾವತಿಗೆ 24,974 ಕೋಟಿ ರೂ.ಗಳನ್ನು ಕಾಯ್ದಿರಿಸಿದ್ದಾರೆ.


ಮುಂದಿನ ಆರ್ಥಿಕ ವರ್ಷದಲ್ಲಿ 27,354 ಕೋಟಿ ರೂ.ಗಳನ್ನು ರಾಜಸ್ವ ಕೊರತೆ ಎಂದು ಹಾಗೂ 82,595 ಕೋಟಿ ರೂ.ಗಳನ್ನು ವಿತ್ತೀಯ ಕೊರತೆ ಎಂದು ಅಂದಾಜಿಸಲಾಗಿದೆ. ವಿತ್ತೀಯ ಕೊರತೆಯು ರಾಜ್ಯದ ಜಿಎಸ್‌ಡಿಪಿಯ ಶೇ.2.95 ರಷ್ಟಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. 


ಮುಂದಿನ ಆರ್ಥಿಕ ವರ್ಷಕ್ಕೆ ರಾಜ್ಯದ ಒಟ್ಟು ಹೊಣೆಗಾರಿಕೆ 6,65,095 ಕೋಟಿ ರೂ.ಗಳೆಂದು ಅಂದಾಜಿಸಲಾಗಿದ್ದು, ಬೃಹತ್ ಮೊತ್ತದ ಸಾಲವನ್ನು ಬಿಂಬಿಸಲಾಗಿದೆ. ಆದರೂ ಆರ್ಥಿಕ ಶಿಸ್ತಿನ ಮಿತಿ ಶೇ.25 ರೊಳಗೆ ಸಾಲದ ಮೊತ್ತವಿದ್ದು, ಒಟ್ಟು ಜಿಎಸ್‌ಡಿಪಿಯ ಶೇ.23.68 ರಷ್ಟಿದೆ ಎಂದು ತಿಳಿಸಿದ್ದಾರೆ.


ವಿತ್ತೀಯ ಕೊರತೆಯನ್ನು ಶೇ.3 ರೊಳಗೆ, ಹೊಣೆಗಾರಿಕೆ ಶೇ.25 ರೊಳಗೆ ಕಾಯ್ದುಕೊಳ್ಳಲಾಗಿದೆ. ಮಧ್ಯಮಾವ ವಿತ್ತೀಯ ಯೋಜನೆಯಲ್ಲಿ ಅಂದಾಜಿಸಿರುವಂತೆ ಇನ್ನೆರೆಡು ವರ್ಷದೊಳಗೆ ರಾಜಸ್ವ ಹೆಚ್ಚುವರಿಯನ್ನು ಸಾಧಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಯವರು ಲೇಖಾನುದಾನದ ಬದಲಿಗೆ ಪೂರ್ಣ ಪ್ರಮಾಣದ ಬಜೆಟ್‌ಗೆ ಅಂಗೀಕಾರ ನೀಡುವಂತೆ ಮನವಿ ಮಾಡಿದ್ದಾರೆ.

  ಬಜೆಟ್‌ನಲ್ಲಿ ಹೊಸತೇನು?!

• ನಮ್ಮ ಮಿಲೆಟ್ ಎಂಬ ಹೊಸ ಕಾರ್ಯಕ್ರಮದ ಮೂಲಕ ಸಿರಿಧಾನ್ಯಗಳ ಮೌಲ್ಯವರ್ಧನೆಗೆಆದ್ಯತೆ. 


• ಎಪಿಎಂಸಿ ಕಾಯ್ದೆ ಹಿಂದಕ್ಕೆಎತ್ತಿನ ಹೊಳೆ ಯೋಜನೆಗೆ ಸಮತೋಲನ ಜಲಾಶಯ ನಿರ್ಮಾಣ


• ಪಾವಗಡ ಸೋಲಾರ್ ಪಾರ್ಕ್ ಮಾದರಿಯಲ್ಲಿ ಜಲಸಂಪನ್ಮೂಲ ಇಲಾಖೆಯ ಜಲಾಶಯಗಳ ಹಿನ್ನೀರಿನ ಪ್ರದೇಶಗಳಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ, 


• ಶಾಲಾ-ಕಾಲೇಜುಗಳ ಸಾಮರಸ್ಯಕ್ಕಾಗಿ ನಾವು ಮನುಜರು ಎಂಬ 2 ಗಂಟೆಗಳ ವಿಚಾರ ವಿಮರ್ಶೆ ಮತ್ತು ಸಂವಾದಗಳನ್ನು ಆಯೋಜಿಸುವುದು,


• ರಾಜ್ಯ ಶಿಕ್ಷಣ ನೀತಿ ಅನುಷ್ಠಾನ, ಬೇರುಚಿಗುರು ಎಂಬ ವಿನೂತನಕಾರ್ಯಕ್ರಮದ ಮೂಲಕ ಸರ್ಕಾರಿಉನ್ನತ ಶಿಕ್ಷಣ ಸಂಸ್ಥೆಗಳನ್ನು ಹಳೆ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿಅಭಿವೃದ್ಧಿಪಡಿಸುವುದು, 


• ಪ್ರೇರಣಾಯೋಜನೆಯ ಮೂಲಕ ತಾಂತ್ರಿಕ ಶಿಕ್ಷಣ ಉನ್ನತೀಕರಣ ಬಜೆಟ್‌ನ ಪ್ರಮುಖ ಅಂಶಗಳಾಗಿವೆ.

ಐದುಗ್ಯಾರಂಟಿ ಯೋಜನೆಗಳಿಗೆ 52 ಸಾವಿರಕೋಟಿರೂಪಾಯಿ


ಬೆಂಗಳೂರು:  ಕಳೆದ ವಿಧಾನಸಭೆಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಭರ್ಜರಿ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ಐದುಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ 52 ಸಾವಿರ ಕೋಟಿರೂ. ಅನುದಾನವನ್ನು ಮೀಸಲಿಡಲಾಗಿದೆ. 


ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಹಾಗು ಅನ್ನ ಭಾಗ್ಯ ಯೋಜನೆಗಳಿಗೆ 2024-25ನೇ ಸಾಲಿನಲ್ಲಿಒಟ್ಟು 52 ಸಾವಿರ ಕೋಟಿ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.


ಈ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿಕುಟುಂಬಕ್ಕೆ 50 ಸಾವಿರದಿಂದ 55 ಸಾವಿರದವರೆಗೆ ಒದಗಿಸಲಾಗುತ್ತದೆ ಎಂದರು.


ನಮ್ಮ ವಿರೋಧಿಗಳು ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಟೀಕಿಸಿ, ರಾಜ್ಯ ಬೊಕ್ಕಸದಲ್ಲಿ ಹಣವಿಲ್ಲ ಎಂದು ಸುಳ್ಳು ಹೇಳಿ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಸಂಕಷ್ಟಗಳಿಗೆ ಸ್ಪಂದಿಸಲಾಗದವರು ತಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಇಂಥ ಟೀಕೆಗಳನ್ನು ಮಾಡುತ್ತಾರೆ.

ಇನ್ನೊಂದೆಡೆ ನಮ್ಮ ಗ್ಯಾರಂಟಿಗಳನ್ನು ಕದ್ದುಅವರ ಗ್ಯಾರಂಟಿಗಳೆಂದು ನಂಬಿಸಲು ಹೆಣಗಾಡುತ್ತಿದ್ದಾರೆ ಇಂತಹ ಟೀಕೆಗಳಿಗೆ ನಾನಲ್ಲ, ಶರಣರೇ ಉತ್ತರ ನೀಡಿದ್ದಾರೆ ಎಂದು ಹೇಳಿದ್ದಾರೆ.


ಮನ  ಶುದ್ದವಿಲ್ಲದವಂಗೆ ದ್ರವ್ಯದ ಬಡತನವಲ್ಲದೆ
ಚಿತ್ತ ಶುದ್ಧದಲ್ಲಿ ಕಾಯಕವ ಮಾಡುವಲ್ಲಿ
ಸದ್ಭಕ್ತಂಗೆಎತ್ತ ನೋಡಿದಡತ್ತ ಲಕ್ಷಿ ತಾನಾಗಿಪ್ಪಳು
ಮಾರಯ್ಯ ಪ್ರಿಯ ಅಮರೇಶ್ವರ ಲಿಂಗದ ಸೇವೆಯುಳ್ಳನ್ನಕ್ಕರ 


ಎಂದು ಶರಣೆ ಆಯ್ದಕ್ಕಿ ಲಕ್ಕಮ್ಮಅವರ ವಚನವನ್ನು ಉಲ್ಲೇಖಿಸಿ ತಿರುಗೇಟು ನೀಡಿದರು.

ಉತ್ತಮ ಆರೋಗ್ಯ ಸೇವೆ ನೀಡಲು ಸರ್ಕಾರ ಒತ್ತು 

ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ

ಬೆಂಗಳೂರು: ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ನೀಡಲು ಸರ್ಕಾರ ಒತ್ತು ನೀಡಿದ್ದು, ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‌ಗಳನ್ನು ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ.


ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದರು. ಮುಂದಿನ ಸಾಲಿನಲ್ಲಿ ಒಳಿದ ಒಂಭತ್ತು ಜಿಲ್ಲೆಗಳಲ್ಲೂ ಸಹ ಕ್ರಿಟಿಕಲ್ ಕೇರ್ ಬ್ಲಾಕ್‌ಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.
ಆನೇಕಲ್, ನೆಲಮಂಗಲ, ಹೊಸಕೋಟೆ, ಖಾನಪುರ, ಶಿರಹಟ್ಟಿ, ಎಳಂದೂರು ತಾಲೂಕುಗಳಲ್ಲಿ 100 ತಾಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಶಿಥಿಲಾವಸ್ಥೆಯಲ್ಲಿರುವ ಆರೋಗ್ಯ ಕೇಂದ್ರವನ್ನು ಉನ್ನತೀಕರಣಕ್ಕಾಗಿ 75 ಕೋಟಿ ರೂ. ಅನುದಾನ ನೀಡಲಾಗುವುದು.


