ಕುತೂಹಲ ಕೆರಳಿಸಿದ ಮೋದಿ-ಗೌಡರ ಭೇಟಿ
HD Devegowda PM Modi meeting
ಕುತೂಹಲ ಕೆರಳಿಸಿದ ಮೋದಿ-ಗೌಡರ ಭೇಟಿ
ನವದೆಹಲಿ: ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹಾಗೂ ಪ್ರಧಾನಿ ಅವರ ಭೇಟಿ ನಡೆದಿದ್ದು ಕುತೂಹಲ ಕೆರಳಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರೊಂದಿಗೆ ಮಂಗಳವಾರ ಸಂಸತ್ ಭವನದಲ್ಲಿ ಸಭೆ ನಡೆಸಿದರು. ಈ ಬಗ್ಗೆ ಸರಣಿ ಫೋಟೋಗಳನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನಿ ``ನಮ್ಮ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರೊಂದಿಗೆ ಸಂಸತ್ ಭವನದಲ್ಲಿ ಇಂದು ಮಹತ್ವದ ಸಭೆ ನಡೆಸಲಾಗಿದೆ’’ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಸ್ತುತ ಸೋಮವಾರದಿಂದ ಆರಂಭಗೊAಡಿರುವ ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷಗಳು ವಿವಿಧ ವಿಷಯಗಳ ಚರ್ಚೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರನ್ನು ಪ್ರಧಾನಿ ಭೇಟಿ ಮಾಡಿರುವುದು ಕುತೂಹಲಕಾರಿಯಾಗಿದೆ.
ಇದಕ್ಕೂ ಮುನ್ನ ಸಂಸತ್ ಭವನದಲ್ಲಿ ಪ್ರಧಾನಿ ಮೋದಿಯವರು ಹೆಚ್.ಡಿ. ದೇವೇಗೌಡ ಅವರನ್ನು ಕೈ ಹಿಡಿದು ಸ್ವಾಗತಿಸಿದ ಪ್ರಧಾನಿ ಮೋದಿ ಅವರನ್ನು ಕುರ್ಚಿಯಲ್ಲಿ ಕುಳ್ಳಿರಿಸಿ ಆತ್ಮೀಯತೆಯಿಂದ ಮಾತನಾಡಿದರು. ಚರ್ಚೆ, ಮಾತುಕತೆಯ ನಂತರ ಮೋದಿಯವರು ಗೌಡರ ಕೈಹಿಡಿದು ಬಾಗಿಲವರೆಗೆ ಕರೆತಂದು ಕಳುಹಿಸಿ ಆತ್ಮೀಯತೆ ಮೆರೆದರು.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಚಿತ್ರಗಳಿಗೆ ಪರ-ವಿರೋಧದ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ತಮಗೆ ಮೊಣಕಾಲು ನೋವಿರುವುದರಿಂದ ಕೈಹಿಡಿದು ನಡೆದಿದ್ದಾರೆ ಎಂದಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಸುಳಿವನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹರಿಬಿಟ್ಟಿರುವ ಸಂದರ್ಭದಲ್ಲಿ ಈ ಭೇಟಿ ಕುತೂಹಲ ಕೆರಳಿಸಿದ್ದು, ಬಿಜೆಪಿ ಪಾಳೆಯದ ಖುಷಿಯನ್ನು ಇಮ್ಮಡಿಗೊಳಿಸಿರಬಹುದು!