ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ
ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ
ತುಮಕೂರು: ಭಾರತದ ಸ್ವಾತಂತ್ರ‍್ಯಕ್ಕೆ ಬಹುಮುಖ್ಯ ಕಾರಣವಾಗಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಜಯಂತಿಯನ್ನು ನಗರದ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಸಮೂಹ ಕಾಲೇಜುಗಳಲ್ಲಿ ಸರಳವಾಗಿ ಆಚರಿಸಲಾಯಿತು.
ನಗರದ ಸಮೀಪದ ಅಗಲಕೋಟೆಯಲ್ಲಿರುವ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಧಾನ ಕಾರ್ಯಕ್ರಮದಲ್ಲಿ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಸಾಹೇ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆದ ಡಾ. ಜಿ. ಪರಮೇಶ್ವರ ಅವರು ಇಬ್ಬರು ಮಹನೀಯ ಭಾವಚಿತ್ರಕ್ಕೆ ಪುಷ್ವ ನಮನ ಸಲ್ಲಿಸಿದರು.
ನಂತರ ಮಾತನಾಡಿದ ಡಾ. ಜಿ. ಪರಮೇಶ್ವರ, ಗಾಂಧೀಜಿಯವರ ಕೊಡುಗೆ ನಮ್ಮ ದೇಶಕ್ಕೆ ಅಗಾಧವಾದುದು. ಅವರ ಸಂಪೂರ್ಣ ಜೀವನ, ಆದರ್ಶಗಳು ಭಾರತೀಯರ ಮನಸ್ಸಿನಲ್ಲಿ ಅಚ್ಚಳಿಯದೇ ಸದಾ ಶಾಶ್ವತವಾಗಿವೆ. ಗಾಂಧಿಯವರ ಬದುಕೊಂದು ಶಾಂತಿ, ಹೋರಾಟಗಳ ಮಹಾಗಾಥೆ ಎಂದ ಅವರು ಗಾಂಧೀಜಿಯವರ ತತ್ವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಮತ್ತು ಸುಧಾರಣೆ ಸಾಧ್ಯವಾಗಲಿದೆ ಎಂದು ಡಾ. ಜಿ. ಪರಮೇಶ್ವರ ಹೇಳಿದರು.
ಗಾಂಧಿ ತತ್ವಗಳು, ಮೌಲ್ಯಗಳು ಎಂದಿಗೂ ಆದರ್ಶಪ್ರಾಯ. ಸತ್ಯ, ಅಹಿಂಸೆ, ಧರ್ಮದ ಮಾರ್ಗದಲ್ಲಿ ನಾವೆಲ್ಲರೂ ನಡೆಯುವ ಪ್ರಯತ್ನವನ್ನು ಮಾಡಬೇಕು. ಸತ್ಯದ ಮಾರ್ಗವನ್ನು ಮೊದಲು ನಮ್ಮಲ್ಲಿ ಅಳವಡಿಸಿಕೊಳ್ಳಬೇಕು. ಧರ್ಮದ, ಶಾಂತಿಯ ಮಾರ್ಗವನ್ನು ನಾವು ಅಳವಡಿಸಿಕೊಳ್ಳಲು ಮುಂದಾಗಬೇಕೆAದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಶೀಲ್‌ಚಂದ್ರ ಮಹಾಪಾತ್ರ, ಆಡಳಿತ ಅಧೀಕ್ಷಕರಾದ ಡಾ. ವೆಂಕಟೇಶ್, ಸಾಹೇ ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ನಿಯಂತ್ರಕ ಡಾ. ಮುದ್ದಕುಮಾರ್, ಡಾ. ಪ್ರಭಾಕರ್ ಸೇರಿದಂತೆ ಕಾಲೇಜಿನ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಸಿಬ್ಬಂದಿ ಹಾಜರಿದ್ದರು. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಅನ್ವಯ ಸರಳವಾಗಿ ಜಯಂತಿಯನ್ನು ಆಚರಿಸಲಾಯಿತು.ರ‍್ಯಾಂಕ್ ವಿಜೇತರಿಗೆ ಪ್ರಮಾಣ ಪತ್ರ ವಿತರಣೆ: ನಗರದ ಶ್ರೀ ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗಾಂಧೀಜಯAತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಡಾ. ವೈ.ಎಸ್. ಸಿದ್ದೇಗೌಡ ಅವರು ಪಾಲ್ಗೊಂಡು ರ‍್ಯಾಂಕ್ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಪ್ರಮಾಣಪತ್ರ ವಿತರಿಸಿದರು. ಆಡಳಿತಾಧಿಕಾರಿ ಡಾ. ವೈ.ಎಂ. ರೆಡ್ಡಿ, ಪ್ರಾಂಶುಪಾಲರಾದ ಬಿ.ಎಸ್. ಲತಾ ಸೇರಿದಂತೆ ಕಾಲೇಜಿನ ಭೋಧಕ ಸಿಬ್ಬಂದಿ ಹಾಜರಿದ್ದರು.
ಪದವಿ ಕಾಲೇಜಿನಲ್ಲಿ: ಸಿದ್ದಾರ್ಥ ಪದವಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಕೆ.ಎಸ್. ಕುಮಾರ್ ಅವರು ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕಾಲೇಜಿನ ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ಹಾಜರಿದ್ದರು.