ಗ್ರಾಮೀಣ ಜನರಿಗೆ 24 ಗಂಟೆಯೂ ತುರ್ತು ಆರೋಗ್ಯ ಸೇವೆ ನೀಡಲು ಮುಂದಿನ ಎರಡು ವರ್ಷದಲ್ಲಿ 25 ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದರು. ಕಲ್ಯಾಣ ಕರ್ನಾಟಕ ಭಾಗದ 46 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ. ವೆಚ್ಚದಲ್ಲಿ ಕೆಕೆಆರ್ ಬಿ ಮೂಲಕ ಸ್ಥಳ ಸ್ಥಾಪಿಸಲಾಗುವುದು.


ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6493 ಆರೋಗ್ಯ ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳನ್ನು ಅಗ್ನಿ ಅವಘಡದಿಂದ ರಕ್ಷಿಸಲು 13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ ಶಾಮಕ ವ್ಯವಸ್ಥೆಯನ್ನು 6 ಕೋಟಿ ರೂ. ವೆಚ್ಚದಲ್ಲಿ ಅಳವಡಿಸಲಾಗುವುದು. 2025ರೊಳಗೆ ಕ್ಷಯ ರೋಗ ನಿರ್ಮೂಲನೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 87 ಟ್ರೂ-ನಾಟ್ ಮಿಷನ್‌ಗಳನ್ನು ಖರೀದಿಸಲಾಗುವುದು ಎಂದರು.


ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಸ್ಥಾಪಿಸಿ ಬಡವರಿಗೆ ಕೈಗೆಟುಕುವ ದರದಲ್ಲಿ ಪ್ರಯೋಗಾಲಯ ಸೇವೆಯನ್ನು ನೀಡಲಾಗುವುದು ಎಂದರು. ಹೀಗೆ ಹಲವು ಯೋಜನೆಗಳನ್ನು ರೂಪಿಸುವ ಮೂಲಕ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆಯನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು.

ಗ್ರಾಮೀಣ ಪತ್ರಕರ್ತರಿಗೆ ಬಸ್‌ ಪಾಸ್‌,

ʼವಡ್ಡರ್ಸೆ ರಘುರಾಮಶೆಟ್ಟಿʼ ಪ್ರಶಸ್ತಿ ಸ್ಥಾಪನೆ

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯವನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ ಭಾಷಣದಲ್ಲಿ ಘೋಷಿಸಿದರು.

“ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ರಕರ್ತರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಪ್ರಶಸ್ತಿ ಸ್ಥಾಪಿಸಿ, ಪ್ರತಿ ವರ್ಷ ನೀಡಲಾಗುವುದು” ಎಂದು ಸಿದ್ದರಾಮಯ್ಯ ಘೋಷಿಸಿದರು.

ದಾವಣಗೆರೆಯಲ್ಲಿ ಫೆ. 3 ಮತ್ತು 4 ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ.

ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಸ್ಮರಿಸಿ ಅಭಿನಂದಿಸಿದೆ.

ಕೃಷಿ ವಲಯ ಉನ್ನತಿಗೆ ವಿಶೇಷ ಆದ್ಯತೆ


`ನಮ್ಮ ಮಿಲೇಟ್’ ಹೊಸ ಯೋಜನೆ ಪ್ರಾರಂಭ

ಬೆಂಗಳೂರು: ಕೃಷಿಕ ಹಾಗೂ ರೈತ ಮಹಿಳೆಯರ ಆರ್ಥಿಕ ಮತ್ತ ತಾಂತ್ರಿಕ ಸಬಲೀಕರಣಕ್ಕೆ 2024ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಯೋಜನೆಗಳನ್ನು ಜಾರಿ ಮಾಡಿದ್ದಾರೆ.


ಕೃಷಿ, ತೋಟಗಾರಿಕೆಯಾಗಿಕೆ, ಪಶುಸಂಗೋಪನೆ, ರೇಷ್ಮೆ , ಮೀನುಗಾರಿಕೆಗಳ ಸಂಯೋಜಿತ ಚಟುಚಟಿಕೆಗಳಿಗೆ ಉತ್ತೇಜನ. ಸುಸ್ಥಿರ ಕೃಷಿ ಅಭಿವೃದ್ಧಿಗೆ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ ಸಮಗ್ರ ಕೃಷಿಗೆ ಉತ್ತೇಜನ, ಹೊಸ ಕೃಷಿ ಪದ್ದತಿ ಹಾಗೂ  ತಂತ್ರಜ್ಞಾನಗಳ ರೈತರಿಗೆ ಅರಿವು ಮೂಡಿಸಲು ಕ್ರಮ, ಕೃಷಿ ಉತ್ಪನ್ನಗಳ ಸಂಗ್ರಹಣೆ ಮತ್ತು ಮೌಲ್ಯವರ್ಧನೆ ಕುರಿತು ಅರಿವು ಕಾರ್ಯಕ್ರಮಗಳು, ರೈತರ ಬೆಳೆಗೆ ಉತ್ತಮ ಬೆಳೆ ಕಲ್ಪಿಸಲು ಮಾರುಕಟ್ಟೆ ಸಂಪರ್ಕ.


ಕೃಷಿ ಮತ್ತು ಪೂರಕ ಚಟುವಟಿಕಡಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗು ಪರಿಣಾಮಕಾರಿ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿ ಅನುಷ್ಠಾನ. ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಪುö್ತ ಉತ್ತೇಜನಕ್ಕೆ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಪುö್ತ ನಿಗಮ ನಿಯಮಿತ(ಕೆಫೆಕ್) ಸಂಸ್ಥೆ ಬಲಪಡಿಸಲು 80 ಕೋಟಿ ರೂ ಒದಗಿಸಲಾಗುವುದು. ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್ ಗಳ ಸ್ಥಾಪನೆ..


ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೊಗಾನೆ, ವಿಜಯಪುರದ ಹಿಟ್ಟಿಂಗಿಆಳ ಹಾಗು ಬೆಂಗಳೂರು ಬಳಿಯ ಪೂಜೆನ ಹಳ್ಳಿಯಲ್ಲಿ ಸ್ಥಾಪನೆ. ನಶಿಸಿ ಹೋಗುತ್ತಿರುವ ಸ್ಥಳಿಯ ಬೆಳೆಗಳ ತಳಿಗಳ ಸಂಗ್ರಹಣೆಗೆ ಸಮುದಾಯ ಬೀಜ ಬ್ಯಾಂಕ್


ನಮ್ಮ ಮಿಲೇಟ್ ಎಂಬ ಹೊಸ ಯೋಜನೆ ಪ್ರಾರಂಭ. ಸಿರಿಧಾನ್ಯ ಕೈಗೆಟುಕುವ ದರದಲ್ಲಿ  ಮಾರಾಟ ಮಾಡಲು ಕ್ರಮ ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರೀತ ಪ್ರದೇಶಗಳಲ್ಲಿ ಮಣ್ಣು ಮತ್ತು ನೀರಿನ ಸಂರಕ್ಷಣೆ ಗಾಗಿ ಪ್ರತಿ ವರ್ಷ ಸಾವಿರದಂತೆ ಒಟ್ಟು 5 ಸಾವಿರ ಸಣ್ಣ ಸರೋವರ ನಿರ್ಮಾಣಕ್ಕೆ ಕ್ರಮ. ಬೆಂಗಳೂರಿನ ಕೃಷಿ ಇಲಾಖೆಯ ಖಏ ಶಾಲಾ ಕೃಷಿ ಕ್ಷೇತ್ರವನ್ನು ಕೃಷಿಗೆ ಸಂಬಂದಿಸಿದ ತಾಂತ್ರಿಕತೆಗಳನ್ನು ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುವುದು ರೈತರಿಗೆ ಕೀಟ, ರೋಗ ಮತ್ತು ಪೊಷಕಾಂಶ ನಿರ್ವಹಣೆಯ ಸಲಹೆ ನೀಡಲು ರಾಯಚೂರು ಕೃಷಿ ವಿವಿ ಅಭಿವೃದ್ಧಿ ಪಡಿಸಿರುವ e sಚಿಠಿ ತಂತ್ರಾಂಶದ ಸೌಲಭ್ಯಗಳನ್ನು ಎಲ್ಲಾ ರೈತರಿಗೂ ಪರಿಚಯಿಸಲು ಕ್ರಮ. ಕೃಷಿ ಇಲಾಖೆ ಅಧೀನದಲ್ಲಿ ಪ್ರತ್ಯೇಕ ಆಹಾರ ಸಂಸ್ಕರಣಾ ಆಯುಕ್ತಾಲಾಯ ರಚನೆ. ಇದರ ಮೂಲಕ ವಿವಿಧ ಇಲಾಖೆಗಳ ಅಡಿಯಲ್ಲಿ ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸುವುದು.


ಕೃಷಿಯಲ್ಲಿ ಉಪಗ್ರಹ ಚಿತ್ರ, ಸೆನ್ಸಾರ್ ಗಳ ಬಳಕೆ ಮತ್ತು ಮಿಷಿನ್ ಲರ್ನಿಂಗ್ ನಂತಹ ಅತ್ಯಾಧುನಿಕ ತಂತ್ರಜ್ಞಾನ ಗಳನ್ನು ಆಧಾರಿಸಿ ಉತ್ಪಾದಕತೆ ಮುನ್ಸೂಚನೆಯನ್ನು ಮಾಡಲು ದತ್ತಾಂಶ ವನ್ನು ಅಭಿವೃದ್ಧಿ ಪಡಿಸಲಾಗುವುದು..


ರೈತ ಉತ್ಪನ್ನ ಸಂಸ್ಥೆಗಳನ್ನು (FPO) ಇನ್ನಷ್ಟು ಸದೃಢ ಮತ್ತು ಸುಸ್ಥಿರಗೊಳಿಸಲು ಕೃಷಿ ವಲಯದ Startup ಗಳನ್ನು ಉತ್ತೇಜಿಸಲು ಕ್ರಮ. ಮಂಡ್ಯ ಜಿಲ್ಲೆಯ ವಿ.ಸಿ.ಫಾರಂನಲ್ಲಿ ಕೃಷಿ ವಿವಿ ಸ್ಥಾಪನೆ ಕುರಿತು ಪರಿಶೀಲಿಸಲು ಸಮಿತಿ ರಚನೆ ಮಾಡಲಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ‍್ಯಾಚ್ಯುಟಿ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚುಯುಟಿ ಸವಲತ್ತು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ತಿಳಿಸಿದ್ದಾರೆ. 


ಮಾಜಿ ದೇವದಾಸಿಯರಿಗೆ ಪ್ರಸ್ತುತ ನೀಡುತ್ತಿರುವ 1500ರೂ ಮಾಸಾಶನವನ್ನು 2000 ರೂ.ಗೆ ಹೆಚ್ಚಳ ಮಾಡಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರ ಬದುಕು ಉತ್ತಮ ಪಡಿಸಲು ಮೈತ್ರಿ ಯೋಜನೆಯಡಿ ನೀಡಲಾಗುತ್ತಿರುವ ಮಾಸಾಶನ 800ರೂನಿಂದ 1200ರೂಗೆ ಹೆಚ್ಚಳ ಮಾಡುವುದಗಾಗಿ ಘೋಷಿಸಿದ್ದಾರೆ.


ವಸತಿ ರಹಿತ ದೇವದಾಸಿಯರಿಗೆ ರಾಜೀವ್ ಗಾಂ ವಸತಿರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ.20 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ತರಬೇತಿ ಆಯೋಜಿಸಲು 10 ಕೋಟಿ ಬಜೆಟ್?ನಲ್ಲಿ ಮೀಸಲಿಡಲಾಗಿದೆ. ಅಂಗನವಾಡಿ ಚಟವಟಿಕೆ ಸುಗಮಕ್ಕಾಗಿ 90 ಕೋಟಿ ವೆಚ್ಚದಲ್ಲಿ 75,938 ಸ್ಟಾರ್ಟ್ ಫೋನ್‌ಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ನೀಡಲಾಗುವುದು.


ರಾಜ್ಯದಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ 1000 ಅಂಗನವಾಡಿಗೆ ಸ್ವಂತ ಕಟ್ಟಡ ನಿರ್ಮಿಸಲು 200 ಕೋಟಿ ಅನುದಾನ ಘೋಷಿಸಲಾಗಿದೆ. ಸೆರೆಬ್ರಲಿ ಪಾಲ್ಸಿ, ಸ್ನಾಯುವಿನ ಸಂಕೋಚನ, ಪಾರ್ಕಿಸನ್, ಮಲ್ಟಿಪಲ್, ಸ್ಕೇಲೊರೊಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆಗೆ ಪ್ರತಿ ತಿಂಗಳು 1000ರ ಪ್ರೋತ್ಸಾಹ ಧನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು ಕ್ಯಾಟ್ರಕ್ಟ್ ಶಸ್ತç ಚಿಕಿತ್ಸೆ ಶಿಬಿರ ಆಯೋಜನೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗೆ 86,423 ಕೋಟಿ ಮೀಸಲು ಇಡಲಾಗಿದೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ 54,617 ಕೋಟಿ ಮೀಸಲಿರಿಸಲಾಗಿದೆ.


ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು.

ಬಿಯರ್ ದರ ಹೆಚ್ಚಳ

ಬೆಂಗಳೂರು : ಬಿಯರ್ ಮೇಲಿನ ದರವನ್ನು ಹೆಚ್ಚಳ ಮಾಡಿರುವುದನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.


ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಅವರು ಮದ್ಯದ ಮೇಲಿನ ದರವನ್ನು ಹೆಚ್ಚಳ ಮಾಡಿರುವುದನ್ನು ತಿಳಿಸಿದರು.


ಈಗಾಗಲೇ ಹಲವು ಬಾರಿ ಬಜೆಟ್‌ನಲ್ಲಿ ಮದ್ಯದ ದರವನ್ನು ಹೆಚ್ಚಳ ಮಾಡುತ್ತಲೇ ಬರಲಾಗುತ್ತಿದೆ. ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ದರ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ ಬಿಯರ್ ಮೇಲಿನ ದರವನ್ನು ಹೆಚ್ಚಳ ಮಾಡುವ ಮೂಲಕ ಅನುದಾನವನ್ನು ಹೊಂದಾಣಿಕೆ ಮಾಡಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆ.


ಬಿಯರ್ ಮೇಲಿನ ದರವನ್ನು ಹೆಚ್ಚಳ ಮಾಡಲು ಅಬಕಾರಿ ಇಲಾಖೆ ಕಳೆದ ಜನವರಿಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಿತ್ತು. ಬಿಯರ್ ಮೇಲೆ 8ರಿಂದ 10 ರೂಪಾಯಿ ಹೆಚ್ಚಳ ಮಾಡಲು ಸರ್ಕಾರಕ್ಕೆ ಮನವಿ ಮಾಡಿತ್ತು.


ಬಿಯರ್ ಮೇಲಿನ ಅಬಕಾರಿ ತೆರಿಗೆ ಹೆಚ್ಚಳದ ಮೂಲಕ ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಇಲಾಖೆ ಮುಂದಾಗಿತ್ತು. 650 ಎಂ.ಎಲ್. ಬಾಟಲಿ ಬಿಯರ್‌ಗೆ 8ರಿಂದ 10 ರೂಪಾಯಿವರೆಗೆ ಏರಿಕೆ ಮಾಡಬೇಕು ಎಂದು ಬೇಡಿಕೆಯನ್ನು ಇಟ್ಟಿತ್ತು.


ಕರ್ನಾಟಕ ಅಬಕಾರಿ (ಸುಂಕಗಳು ಮತ್ತು ಶುಲ್ಕಗಳು) ನಿಯಮಕ್ಕೆ ತಿದ್ದುಪಡಿ 2024ರ ಕರಡನ್ನು ರಾಜ್ಯಪತ್ರದಲ್ಲಿ ಹೊರಡಿಸಲಾಗಿತ್ತು.

ಒಲಂಪಿಕ್‌ನಲ್ಲಿ ಚಿನ್ನ ತಂದವರಿಗೆ ರೂ.6 ಕೋಟಿ

ಬೆಂಗಳೂರು : ಒಲಂಪಿಕ್‌ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ರೂಪಾಯಿ, ಬೆಳ್ಳಿ ಪದಕ ಗೆದ್ದವರಿಗೆ 4 ಕೋಟಿ ರೂಪಾಯಿ ಹಾಗೂ ಕಂಚಿನ ಪದಕ ಗೆದ್ದವರಿಗೆ 3 ಕೋಟಿ ಪ್ರೋತ್ಸಾಹ ಧನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 


ಶುಕ್ರವಾರ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದ್ದು, ಕಾಮನ್ ವೆಲ್ತ್ಗೇಮ್‌ನಲ್ಲಿ ಪದಕ ಗೆದ್ದವರಿಗೂ ಪ್ರೋತ್ಸಾಹ ಧನ ನೀಡುವುದಾಗಿ ತಿಳಿಸಿದ್ದಾರೆ.


ಕಾಮನ್ ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 35 ಲಕ್ಷ ರೂಪಾಯಿ, ಬೆಳ್ಳಿ ಪದಕ ಗೆದ್ದವರಿಗೆ 25 ಲಕ್ಷ ರೂಪಾಯಿ ಹಾಗೂ ಕಂಚಿನ ಪದಕ ಗೆದ್ದವರಿಗೆ 15 ಲಕ್ಷ ಬಹುಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಾಡಿಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲೂ ಶೇಕಡಾ 2 ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು ಎಂದು ಹೇಳಿದ್ದಾರೆ.


ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಮ ಸಮುಚ್ಛಯವ ಒಳಗೊಂಡ ಕ್ರೀಡಾ ನಗರವನ್ನು ಸಾರ್ವಜನಿಕರ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡಲಾಗುವುದು ಎಂದರು. ರಾಜ್ಯದ ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಒಟ್ಟಾರೆ 12 ಕೋಟಿ ರೂ. ಅನುದಾನ, ರಾಜ್ಯದ ಕ್ರೀಡಾಪಟುಗಳಿಗೆ ಅತ್ಯುನ್ನತ ಸ್ಪರ್ಧಾ ಅವಕಾಶ ಒದಗಿಸಲು ಪ್ರತಿ ವರ್ಷ ಒಂದು ರಾಜ್ಯ ಮಟ್ಟದ ಒಲಿಂಪಿಕ್ಸ್ ಮತ್ತು 14ವರ್ಷ ವಯೋಮಾನದ ಒಳಗಿನವರಿಗೆ ಮಿನಿ ಒಲಿಂಪಿಕ್ಸ್ ಅಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ.


ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಮಯದಲ್ಲಿ ಗಾಯಗೊಂಡಲ್ಲಿ ಅವರ ಚಿಕಿತ್ಸೆಗೆ ನೆರವಾಗಲು ಆರೋಗ್ಯ ವಿಮೆ ಸೌಲಭ್ಯವನ್ನು ರಾಜ್ಯ ಸರ್ಕಾರದಿಂದ ಒದಗಿಸಲಾವುದು, ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

28,600 ಕೋಟಿ ರೂ. ಗೃಹಲಕ್ಷ್ಮಿ

ಯೋಜನೆಗೆ ಅನುದಾನ

ಬೆಂಗಳೂರು : ಪ್ರಸಕ್ತ ಸಾಲಿನ ಮುಂಗಡಪತ್ರದಲ್ಲಿ ಗೃಹಲಕ್ಷ್ಮಿ ಯೋಜನೆಗಾಗಿ 28,608 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಶುಕ್ರವಾರ ತಿಳಿಸಿದರು.


ಗೃಹಲಕ್ಷ್ಮಿ ಯೋಜನೆ ಜಾರಿಯಿಂದ ಮಹಿಳೆಯರ ಆದಾಯ ಹೆಚ್ಚಳದ ಜತೆಗೆ ಕುಟುಂಬ ನಿರ್ವಹಣೆಯಲ್ಲಿ ತೊಡಗಿಸಿಕೊಳ್ಳಲು ಈ ಯೋಜನೆ ಅವಕಾಶವಾಗಲಿದೆ. ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ನೀಡಲಾಗುತ್ತಿದ್ದು, 1.33ಕೋಟಿ ಎಪಿಎಲ್-ಬಿಪಿಎಲ್, ಎಎವೈ ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಈಗಾಗಲೇ 1.17 ಕೋಟಿ ರೂ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊAಡಿದ್ದು, 11,726 ಕೋಟಿ ರೂ.ಗಳನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ ಎಂದರು.


ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ತರಬೇತಿ ಕಾರ್ಯಾಗಾರ ಆಯೋಜನೆಗೆ 10 ಕೋಟಿ ರೂ.ಗಳನ್ನು ಒದಗಿಸಲಾಗಿದ್ದು,ಇದರಿಂದ ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ ಅನುಕೂಲವಾಗಲಿದೆ.ಅಂಗನವಾಡಿ ಚಟುವಟಿಕೆಗಳ ಸುಗಮಕ್ಕಾಗಿ 90 ಕೋಟಿ ರೂ.ವೆಚ್ಚದಲ್ಲಿ 75.938 ಸ್ಮಾರ್ಟ್ ಫೋನ್‌ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಪೂರೈಸಲು ಒದಗಿಸಲಾಗುತ್ತದೆ. ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ 1 ಸಾವಿರ ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಾಣಕ್ಕೆ ಆಧ್ಯತೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 200 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಅದೇ ರೀತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುತ್ತಿದೆ.


ಗಂಭೀರ ಕಾಯಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1 ಸಾವಿರ ರೂ. ಪ್ರೋತ್ಸಾಹ ಧನ ಆರೋಗ್ಯ ಇಲಾಖೆಯ ಸಮನ್ವಯದೊಂದಿಗೆ ಎಲ್ಲ ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತಿವರ್ಷ 2 ಕಣ್ಣಿನ ಪೊರೆ ಚಿಕಿತ್ಸಾ ಶಿಬಿರಗಳನ್ನು ಆಯೋಜಿಸಲು ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ.
ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು 2 ಕೋಟಿ ರೂ ವೆಚ್ಚದಲ್ಲಿ ಪ್ರಾರಂಭಿಸಲಾಗುತ್ತಿದೆ.


ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಇನ್ನಷ್ಟು ಹಸನಾಗಿಸಲು ಮೈತ್ರಿ ಯೋಜನೆಯಡಿ ನೀಡುವ ಮಾಸಾಶನ 800 ರೂ.ಗಳಿಂದ 1,500 ರೂ.ಗಳಿಗೆ ಹೆಚ್ಚಿಸಲಾಗುತ್ತದೆ. ಇದರ ಜತೆಗೆ ಗುರುತಿಸುವಿಕೆ ಮತ್ತು ಗುರುತಿನ ಚೀಟಿ ಪ್ರಕ್ರಿಯೆ ಸರಳೀಕರಣ ಮಾಡಲಾಗುತ್ತಿದೆ.

ಯಾವ ಇಲಾಖೆಗೆ ಎಷ್ಟು ಅನುದಾನ? 

ಬೆಂಗಳೂರು : 2024-2025ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಬಂಪರ್ ಅನುದಾನ ಘೋಷಣೆ ಮಾಡಿದ್ದಾರೆ. 


ವಲಯವಾರು ವಿಂಗಡಣೆ ಮಾಡಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಿದ್ದು, ಯಾವ ವಲಯಕ್ಕೆ ಎಷ್ಟು ಅನುದಾನ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.

ಶಿಕ್ಷಣ -44,422 ಕೋಟಿ ರೂ.
ಮಹಿಳಾ ಮತ್ತು ಮಕ್ಕಳ ಇಲಾಖೆ -34,406 ಕೋಟಿ ರೂ.
ಇಂಧನ - 23,159 ಕೋಟಿ ರೂ.
ಗ್ರಾಮೀಣಾಭಿವೃದ್ಧಿ - 21,160 ಕೋಟಿ ರೂ.
ಒಳಾಡಳಿತ/ಸಾರಿಗೆ - 19,777 ಕೋಟಿ ರೂ.
ನೀರಾವರಿ - 19,179 ಕೋಟಿ ರೂ.
ನಗರಾಭಿವೃದ್ಧಿ- 18,155 ಕೋಟಿ ರೂ.
ಕಂದಾಯ- 16,170 ಕೋಟಿ ರೂ.
ಆರೋಗ್ಯ - 15,145 ಕೋಟಿ ರೂ.
ಸಮಾಜಕಲ್ಯಾಣ - 13,334 ಕೋಟಿ ರೂ.
ಲೋಕೋಪಯೋಗಿ -10,424 ಕೋಟಿ ರೂ.
ಆಹಾರ ಇಲಾಖೆ - 9,963 ಕೋಟಿ ರೂ.
ಕೃಷಿ, ತೋಟಗಾರಿಕೆ - 6,688 ಕೋಟಿ ರೂ.
ಪಶು ಸಂಗೋಪನೆ, ಮೀನುಗಾರಿಕೆ- 3,307 ಕೋಟಿ ರೂ.
ಇತರೆ- 1,24,593 ಕೋಟಿ ರೂ.


ಬಡ್ಡಿ ರಹಿತ ಸಾಲ 3 ಲಕ್ಷದಿಂದ 5 ಲಕ್ಷದವರೆಗೆ ಏರಿಕೆ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ನಾಡಿನ ರೈತರಿಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಂಘಗಳ ಮೂಲಕ ನೀಡುವ ಬಡ್ಡಿ ರಹಿತ ಸಾಲದ ಮೊತ್ತವನ್ನು 3 ಲಕ್ಷದಿಂದ 5 ಲಕ್ಷದವರೆಗೆ ಏರಿಕೆ ಮಾಡಿದ್ದಾರೆ. ಜೊತೆಗೆ ಮಧ್ಯಮ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ವದ ತೀರ್ಮಾನವನ್ನು ಘೋಷಿಸಿದ್ದಾರೆ.


ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27 ಸಾವಿರ ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ 50 ಸಾವಿರ ರೂ.ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿ 21 ಲಕ್ಷ ರೈತರಿಗೆ 7,631 ಕೋಟಿ ರೂ. ಬೆಳೆ ಸಾಲ ಮನ್ನ ಮಾಡಲಾಗಿತ್ತು. ಡಿಸಿಸಿ ಬ್ಯಾಂಕ್‌ಗಳಿಗೆ ಸುಮಾರು 132 ಕೋಟಿ ಬಿಡುಗಡೆಯಾಗದ ಪರಿಣಾಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಡಿಸಿಸಿ ಬ್ಯಾಂಕ್‌ಗಳಿಗೆ ಬಾಕಿ ಇರುವ 132 ಕೋಟಿ ಹಣವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.


ಡಿಸಿಸಿ, ಮತ್ತು ಪಿಕಾರ್ಡ್ ಬ್ಯಾಂಕ್‌ಗಳ ಮಧ್ಯಮ ಅವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮಾಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಇದರಿಂದ ಒಟ್ಟು 57 ಸಾವಿರ ರೈತರು ಇದರ ಲಾಭವನ್ನು ಪಡೆಯಲಿದ್ದಾರೆ. ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕ್‌ಗಳಿಗೆ 496 ಕೋಟಿ ಸಾಲ ಮರುಪಾವತಿಯಾಗುವ ನಿರೀಕ್ಷೆಯಿದ್ದು, ಬ್ಯಾಂಕ್‌ಗಳ ಆರ್ಥಿಕ ಪರಿಸ್ಥಿತಿಯಲ್ಲಿ ಗಣನೀಯ ಸುಧಾರಣೆಯಾಗಲಿದೆ ಎಂಬ ಆಶಾಭಾವನೆಯನ್ನು ಅವರು ಇಟ್ಟುಕೊಂಡಿದ್ದಾರೆ.


ಮಾಧ್ಯಮಿಕ ಫೆಡರಲ್ ಮತ್ತು ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಮಹಿಳೆಯರಿಗೆ ಮೀಸಲಾತಿ ತರಲು ಹಾಲಿ ಇರುವ ನಿಯಮಗಳಿಗೆ ತಿದ್ದುಪಡಿಸಲಾಗುವುದು ಎಂದು ಹೇಳಿದ್ದಾರೆ. ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಾರಿ, ಎಪಿಎಂಸಿಗಳಲ್ಲಿ 50 ಕೋಟಿ ಹಾಗೂ ರಾಯಚೂರು ಮತ್ತು ಮೈಸೂರಿನಲ್ಲಿ 40 ಕೋಟಿ ವೆಚ್ಚದಲ್ಲಿ ಶೀತಲ ಗೃಹಗಳನ್ನು ನಿರ್ಮಿಸುವುದಾಗಿ ಹೇಳಿದ್ದಾರೆ.


ರಾಯಚೂರಿನಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆಗಾಗಿ 25 ಕೋಟಿ, ರಾಣಿಬೆನ್ನೂರಿನಲ್ಲಿ 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 272 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಆರ್ಥಿಕವಾಗಿ ದುರ್ಬಲವಾಗಿರುವ ಮಾರುಕಟ್ಟೆ ಸಮಿತಿಗಳಿಗೆ ಅನುದಾನ ಒದಗಿಸಲು ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಸಮಿತಿಗಳಿಂದ ವಂತಿಕೆಯನ್ನು ಪಡೆಯುವ ಮೂಲಕ ಮಾರಕಟ್ಟೆ ಅಭಿವೃದ್ಧಿ ಸಹಾಯನಿಧಿ ಸ್ಥಾಪಿಸಲು ಕಾನೂನು ರಚನೆ ಜೊತೆಗೆ ಬೆಂಬಲ ಯೋಜನೆ ಜಾರಿಗೆ ತರುವ ಶಾಸನಾತ್ಮಕ ಬೆಂಬಲ ನೀಡಲು ಕ್ರಮ ಜರುಗಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ.

ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಇನ್ನು ಮುಂದೆ

ಆಯುಕ್ತಾಲಯ

ಬೆಂಗಳೂರು: ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 


ವಿಧಾನಸೌಧದಲ್ಲಿ 2024-25ನೇ ಸಾಲಿನ ಬಜೆಟ್ ಮಂಡಿಸಿದ ಅವರು, ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯವೆಂದು ವ್ಯಾಪಕ ಬೆಳವಣಿಗೆ ಹೊಂದಿದ್ದು, ಇಲಾಖೆ ಕಾರ್ಯ ನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ಕಾರಣಕ್ಕಾಗಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುತ್ತದೆ ಎಂದು ತಿಳಿಸಿದರು.


ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ 350 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಹೇಳಿದರು. 


ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 350 ಕೋಟಿ, ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥಯದ ನೆಪ್ರೊ ಯೂರಾಲಜಿ ಆಸ್ಪತ್ರೆ, 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲಾಗುವುದು ಎಂದು ತಿಳಿಸಿದರು.


ಕಲಬುರಗಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ತಾಂತ್ರಿಕ ನೆರವಿನೊಂದಿಗೆ ಸ್ಥಾಪನೆ, ಗದಗ, ಕೊಪ್ಪಳ ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ. ಅನುದಾನ ಒದಗಿಸಿರುವುದಾಗಿ ಹೇಳಿದರು.


ಬೆಂಗಳೂರಿನ ನೆಪ್ರೊ ಯೂರಾಲಜಿ ಸಂಸ್ಥೆಯ ಶಸ್ತç ಚಿಕಿತ್ಸೆ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೊಟಿಕ್ ಯಂತ್ರದ ಮೂಲಕ ಉತ್ತಮ ಚಿಕಿತ್ಸೆ ನೀಡಲು ಕ್ರಮ. ವೈದ್ಯಕೀಯ ಕಾಲೇಜಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 ಮಾಡೂಲರ್ ಒಟಿಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.


ಗದಗ ವೈದ್ಯಕೀಯ ಸಂಸ್ಥೆಯಲ್ಲಿ ಕ್ಯಾಥ್ಲಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯೂನಿಟ್ ಪ್ರಾರಂಭ, ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸಂಸ್ಥೆಗಳಲ್ಲಿ 64 ಅನೇಸ್ತೇಷಿಯಾ ವರ್ಕ್ ಸ್ಟೇಷನ್‌ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಕೆ, ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿರುವ ಹ್ಯೂಮನ್ ಮಿಲ್ಕ್ ಬ್ಯಾಂಕ್‌ಗಳನ್ನು ಇನ್ನು ಮುಂದೆ ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದರು.


ಕೊಡಗು ವೈದ್ಯಕೀಯ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗ, ಸೋಂಕುಗಳನ್ನು ಪತ್ತೆಹಚ್ಚಲು ವೈರಲ್ ರಿಸರ್ಚ್ ಮತ್ತು ಡಯಾಗ್ನಸ್ಟಿಕ್ ಲ್ಯಾಬರೋಟರಿ ನಿರ್ಮಾಣ, ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಗತ್ಯವಿರುವ ಹೊಸ ವೈದ್ಯಕೀಯ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ, ವಸತಿ ಗೃಹ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.


ಇನ್ನು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆಆರ್ ಆಸ್ಪತ್ರೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣ ಮಾಡುವುದಾಗಿ ಅವರು ಹೇಳಿದ್ದಾರೆ.

ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್, 


ನಿರಂತರ ನೀರು: ರೂ. 25 ಕೋಟಿ ಮೀಸಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಆಯವ್ಯಯದಲ್ಲಿ ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನಿರಂತರ ನೀರಿನ ಸೌಲಭ್ಯಕ್ಕೆ 25 ಕೋಟಿ ರೂ. ಮೀಸಲಿಟ್ಟಿದ್ದಾರೆ. ಹಾಗೇ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 20 ಸಾವಿರ ವಿದ್ಯಾರ್ಥಿಗಳಿಗೆ ನೀಟ್ ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮತ್ತು ಶಾಲಾ-ಕಾಲೇಜು ಕೊಠಡಿ, ದುರಸ್ತಿ, ಶೌಚಾಲಯ ನಿರ್ಮಾಣಕ್ಕೆ 850 ಕೋಟಿ ರೂಪಾಯಿಯನ್ನು ಮೀಸಲು ಇಡಲಾಗಿದೆ.


ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತದೆ. ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ  ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುತ್ತದೆ.


ಶೀಘ್ರದಲ್ಲೆ ಶಿಕ್ಷಕರು, ಉಪನ್ಯಾಸಕರ ನೇಮಕ: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು, ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ ಅಥವಾ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತದೆ.


ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು 500 ಕೋಟಿ ರೂ. ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಇದಕ್ಕಾಗಿ ಸರ್ಕಾರದಿಂದ 100 ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಜೊತೆಗೆ ಸಿ.ಎಸ್.ಆರ್. ನಿಧಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿಗೆ ಮೂಲಕ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲಾಗುತ್ತದೆ.


ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ.

ರೂ. 36 ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪಥ ನಿರ್ಮಾಣ


ತುಮಕೂರಿನಲ್ಲಿ ರೂ. 10 ಕೋಟಿ ವೆಚ್ಚದಲ್ಲಿ ಸೀಜಿಂಗ್ ಯಾರ್ಡ್

ಬೆಂಗಳೂರು: ರಾಜ್ಯದ ಸಾರಿಗೆ ಸೇವೆಗೆ ಇಡೀ ದೇಶದಲ್ಲಿ ಉತ್ತಮ ಹೆಸರಿದ್ದು, ಅದನ್ನು ಮತ್ತಷ್ಟು ಉನ್ನತೀಕರಿಸುವ ದೃಷ್ಟಿಯಿಂದ ಉಡುಪಿ, ಚಿಕ್ಕಬಳ್ಳಾಪುರ, ನೆಲಮಂಗಲ, ಮಡಿಕೇರಿ, ಮಧುಗಿರಿ ಮತ್ತು ಹುಣಸೂರಿನಲ್ಲಿ ಅಂದಾಜು 36 ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳು ಹಾಗೂ ದೇವನಹಳ್ಳಿ, ತುಮಕೂರಿನಲ್ಲಿ ರೂ. 10 ಕೋಟಿ ವೆಚ್ಚದಲ್ಲಿ ಸೀಜಿಂಗ್ ಯಾರ್ಡ್ಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಯವರು ತಿಳಿಸಿದ್ದಾರೆ.

2024-25ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳೊಳಗೆ ಜಾರಿಗೊಳಿಸಿದ ಶಕ್ತಿ ಯೋಜನೆಯಡಿ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಬಹಳಷ್ಟು ಅನುಕೂಲವಾಗಿದೆ. ಈವರೆಗೆ 165 ಕೋಟಿ ಹೆಚ್ಚು ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದು, ಅದಕ್ಕೆ ಮೂರು ಸಾವಿರ ಕೋಟಿ ರೂ. ಒದಗಿಸಲಾಗಿದೆ ಎಂದರು.

ಅರ್ಹತಾ ಪತ್ರ ನವೀಕರಣಕ್ಕೆ ಬರುವಂತಹ ಎಲ್ಲಾ ಸಾರಿಗೆ ವಾಹನಗಳಿಗೆ ಅರ್ಹತಾ ಪರೀಕ್ಷೆ ಕೈಗೊಳ್ಳಲು 32 ಸ್ಥಳಗಳಲ್ಲಿ ಸಾರ್ವಜನಿಕ ಖಾಸಗೀ ಸಹಭಾಗಿತ್ವದಲ್ಲಿ ಸ್ವಯಂ ಚಾಲಿತ ಪರೀಕ್ಷಾ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಸಾರಿಗೆ ಇಲಾಖೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಾಹನಗಳ ದಾಖಲಾತಿಗಳ ಡಿಜಿಟಲೀಕರಣಕ್ಕಾಗಿ ಯೋಜನೆಯನ್ನು ಜಾರಿಗೊಳಿಸಲಾಗುವುದು.

ಪ್ರಸಕ್ತ ಸಾಲಿನಲ್ಲಿ ಪ್ರಾಯೋಗಿಕವಾಗಿ ಬೆಂಗಳೂರು ಕೇಂದ್ರ, ಬೆಳಗಾವಿ, ಮಂಗಳೂರು ಹಾಗೂ ಭಾಲ್ಕಿ ಕಚೇರಿಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು.


ಬೆಂಗಳೂರು ಒತ್ತಡ ತಗ್ಗಿಸಲು 10 ಮಹಾನಗರಗಳ ಅಭಿವೃದ್ಧಿ 

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಮೇಲಿನ ಒತ್ತಡ ತಗ್ಗಿಸುವ ಉದ್ದೇಶದಿಂದ ರಾಜ್ಯದ ಇತರೆಡೆಗಳಲ್ಲಿ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಭಾಷಣದಲ್ಲಿ ಅವರು, 10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಎರಡು ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆಜಿಎಫ್, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನ ಬಿಐಇಸಿಯಿಂದ ತುಮಕೂರಿನವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿಯವರೆಗೆ ಸಾರ್ವಜನಿಕ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆ ವಿಸ್ತರಿಸುವ ಬಗ್ಗೆ ಕಾರ್ಯಸಾಧ್ಯತಾ ವರದಿ ತಯಾರಿಸಲಾಗುವುದು. ಮೈಸೂರಿನಲ್ಲಿ ಹೆಚ್ಚುತ್ತಿರುವ ಜನದಟ್ಟಣೆ ತಪ್ಪಿಸಲು ಪೆರಿಫೆರಲ್ ರಿಂಗ್ ರಸ್ತೆಯನ್ನು ಪಿಪಿಪಿ ಅಥವಾ ಟೌನ್ ಪ್ಲಾನಿಂಗ್ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ತಯಾರಿಸಲಾಗುವುದು ಎಂದು ಅವರು ವಿವರಣೆ ನೀಡಿದ್ದಾರೆ.

ಆಯ್ದ ಉಪ ನೋಂದಣಾಧಿಕಾರಿ ಕಛೇರಿ ಭಾನುವಾರವೂ ಕಾರ್ಯ

ಬೆಂಗಳೂರು: ಭಾನುವಾರ ಸಹ ಆಯ್ದ ಉಪ ನೋಂದಣಾಧಿಕಾರಿ ಕಛೇರಿಯನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕಡ್ಡಾಯವಾಗಿ ನೋಂದಾಯಿಸಬಹುದಾದ ಆಯ್ದ ದಾಖಲೆಗಳ ಇ-ನೋಂದಣಿಯನ್ನು ಸಬ್ ರಿಜಿಸ್ಟಾçರ್ ಕಛೇರಿಗಳಲ್ಲಿ ಎರಡು ಪಕ್ಷಗಳ ಉಪಸ್ಥಿತಿಯಿಲ್ಲದೆ ನೋಂದಣಿ ಮಾಡಲು ಕ್ರಮ. Anytime Anywhere Registration ಕಾರ್ಯಕ್ರಮವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲು ನೋಂದಣಿ ಮತ್ತು ಮುದ್ರಾಂಕ ಕಾಯ್ದೆಗಳಿಗೆ ತಿದ್ದುಪಡಿ ಮಾಡಲಾಗುವುದು.

ಸ್ಥಿರಾಸ್ತಿ ನೋಂದಣಿಗೆ ಸಂಬಂಧಿಸಿದ ಎಲ್ಲಾ ತಂತ್ರಾಂಶಗಳ ಏಕೀಕರಣ. ನಾಗರಿಕರ ಅನುಕೂಲಕ್ಕಾಗಿ ಭಾನುವಾರ ಸಹ ಆಯ್ದ ಉಪ ನೋಂದಣಾಧಿಕಾರಿ ಕಛೇರಿಯನ್ನು ತೆರೆಯಲಾಗುವುದು.  ನಾಗರಿಕರು ದೃಢೀಕೃತ ಪ್ರತಿಗಳನ್ನು ಪಡೆಯುವಲ್ಲಿನ ವಿಳಂಬವನ್ನು ತಗ್ಗಿಸಲು ಕೇಂದ್ರೀಕೃತ ವರ್ಚುವಲ್ ವಿತರಣಾ ವ್ಯವಸ್ಥೆಯ ಮೂಲಕ ದಾಖಲೆಗಳ ವಿತರಣೆಯನ್ನು ಸ್ವಯಂಚಾಲಿತಗೊಳಿಸಲಾಗುವುದು. ಪಾರದರ್ಶಕವಾಗಿ ಯಾವುದೇ ರೀತಿಯ ತೊಂದರೆಗಳಿಲ್ಲದೆ ನೋಂದಣಿ ಕೆಲಸವನ್ನು ಸಾರ್ವಜನಿಕರಿಗೆ ತಲುಪಿಸಲು ನಿಯಮಗಳಿಗೆ ಅಗತ್ಯ ತಿದ್ದುಪಡಿಗಳನ್ನು ತರಲಾಗುವುದು.

‘ ಬಜೆಟ್- ಸಮತೋಲನ, ಆರ್ಥಿಕ ಶಿಸ್ತು’ ಗೃಹ ಸಚಿವಡಾ. ಜಿ.ಪರಮೇಶ್ವರ ಬಣ್ಣನೆ

ಬೆಂಗಳೂರು: ರಾಜ್ಯದ ಬಡ, ಮಧ್ಯಮ ವರ್ಗದಜನರ ಹಾಗೂ ಮಹಿಳೆಯರು, ಯುವಕರು, ಕೃಷಿಕರು, ಕ್ರೀಡಾಪಟುಗಳು ಸೇರಿದಂತೆ ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಅಭಿಪ್ರಾಯಪಟ್ಟಿದ್ದಾರೆ.

ಬಜೆಟ್‌ ಕುರಿತು ಪ್ರತಿಕ್ರಿಯೆ ನೀಡಿರುವ ಅವರು,  ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷವು ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ಇಡೀದೇಶವೇ ಕರ್ನಾಟಕದ ಕಡೆ ನೋಡುವಂತೆ ಮಾಡಿದ್ದರು. ಪ್ರಸಕ್ತ ಸಾಲಿನಲ್ಲಿಯೂ ಸಹ ರಾಜ್ಯದ ಜನರ ನಿರೀಕ್ಷೆಯಂತೆ ಆಶಾದಾಯಕ ಬಜೆಟ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುವುದಿಲ್ಲ ಎಂಬುದನ್ನು ಸ್ಪಷ್ಟ ಸಂದೇಶ ಸಾರಿದ್ದಾರೆ. ಈ ಮೂಲಕ ವಿಪಕ್ಷದವರ ಆರೋಪಗಳಿಗೆ ದಿಟ್ಟ ಉತ್ತರಕೊಟ್ಟಿದ್ದು, ರಾಜ್ಯದ ಅಭಿವೃದ್ಧಿ ವೇಗ ಹೆಚ್ಚಿಸಿರುವುದು ಹಾಗೂ  ಅಖಂಡ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯನ್ನು ಮತ್ತೊಮ್ಮೆ ಎತ್ತಿ ಹಿಡಿದಿರುವುದನ್ನು ಬಜೆಟ್‌ನಲ್ಲಿ ಕಾಣಬಹುದು ಎಂದರು.  

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಇಲಾಖೆಗಳ ನಿರೀಕ್ಷೆಯಂತೆ ಸಮತೋಲನವಾಗಿ ಹಣ ಹಂಚಿಕೆ ಮಾಡಿ, ಆರ್ಥಿಕ ಶಿಸ್ತನ್ನು ಕಾಪಾಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯವನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಿರುವುದರಿಂದ ವಿಪಕ್ಷದವರು ಮುನಿಸಿಕೊಂಡು ಬಾಯ್ಕಟ್ ಮಾಡಿದ್ದಾರೆ. ಇದನ್ನು ಗಮನಿಸಿರುವ ರಾಜ್ಯದ ಜನ, ಮುಂದಿನ ದಿನಗಳಲ್ಲಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಸೈಬರ್ ವಂಚಕರಿಗೆ ಬಿಸಿ


ಕಿಡಿಗೇಡಿಗಳು ಸಮಾಜದಲ್ಲಿ ಸುಳ್ಳು ಸುದ್ದಿಗಳನ್ನು ಹರಡಿಸಿ ಸಾರ್ವಜನಿಕರಲ್ಲಿಅಭದ್ರತೆ ಮತ್ತು ಭಯವನ್ನುಉಂಟು ಮಾಡಲುಯತ್ನಿಸುತ್ತಿದ್ದಾರೆ. ಅಂತವರ ವಿರುದ್ಧ ದಿಟ್ಟಕ್ರಮ ಕೈಗೊಳ್ಳಲು ಐಟಿಬಿಟಿಇಲಾಖೆಯ ಸಹಯೋಗದಲ್ಲಿ ಸತ್ಯತಪಾಸಣಾ ತಂಡಗಳ£ ರಚಿಸಲು ಮತ್ತು ಒಳಾಡಳಿತ ಇಲಾಖೆಯಲ್ಲಿಒಂದು ವಿಶೇಷ ಕೋಶವನ್ನು ರಚಿಸಿ ಅದಕ್ಕೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ಅಧಿಕಾರ ನೀಡಿರುವುದುಅಭಿನಂದನೀಯ ವಿಚಾರ.

ಡೀಪ್‌ಫೇಕ್ ಮತ್ತಿತರ ಸೈಬರ್‌ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಗ್ಧ ಸಾರ್ವಜನಿಕರನ್ನು ವಂಚಿಸುವಕೃತ್ಯಎಸಗುವವರ ವಿರುದ್ಧತನಿಖೆ ನಡೆಸಿ ಪರಿಣಾಮಕಾರಿಕ್ರಮ ತೆಗೆದುಕೊಳ್ಳುವ ಉದ್ದೇಶದಿಂದರಾಜ್ಯದಲ್ಲಿ ಸೈಬರ್‌ಕ್ರೆö ವಿಭಾಗವನ್ನು ಬಲಪಡಿಸಲುಒಟ್ಟು 43 ಸಿಇಎನ್ (ಸೈಬರ್, ಎಕಾನಾಮಿಕ್, ನಾರ್ಕೋಟಿಕ್ಸ್) ಪೊಲೀಸ್ ಠಾಣೆಗಳನ್ನು ಉನ್ನತೀಕರಿಸಲುಒತ್ತು ನೀಡಿರುವುದು ಶ್ಲಾಘನೀಯ. ಇದರಿಂದ ಸೈಬರ್ ಅಪರಾಧಗಳನ್ನು ಮಟ್ಟ ಹಾಕಲು ಸಹಕಾರಿಯಾಗಲಿದೆ. ಅಧಿಕಾರಿ ಮತ್ತು ಸಿಬ್ಬಂದಿಗಳು ಚುರುಕಾಗಿ ಕೆಲಸ ಮಾಡಲು ಸಹಾಯವಾಗಲಿದೆಎಂದು ಹೇಳಿದ್ದಾರೆ.

ಪೊಲೀಸ್ ಕಾಳಜಿ:- ಈ ಹಿಂದೆ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರವು ಪೊಲೀಸ್ ಗೃಹ ಯೋಜನೆಯನ್ನು ಜಾರಿಗೆ ತಂದಿತ್ತು. ಪೊಲೀಸ್ ಗೃಹ 2025 ಯೋಜನೆಯಡಿ ಈವರೆಗೆ 800  ಕೋಟಿ ರೂ.ಗಳ ವೆಚ್ಚದಲ್ಲಿ 1,128 ವಸತಿ ಗೃಹಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಲಾಗಿದೆ. 2,956 ವಸತಿ ಗೃಹಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆಗೆ 2024-25ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಿರುವುದು ಇಲಾಖೆಯ ಸಿಬ್ಬಂದಿಗಳ ಮೇಲಿರುವ ಕಾಳಜಿಯನ್ನು ತೋರಿಸುತ್ತದೆ. ಇದು ಅತ್ಯಂತ ಅಭಿನಂದನೀಯ ಎಂದಿದ್ದಾರೆ. 

ತಾಂತ್ರಿಕ ಬಲವರ್ಧನೆ:-


ಕಟ್ಟಡರಹಿತ ಪೊಲೀಸ್‌ಠಾಣೆ ಮತ್ತು ಕಚೇರಿಗಳಿಗೆ 30 ಕೋಟಿ ರೂ.ಗಳ ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಅನುವು ಮಾಡಿಕೊಡಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯಗಳ (ಫೊರೆನ್ಸಿಕ್ ಸೈನ್ಸ್ ಲ್ಯಾಬ್)  ಮೊಬೈಲ್ ಫೊರೆನ್ಸಿಕ್, ಆಡಿಯೋ ಮತ್ತು ವೀಡಿಯೋ ವಿಭಾಗಗಳನ್ನು ಬಲಪಡಿಸಲು 10 ಕೋಟಿ ರೂ.ಗಳ ವೆಚ್ಚದಲ್ಲಿ ಅಗತ್ಯ ಉಪಕರಣಗಳನ್ನು ಮತ್ತು ತಂತ್ರಾಂಶಗಳನ್ನು ಒದಗಿಸಲಾಗಿದೆ. ಅಲ್ಲದೆಡ, ರಾಜ್ಯದಎಲ್ಲ ಕಾರಾಗೃಹಗಳ ಸುಗಮ ಆಡಳಿತ ಮತ್ತು ಭದ್ರತೆಗಾಗಿ 5 ಕೋಟಿರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (Artificial Intelligence) ತಂತ್ರಾಂಶ, ಬ್ಯಾಗೇಜ್ ಸ್ಕಾನರ್ ಮುಂತಾದ ಆಧುನಿಕ ಉಪಕರಣಗಳ ಖರೀದಿಸಲು ಒತ್ತು ನೀಡಿರುವುದರಿಂದ ಪೊಲೀಸರ ಕಾರ್ಯಕ್ಷಮತೆ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸದಾಗಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ, ಅಗ್ನಿಶಾಮಕ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು  The Karnataka fire force act 1964 ರನ್ವಯ ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆಯೊಂದಿಗೆ ಶೇ.1ರ ದರದಲ್ಲಿ FIre cess  ವಿಧಿಸುತ್ತಿರುವುದು ಸೂಕ್ತ ನಿರ್ಧಾರ. ಬೆಂಗಳೂರಿನ ಪೊಲೀಸ್ ಸುಲಿವನ್ ಮೈದಾನದಲ್ಲಿ 3 ಕೋಟಿರೂ. ವೆಚ್ಚದಲ್ಲಿ ಆಸ್ಟೊçÃಟರ್ಫ್ ಹಾಕಿ ಪ್ರಾಂಗಣವನ್ನು ನಿರ್ಮಿಸಲುಘೋಷಣೆ ಮಾಡಿರುವುದು ಸ್ವಾಗತಾರ್ಹಎಂದು ಹೇಳಿದ್ದಾರೆ.

ತುಮಕೂರುಅಭಿವೃದ್ಧಿಗೆಒತ್ತು

ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ತುಮಕೂರು ಮಹಾನಗರಕ್ಕೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು, ವಸಂತನರಸಾಪುರದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣಕ್ಕೆ ಒತ್ತು ನೀಡಿರುವುದು. ಬೆಂಗಳೂರಿನಿಂದ ತುಮಕೂರುವರೆಗೆ ಮೆಟ್ರೋರೈಲು ವಿಸ್ತರಣೆಗೆ ಕಾರ್ಯ ಸಾಧಕ ಸಿದ್ಧಪಡಿಸಲು ಬಜೆಟ್‌ನಲ್ಲಿ ಅಸ್ತು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು. ಬಜೆಟ್‌ನಲ್ಲಿ ಘೋಷಣೆಯಾಗಿರುವ ಈ ಎಲ್ಲ ಯೋಜನೆಗಳು ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯಿಂದ ರಾಜ್ಯದ ಜನರಿಗೆ ಅವಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನಮ್ಮದು ಜನರ ಬದುಕು ಕಟ್ಟಿಕೊಡುವ ಬಜೆಟ್. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಜೆಟ್ ಅನ್ನು ಬಾಯ್ಕಾಟ್ ಮಾಡುವ ಮೂಲಕ ವಿರೋಧ ಪಕ್ಷಗಳ ನಾಯಕರು ರಾಜ್ಯದ ಜನರಿಗೆ ಅಪಮಾನ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.


2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಬಳಿಕ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ , ನಮ್ಮ ಬಜೆಟ್ ನ ಅಂಕಿ-ಅಂಶಗಳನ್ನು ನೋಡಿ ವಿರೋಧ ಪಕ್ಷಗಳ ನಾಯಕರಿಗೆ ಸಂಕಟದಿಂದ ಕೂರಲು ಆಗಲಿಲ್ಲ. ಎಲ್ಲಾ ಗ್ಯಾರಂಟಿಗಳಿಗೆ ಹಣ ಕೊಟ್ಟು ಇಷ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರಲ್ಲ ಎಂದು ಅಸೂಯೆಯಿಂದ ಬಜೆಟ್ ಧಿಕ್ಕರಿಸಿ ಎದ್ದು ಹೋದರು. ರಾಜ್ಯದ ಇತಿಹಾಸದಲ್ಲಿ ಯಾವುದೇ ವಿರೋಧ ಪಕ್ಷದವರು ಈ ರೀತಿ ಬಜೆಟ್ ಗೆ ಅಪಮಾನ ಮಾಡಿ ಹೋಗಿರಲಿಲ್ಲ. ಅವರು ಬಜೆಟ್ ಮಂಡನೆ ನಂತರ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದರು. ಆದರೆ ಇಂದು ಜನರ ಕಷ್ಟಕ್ಕೆ ಸ್ಪಂದಿಸುವ ಬಜೆಟ್ ಅನ್ನು ಧಿಕ್ಕರಿಸುವ ಮೂಲಕ ಬಿಜೆಪಿಯ 65 ಹಾಗೂ ಜೆಡಿಎಸ್ ನ 19 ಶಾಸಕರು ಜನರಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. 


ನಮ್ಮದು ಬದುಕು ಕಟ್ಟಿಕೊಡುವ, ಎಲ್ಲಾ ಕ್ಷೇತ್ರದಲ್ಲಿ ಜನರ ಬದುಕಿನಲ್ಲಿ ಬದಲಾವಣೆ ತರುವ ಬಜೆಟ್. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನ ಬಗ್ಗೆ ದೊಡ್ಡ ಪ್ರಮಾಣದ ದೂರದೃಷ್ಟಿ ಇಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗಿದೆ. ನೀರಾವರಿ ಇಲಾಖೆಯಲ್ಲಿ ಹೊಸ ಚಿಂತನೆ ಹಮ್ಮಿಕೊಳ್ಳಲಾಗಿದೆ. ಕೆಆರ್ ಎಸ್ ಉದ್ಯಾನ ಅಭಿವೃದ್ಧಿ, ನವಲಿ ಸಮತೋಲಿತ ಜಲಾಶಯ ನರ‍್ಮಾಣ, ಕೃಷ್ಣ ಮೇಲ್ದಂಡೆ, ಕಳಸಾ ಬಂಡೂರಿ ಯೋಜನೆಗೆ ಮುಂದಾಗಿದ್ದೇವೆ. ಕೇಂದ್ರ ರ‍್ಕಾರ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ನೀಡದಿದ್ದರೂ ನಾವು ಟೆಂಡರ್ ಕರೆದಿದ್ದೇವೆ. ಕೇಂದ್ರ ರ‍್ಕಾರ ಅನುಮತಿ ಕೊಟ್ಟ ತಕ್ಷಣ ಕೆಲಸ ಆರಂಭಿಸಲು ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಮೇಕೆದಾಟು ಯೋಜನೆಗೂ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ.


