ಯುಪಿಯಲ್ಲಿ ರೈತರ ಹತ್ಯೆ, ಪ್ರಿಯಾಂಕ ಬಂಧನ  ಖಂಡಿಸಿ ಕಾಂಗ್ರೆಸ್ ಪಂಜಿನ ಮೆರವಣಿಗೆ

panju march by DK Shivakumar and Siddaramiah

ಯುಪಿಯಲ್ಲಿ ರೈತರ ಹತ್ಯೆ, ಪ್ರಿಯಾಂಕ ಬಂಧನ   ಖಂಡಿಸಿ ಕಾಂಗ್ರೆಸ್ ಪಂಜಿನ ಮೆರವಣಿಗೆ

ಯುಪಿಯಲ್ಲಿ ರೈತರ ಹತ್ಯೆ, ಪ್ರಿಯಾಂಕ ಬಂಧನ 


ಖಂಡಿಸಿ ಕಾಂಗ್ರೆಸ್ ಪಂಜಿನ ಮೆರವಣಿಗೆ

ರಾಷ್ಟ್ರಪತಿ ಮಧ್ಯಪ್ರವೇಶಿಸಿ ಸರ್ಕಾರ ವಜಾಗೊಳಿಸಲಿ: ಸಿದ್ದರಾಮಯ್ಯ


ಬಿಜೆಪಿ ಕೊಲೆಗಡುಕರ ಪಕ್ಷ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು: ಉತ್ತರ ಪ್ರದೇಶದಲ್ಲಿ ನಾಲ್ವರು ರೈತರ ಹತ್ಯೆ ಹಾಗೂ ರೈತರಿಗೆ ಸಾಂತ್ವನ ಹೇಳಲು ಹೋಗುತ್ತಿದ್ದ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಸೋಮವಾರ ಸಂಜೆ ಬೃಹತ್ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.
ಕೆಪಿಸಿಸಿಯಿಂದ ರಾಜಭವನದವರೆಗೆ ಆಯೋಜಿಸಲಾಗಿದ್ದ ಪಂಜಿನ ಮೆರವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹಮದ್, ದೃವನಾರಾಯಣ್, ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಪಾಲ್ಗೊಂಡಿದ್ದರು.
ಬಿಜೆಪಿ ಸರ್ಕಾರದ ವಿರುದ್ಧ ಯುವ ಕಾರ್ಯಕರ್ತರು, ಮಹಿಳಾ ಕಾಂಗ್ರೆಸ್ ವಿಭಾಗದ ಪ್ರತಿನಿಧಿಗಳು ಒಳಗೊಂಡAತೆ ಹಲವು ಪ್ರಮುಖ ನಾಯಕರು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. 
ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಗೂಂಡಾ ರಾಜ್ಯದಲ್ಲಿ ದಲಿತರು, ರೈತರು, ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ ಯಾವುದೂ ಸುರಕ್ಷಿತವಾಗಿಲ್ಲ. ಸಂವಿಧಾನವೇ ಕುಸಿದುಬಿದ್ದಿರುವ ಸ್ಥಿತಿಯಲ್ಲಿ ರಾಷ್ಟçಪತಿಗಳು ಮಧ್ಯಪ್ರವೇಶಿಸಿ ಅಲ್ಲಿನ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ರೈತರು ತನ್ನ ಶತ್ರುಗಳೆಂದು ತಿಳಿದುಕೊಂಡಿರುವ ಬಿಜೆಪಿ ಅವರನ್ನು ಪೋಲಿಸರ ಮೂಲಕ ದಮನಿಸಲು ಪ್ರಯತ್ನಿಸಿ ವಿಫಲವಾದ ನಂತರ ಈಗ ನೇರವಾಗಿ ಹತ್ಯೆ ನಡೆಸಲು ಹೊರಟಿದೆ. ಉತ್ತರಪ್ರದೇಶದಲ್ಲಿ ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ ಮನಸ್ಸಿಗೆ ಸಾಕ್ಷಿ ಎಂದರು.
ಉತ್ತರ ಪ್ರದೇಶದಲ್ಲಿ ರಾಕ್ಷಸಿ ಪ್ರವೃತ್ತಿಯ ಆಡಳಿತ ನಡೆಯುತ್ತಿದ್ದು, ಇದು ಅಕ್ಷರಶಃ ಜಂಗಲ್ ರಾಜ್ ಆಗಿ ಪರಿವರ್ತನೆಯಾಗಿದೆ. ಅಲ್ಪ ಸಂಖ್ಯಾತರು, ದಲಿತರು, ಶೋಷಿತರ ಮೇಲೆ ನಿರಂತರ ದಾಳಿಗಳು ನಡೆಯುತ್ತಿವೆ. ಇದೀಗ ರೈತರ ನರಮೇಧವೂ ಸಹ ಆರಂಭವಾಗಿದೆ. ರಾಷ್ಟçಪತಿ ಅವರು ಕೂಡಲೇ ಮಧ್ಯಪ್ರವೇಶಿಸಿ ಈ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು.
ರೈತವಿರೋಧಿ ಕೃಷಿ ಕಾಯ್ದೆಗಳ ವಿರೋಧಿ ಪ್ರತಿಭಟನೆಗೆ 10 ತಿಂಗಳು ಕಳೆದಿವೆ. ಇಷ್ಟು ದಿನಗಳಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕಲು, ದಿಕ್ಕು ತಪ್ಪಿಸಲು, ಅಪರಾಧಿಗಳನ್ನಾಗಿಸಲು ಬಿಜೆಪಿ ಹಲವು ಕಸರತ್ತು ನಡೆಸಿತ್ತು. ಈಗ ಸ್ವತಃ ಕೇಂದ್ರ ಸಚಿವರೇ ಕಾರು ಹರಿಸಿ ರೈತರನ್ನು ಕೊಲೆ ಮಾಡಲು ಮುಂದಾಗಿದ್ದಾರೆ. ಬಿಜೆಪಿ ಕೊಲೆಗಡುಕರ ಪಕ್ಷ ಎಂದರೆ ತಪ್ಪಾಗದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಉತ್ತರ ಪ್ರದೇಶದಲ್ಲಿರುವ ಯೋಗಿ ಆದಿತ್ಯನಾಥ್ ಅವರು ಗೂಂಡಾರಾಜ್ಯ ನಡೆಸುತ್ತಿದ್ದು, ಬಿಜೆಪಿ ದುರಾಡಳಿತ ನಡೆಸುತ್ತಿದ್ದು, ರೈತರಿಗೆ ಸಾಂತ್ವಾನ ಮಾಡಲು ಹೋಗುತ್ತಿದ್ದ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿರುವ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದರು.
ಯಾವುದೇ ನೋಟಿಸ್ ಇಲ್ಲದೇ ನಮ್ಮ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಲಾಗಿದೆ. ರೈತರನ್ನು ಕೊಲೆ ಮಾಡಿದವರನ್ನು ಬಂಧಿಸಿಲ್ಲ. ಸಾಂತ್ವನ ಹೇಳಲು ಹೊರಟಿದ್ದ ನಮ್ಮ ನಾಯಕಿಯನ್ನು ಬಂಧಿಸಿದ್ದು ಖಂಡನೀಯ. ದೇಶದ ಅಖಂಡ ರೈತರ ಪರವಾಗಿ ನಮ್ಮ ಹೋರಾಟ ಮುಂದುವರೆಯಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರು ಈ ಕೂಡಲೇ ರಾಜೀನಾಮೆ ನೀಡುಬೇಕು ಎಂದು ಒತ್ತಾಯಿಸಿದರು.
ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಮಾತನಾಡಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಯುವ ಕಾಂಗ್ರೆಸ್ ಹೋರಾಟ ನಡೆಸಿದ್ದು, ಈ ಹೋರಾಟವನ್ನು ತಾರ್ಕಿತ ಅಂತ್ಯಕ್ಕೆ ಕರೆದೊಯ್ಯುತ್ತೇವೆ. ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳ್ಳಲಿದೆ. 1980 ರಲ್ಲಿ ಇಂದಿರಾ ಗಾಂಧಿ ಅವರನ್ನು ಸಹ ಇದೇ ರೀತಿಯಲ್ಲಿ ಬಂಧಿಸಲಾಗಿತ್ತು. ಇದೀಗ ಇತಿಹಾಸ ಮರುಕಳಿಸಿದೆ. ಬಿಜೆಪಿಯ ಕಪುö್ಪ ಕಾನೂನುಗಳ ವಿರುದ್ಧ ಹೋರಾಟ ತೀವ್ರಗೊಳ್ಳಲಿದೆ ಎಂದು ಹೇಳಿದರು.

ಭಾನುವಾರ ನಡೆದಿದ್ದೇನು?: ಭಾನುವಾರ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಗ್ರಾಮವೊಂದರಲ್ಲಿ ಇತ್ತು. ಕಾರ್ಯಕ್ರಮದ ಬಳಿಕ ರಾಜ್ಯ ಸಚಿವ ಅಜಯ್ ಮಿಶ್ರಾ ನೀಡಿದ ಹೇಳಿಕೆಯಿಂದ ರೊಚ್ಚಿಗೆದ್ದ ರೈತರು ಕಾರನ್ನು ಅಡ್ಡಗಟ್ಟಲು ಪ್ರಯತ್ನ ನಡೆಸಿದ್ದರು. ಆಗ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಷ್ ಮಿಶ್ರಾ ತೇನಿ ಅವರು ಕಾರು ಹರಿಸಿದಾಗ ರೈತರಾದ ಲವ್ ಪ್ರೀತ್ ಸಿಂಗ್ (20) ದಲ್ಜೀತ್ ಸಿಂಗ್ (35), ನಚತ್ತರ್ ಸಿಂಗ್ (60) ಮತ್ತು ಗೌರ್‌ವಿಂದರ್ ಸಿಂಗ್ (19) ಸಾವನ್ನಪ್ಪಿದ್ದರು.