ಲೈಂಗಿಕ ಕಿರುಕುಳ: ನಾಳೆ ಕಾನೂನು ಅರಿವು ಕಾರ್ಯಕ್ರಮ

Arivu program

ಲೈಂಗಿಕ ಕಿರುಕುಳ: ನಾಳೆ ಕಾನೂನು ಅರಿವು ಕಾರ್ಯಕ್ರಮ

ಲೈಂಗಿಕ ಕಿರುಕುಳ: ನಾಳೆ ಕಾನೂನು ಅರಿವು ಕಾರ್ಯಕ್ರಮ


ತುಮಕೂರು : ಸ್ವಾತಂತ್ರö್ಯದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಅಕ್ಟೋಬರ್ 7ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಬಾಲಭವನದಲ್ಲಿ ‘ಪ್ಯಾನ್-ಇಂಡಿಯಾ ಕಾನೂನು ಅರಿವು ಅಭಿಯಾನ ಹಾಗೂ ಪೋಕ್ಸೊ ಕಾಯ್ದೆ, ಮಾನವ ಕಳ್ಳಸಾಗಣೆ, ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ’ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್. ಶ್ರೀಧರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಮತ್ತಿತರರು ಭಾಗವಹಿಸಲಿದ್ದಾರೆ.