ಬೆಂಗಳೂರಿನ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆ, ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡಲು ಮಾಗಡಿ, ಹೊಸಕೋಟೆ, ನೆಲಮಂಗಲ, ಬಿಡದಿ ಸೇರಿದಂತೆ ಐದು ಹೊಸ ಟೌನ್ ಶಿಪ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಸ್ಕೈ ಡೆಕ್ ನರ‍್ಮಾಣ ಮಾಡಲು ಪ್ರಸ್ತಾವನೆ ಮಾಡಿದ್ದೇವೆ. ಕಂದಾಯ ಇಲಾಖೆಯಲ್ಲಿ ಜನರಿಗೆ ಆಗುತ್ತಿರುವ ತೊಂದರೆ ಸರಿ ಮಾಡಲು ಬದಲಾವಣೆ ತರುತ್ತಿದ್ದೇವೆ. ಪಹಣಿ, ಪೋಡಿ, ಖಾತೆ ಸಮಸ್ಯೆ ಬಗೆಹರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಆಸ್ತಿ ದಾಖಲೆಗಳನ್ನು ಮನೆಬಾಗಿಲಿಗೆ ತಲುಪಿಸಲು ಮುಂದಾಗಿದ್ದೇವೆ” ಎಂದರು.


ಬಿಜೆಪಿ ಶಾಸಕರಿಗೂ ಬಜೆಟ್ ತೃಪ್ತಿಯಿದೆ:


ಬಜೆಟ್ ಅನ್ನು ಬಿಜೆಪಿ ಶಾಸಕ ಸೋಮಶೇಖರ್ ಅವರು ಸ್ವಾಗತಿಸಿರುವ ಬಗ್ಗೆ ಕೇಳಿದಾಗ, “ನೀವು ಕೇವಲ ಅವರನ್ನು ಮಾತ್ರ ಕೇಳಿದ್ದೀರಿ. ಬೇರೆಯವರನ್ನೂ ಕೇಳಿ ಅವರಿಗೂ ಈ ಬಜೆಟ್ ನಿಂದ ಸಂತೋಷವಾಗಿದೆ. ಆದರೆ ಅದನ್ನು ಹೇಳಿಕೊಳ್ಳಲು ಆಗುತ್ತಿಲ್ಲ. ಬೆಂಗಳೂರು ನಗರಕ್ಕೆ ಏನೇನು ಬೇಕು ಎಂದು ಸೋಮಶೇಖರ್ ಅವರಿಗೆ ಗೊತ್ತಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು ನೀಡಬೇಕು ಎಂದು ಪತ್ರ ನೀಡಿದ್ದೇ ಅವರು. ಹೀಗಾಗಿ ಅವರು ಇದನ್ನು ಸ್ವಾಗತಿಸಿದ್ದಾರೆ. ಬಿಜೆಪಿ ಶಾಸಕರು ಕೂಡ ಇನ್ನಷ್ಟು ಬೇಡಿಕೆ ನಮಗೆ ಕೊಟ್ಟಿದ್ದಾರೆ. ಪಾಲಿಕೆ ಬಜೆಟ್ ಮಂಡನೆ ವೇಳೆಯಲ್ಲಿ ಅವರ ಅಭಿಪ್ರಾಯಗಳನ್ನು ಪರಿಗಣಿಸುತ್ತೇವೆ” ಎಂದರು.
ಬ್ರ‍್ಯಾಂಡ್ ಬೆಂಗಳೂರಿಗೆ ಬಜೆಟ್ ನಲ್ಲಿ ಕೊಡುಗೆ ಏನು ಎಂದು ಕೇಳಿದಾಗ, “’ಟನಲ್ ರಸ್ತೆ, ಬಿಸಿನೆಸ್ ಕಾರಿಡಾರ್, ಸ್ಯಾಟಲೈಟ್ ಟೌನ್ ಶಿಪ್, ಮೆಟ್ರೋ ಯೋಜನೆ, ಉಪನಗರ ರೈಲು, ಸ್ಕೈ ಡೆಕ್ ಯೋಜನೆಗಳನ್ನು ನೀಡಲಾಗಿದೆ. ಇದಕ್ಕಿಂತ ಇನ್ನೇನು ಬೇಕು” ಎಂದು ಕೇಳಿದರು.


ಕುಮಾರಸ್ವಾಮಿ ಅವರು ಸದನಕ್ಕೆ ಬಂದು ಬಜೆಟ್ ಕೇಳಿ ಟೀಕೆ ಮಾಡಲಿ:


ರಸ್ತೆ ರಿಪೇರಿ ಮಾಡಲು ಹಣವಿಲ್ಲ ಟನಲ್ ರಸ್ತೆಗೆ ಹಣವಿಟ್ಟಿದ್ದಾರೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಪಾಪ ಕುಮಾರಸ್ವಾಮಿ ಅವರಿಗೆ ಅಧಿವೇಶನಕ್ಕೆ ಬರಲು ಆಗಿಲ್ಲ. ಅವರು ಬಂದು ಬಜೆಟ್ ನೋಡಿದ್ದರೆ ತಿಳಿಯುತ್ತಿತ್ತು. ಅವರು ಎಲ್ಲೋ ಕೂತು ಪಿಎಗಳು, ಮಾಧ್ಯಮಗಳು ಹೇಳಿದ್ದನ್ನು ಕೇಳಿಕೊಂಡು ಮಾತನಾಡಿದರೆ ಹೇಗೆ. ಸದನಕ್ಕೆ ಬಂದು ನಮ್ಮ ತಪ್ಪು ಏನು ಎಂದು ಚರ‍್ಚೆ ಮಾಡಿದ್ದರೆ ನಾವು ಯೋಚನೆ ಮಾಡಬಹುದು. ಅವರ ಮಾರ್ಗದರ್ಶನ ನಮಗೆ ಅವಶ್ಯಕತೆ ಇದೆ”  ಎಂದು ತಿಳಿಸಿದರು.

ಬಿಜೆಪಿ-ಜೆಡಿಎಸ್ ಪ್ರತಿಭಟನೆ, 
ಪ್ರದರ್ಶನ, ಸಭಾತ್ಯಾಗ ಇತ್ಯಾದಿ


ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಮುಂಗಡ ಪತ್ರವನ್ನುವಿ ಧಾನ ಸಭೆಯಲ್ಲಿಶುಕ್ರವಾರ ಬೆಳಿಗ್ಗೆ 10.15ಕ್ಕೆ ಓದಲು ಆರಂಭಿಸಿ ಪ್ರಾಸ್ತಾವಿಕ ಮಾತುಗಳಲ್ಲಿ ಕೇಂದ್ರದಿಂದ ರಾಜ್ಯಗಳಿಗೆ ಹಂಚಿಕೆಯಾಗುವ ತೆರಿಗೆ ಹಂಚಿಕೆಯಲ್ಲಿ 62098 ಕೋಟಿರೂ. ನಷ್ಟವಾಗಿದೆ ಎಂದು ಹೇಳುತ್ತಿದ್ದಂತೆ ವಿರೋಧ ಪಕ್ಷ ಬಿಜೆಪಿ ಸದಸ್ಯರು ಬಜೆಟ್ ಮಂಡನೆಯಲ್ಲಿ ಕೇಂದ್ರ ಸರ್ಕಾರವನ್ನುದೂರಲು ವೇದಿಕೆಯನ್ನಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳುತ್ತಾ ಬಜೆಟ್ ಭಾಷಣಕ್ಕೆಅಡ್ಡಿ ಪಡಿಸುವ ಪ್ರಯತ್ನ ಮಾಡಿದರು.

ಹತ್ತು ನಿಮಿಷಕ್ಕೂ ಹೆಚ್ಚು ಕಾಲ ಧಿಕ್ಕಾರ ಮೊದಲಾದ ಘೋಷಣೆ ಕೂಗಿ ಕೆಲಕಾಲ ಭಿತ್ತಿ ಪತ್ರ ಪ್ರದರ್ಶಿಸಿ ನಂತರ ಸಭಾತ್ಯಾಗ ಮಾಡಿದರು. ಜೆಡಿಎಸ್ ಸದಸ್ಯರು ಕೂಡ ಬಿಜೆಪಿ ಸದಸ್ಯರನ್ನು ಬೆಂಬಲಿಸಿ ಹೊರ ನಡೆದರು.  

ಆದರೆ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಗ್ಗದೇ ಬಜೆಟ್ ಭಾಷಣ ಮುಂದುವರೆಸಿದರು.

ಬಿಜೆಪಿ ಸದಸ್ಯರೆಲ್ಲ ಎದ್ದು ನಿಂತು ಏನಿಲ್ಲಾ? ಏನಿಲ್ಲಾ.. ಬಜೆಟ್‌ನಲ್ಲಿ ಏನಿಲ್ಲಾ..ರೈತ ವಿರೋಧಿ ಸಿದ್ದರಾಮಯ್ಯ, ಎಲ್ಲಾ ಸುಳ್ಳು ಎಂದು ಘೋಷಣೆ ಕೂಗಲು ಪ್ರಾರಂಭಿಸಿದರು. ಬಿಜೆಪಿ ಸದಸ್ಯರ ಘೋಷಣೆಗದ್ದಲದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಿದರು.