ಪ್ರಿಯಾಂಕಾ ಬಂಧನಕ್ಕೆ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ ಖಂಡನೆ
Dr G parameshwar
ಪ್ರಿಯಾಂಕಾ ಬಂಧನಕ್ಕೆ
ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ ಖಂಡನೆ
ಮಧುಗಿರಿ: ಉತ್ತರಪ್ರದೇಶದ ಲಖೀಂಪುರ ಖೇರಿ ಜಿಲ್ಲೆಯ ಟಿಕೋನಿಯದಲ್ಲಿ 8 ಮಂದಿ ರೈತರ ಸಾವಿನ ಹಿನ್ನೆಲೆಯಲ್ಲಿ ಕುಟುಂಬಗಳಿಗೆ ಸಾಂತ್ವನ ಹೇಳಲು ಹೊರಟಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ ತಿಳಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರೈತರ ಹಕ್ಕುಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದು ಪ್ರಜಾಪ್ರಭುತ್ವದ ಅಳಿವು ಉಳಿವಿನ ಪ್ರಶ್ನೆಯಾಗಿದೆ. ರೈತರ ಬಗ್ಗೆ ಧ್ವನಿ ಎತ್ತುವುದು ನಮ್ಮ ಕರ್ತವ್ಯ. ರೈತರ ಹತ್ಯೆಗೆ ನ್ಯಾಯ ಒದಗಿಸಲು ಮುಂದಾಗಬೇಕು ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಹಾಗೂ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು.