‘ಮಳೆ ಹಾನಿ:  ತುರ್ತಾಗಿ ಪರಿಹಾರ ನೀಡಿ’  ಜಿಲ್ಲಾಧಿಕಾರಿ ವೈ.ಎಸ್.ಪಾಟೀಲರ ಕಟ್ಟುನಿಟ್ಟಿನ ಸೂಚನೆ

Rain havoc reliefs

‘ಮಳೆ ಹಾನಿ:  ತುರ್ತಾಗಿ ಪರಿಹಾರ ನೀಡಿ’  ಜಿಲ್ಲಾಧಿಕಾರಿ ವೈ.ಎಸ್.ಪಾಟೀಲರ ಕಟ್ಟುನಿಟ್ಟಿನ ಸೂಚನೆ

‘ಮಳೆ ಹಾನಿ:  ತುರ್ತಾಗಿ ಪರಿಹಾರ ನೀಡಿ’ 
ಜಿಲ್ಲಾಧಿಕಾರಿ ವೈ.ಎಸ್.ಪಾಟೀಲರ ಕಟ್ಟುನಿಟ್ಟಿನ ಸೂಚನೆ


ತುಮಕೂರು : ಜಿಲ್ಲೆಯಲ್ಲಿ ಸತತವಾಗಿ ಬಿಡದೆ ಸುರಿಯುತ್ತಿರುವ ಮಳೆಯಿಂದ ಮಾನವ ಮತ್ತು ಜಾನುವಾರುಗಳ ಪ್ರಾಣ ಹಾಗೂ ಮನೆ, ಬೆಳೆ ಹಾನಿಯಾಗಿದ್ದಲ್ಲಿ ಆಯಾ ತಹಶೀಲ್ದಾರ್‌ಗಳು ಖುದ್ದು ಪರಿಶೀಲಿಸಿ ತುರ್ತಾಗಿ ಪರಿಹಾರ ವಿತರಿಸಲು  ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ  ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ನವೆಂಬರ್ ಮಾಹೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಒಂದು ಮಾನವ ಪ್ರಾಣಹಾನಿ, 32 ಜಾನುವಾರುಗಳ ಪ್ರಾಣ ಹಾನಿ, ಸುಮಾರು 310 ಮನೆಗಳು ಭಾಗಶಃ ಹಾನಿ ಉಂಟಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ರಾಗಿ ಬೆಳೆ ಹಾನಿಯಾಗಿದೆ. ಅಂತೆಯೇ ತೋಟಗಾರಿಕಾ ಬೆಳೆಯು ಹಾನಿಯಾಗಿದ್ದು, ಹಾನಿಗೊಳಗಾಗಿರುವ ಪ್ರಕರಣಗಳ ಸಂಬAಧ ಅಧಿಕಾರಿಗಳು ಪರಿಶೀಲನೆ ಮತ್ತು ಸರ್ವೇ ಕಾರ್ಯ ನಡೆಸುತ್ತಿದ್ದು, ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು. 

ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಬೆಳೆ ನಷ್ಟದ ಕುರಿತು ಸಂಬAಧಿಸಿದ ಅಧಿಕಾರಿಗಳು ಜಂಟಿ ಸಮೀಕ್ಷೆಯನ್ನು ಕೈಗೊಂಡು ಬೆಳೆ ಹಾನಿಯ ಬಗ್ಗೆ ಪರಿಹಾರ ತಂತ್ರಾAಶದಲ್ಲಿ ಮಾಹಿತಿಯನ್ನು ಇಂಧೀಕರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮಳೆಯಿಂದಾದ ಹಾನಿಗೆ ಪರಿಹಾರ ನೀಡಲು ಸಂಬAಧಿಸಿದ ಪರಿಹಾರ ತಂತ್ರಾAಶದಲ್ಲಿ ಹಾನಿ ಪ್ರಕರಣಗಳ ಮಾಹಿತಿಯನ್ನು ನಮೂದಿಸಲು ನವೆಂಬರ್ 30 ಕಡೆಯ ದಿನವಾಗಿದ್ದು, ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. 

ಜಿಲ್ಲಾ ಪಂಚಾಯಿತಿ, ಸಣ್ಣ ನೀರಾವರಿ, ಹೇಮಾವತಿ ನಾಲಾ ವಲಯದ ವ್ಯಾಪ್ತಿಯಲ್ಲಿರುವ ಎಲ್ಲಾ ಕೆರೆ/ನಾಲೆಗಳ ನೀರಿನ ಮಟ್ಟ ಮತ್ತು  ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಕ್ರಮಕೈಗೊಳ್ಳಬೇಕು. ಸಂಪರ್ಕ ಕಡಿತವಾಗಿರುವ ರಸ್ತೆ, ಸೇತುವೆಗಳನ್ನು ದುರಸ್ತಿಗೊಳಿಸಿ ಸಾರ್ವಜನಿಕ ಮತ್ತು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚಿಸಿದರು.  

ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಮಾತನಾಡಿ, ಈಗಾಗಲೇ ಮಾರ್ಕೋನಹಳ್ಳಿ ಡ್ಯಾಂಗೆ ನೀರಿನ ಒಳ ಹರಿವು ಹೆಚ್ಚಾಗಿದ್ದು, ಸುಮಾರು 6ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಮಳೆಯ ಪ್ರಮಾಣ ಹೆಚ್ಚಾದರೆ ಡ್ಯಾಂಗೆ ಒಳ ಹರಿವಿನ ನೀರಿನ ಪ್ರಮಾಣ ಹೆಚ್ಚಾಗಲಿದೆ. ಇದರಿಂದ ಹೊರ ಹರಿವಿನ ನೀರಿನ ಪ್ರಮಾಣ ಹೆಚ್ಚುಗೊಳಿಸುವ ಸಾಧ್ಯತೆ ಇದೆ. ಹಾಗಾಗಿ ಡ್ಯಾಂ ಹಿಂಭಾಗದಲ್ಲಿರುವ ಗ್ರಾಮಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕಾಳಜಿ ಕೇಂದ್ರ, ವಸತಿ ಮತ್ತು ಊಟದ ವ್ಯವಸ್ಥೆ ಮಾಡಲು ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.