2024ರೊಳಗೆ ಪ್ರತಿ ಮನೆಗೆ ಕುಡಿಯುವ ನೀರು: ಎಲ್.ಕೆ.ಅತೀಕ್
Kolar news
2024ರೊಳಗೆ ಪ್ರತಿ ಮನೆಗೆ ಕುಡಿಯುವ ನೀರು: ಎಲ್.ಕೆ.ಅತೀಕ್
ಕೋಲಾರ: ಜಲಜೀವನ್ ಮಿಷನ್ ದೇಶದ್ಯಾಂತ ಜಾರಿಯಾಗಿದ್ದು ಈ ಯೋಜನೆಯು 2024ಕ್ಕೆ ಪೂರ್ಣಗೊಳ್ಳಲಿದ್ದು, 2024ರೊಳಗೆ ಪ್ರತಿ ಮನೆ ಮನೆಗೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ, ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಲ ಜೀವನ್ ಮಿಷನ್ ಪ್ರಗತಿ ಪರಿಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಹಳ್ಳಿಗೆ ಬೇಟಿ ನೀಡಿ ಜಲ ಮೂಲಗಳನ್ನು ಗುರುತಿಸಿಕೊಂಡು, ಪ್ರತಿ ಕುಟುಂಬಕ್ಕೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ನಲ್ಲಿಗಳನ್ನು ಆಳವಡಿಸಲು ಯೋಜನೆಯನ್ನು ರೂಪಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಲ್ಯಾಬೋರೇಟರಿಗಳನ್ನು ಪರೀಕ್ಷಿಸಲು ಗ್ರಾಮ ಪಂಚಾಯಿತಿ ವತಿಯಿಂದ ವಾಟರ್‌ಮೆನ್‌ಗಳಿಗೆ ತರಬೇತಿ ನೀಡಬೇಕು. ವಾಟರ್‌ಮೆನ್‌ಗಳಿಗೆ 6 ಪ್ಯಾರಮೀಟರ್‌ಗಳನ್ನು ಪರೀಕ್ಷಿಸಲು ಬರಬೇಕು. ಜಿಲ್ಲೆಗೆ ಕೆ.ಸಿ.ವ್ಯಾಲಿ ನೀರು ಬರುತ್ತಿರುವುದರಿಂದ ನೀರನ್ನು ಆಗಾಗಲೇ ಪರೀಕ್ಷೆ ಮಾಡಬೇಕು. ನರೇಗಾ ಯೋಜನೆಯಡಿ ಕಿಚನ್ ಗಾರ್ಡನ್, ಆಟದ ಮೈದಾನ, ಶಾಲಾ ಕಾಂಪೌAಡ್‌ಗಳನ್ನು ನಿರ್ಮಿಸಿ. ಪಾರ್ಕ್ಗಳ ನಿರ್ಮಾಣಕ್ಕೆ ಮಿತ ವೆಚ್ಚವನ್ನು ಮಾಡಿ. ಹಸಿರು ಗಿಡಗಳನ್ನು ಹೆಚ್ಚಾಗಿ ಬೆಳಸಿ ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.
ಜಿಲ್ಲೆಯ 156 ಗ್ರಾಮ ಪಂಚಾಯಿತಿಗಳಲ್ಲಿರುವ ಗ್ರಂಥಾಲಯಗಳಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಓದಲು ಉತ್ತಮ ಅವಕಾಶಗಳನ್ನು ಕಲ್ಪಿಸಿ, ಪ್ರತಿ ಗ್ರಂಥಾಲಯಕ್ಕೆ ಓದುವ ಕೋಣೆಗಳನ್ನು ಒದಗಿಸಿ. ಗ್ರಂಥಾಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಓದುವ ಪುಸ್ತಕಗಳನ್ನು ಒದಗಿಸಿ ಎಂದರು.
ಜಿಲ್ಲಾಧಿಕಾರಿ ಡಾ||ಆರ್.ಸೆಲ್ವಮಣಿ ಅವರು ಮಾತನಾಡಿ, ಜಿಲ್ಲೆಯ 156 ಗ್ರಾಮ ಪಂಚಾಯಿತಿಗಳಿಗೆ ವೆಸ್ಟ ಮ್ಯಾನೆಂಜಮೆAಟ್ ನಿರ್ವಹಣೆಗೆ ಜಾಗ ನೀಡಲಾಗಿದೆ ಹಾಗೂ ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಉಕೇಶ್ ಕುಮಾರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಂಜೀವಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳು ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಸೈನಿಕ ಮಂಡಳಿಗೆ ಅರ್ಜಿ ಕರೆ
ಕೋಲಾರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾ ಸೈನಿಕ ಮಂಡಳಿಯ ಮೂರು ವರ್ಷಗಳ ಅವಧಿಗೆ ರಚಿಸಲು ಮಾಜಿ ಸೈನಿಕರ ಕಲ್ಯಾಣ ಕಾರ್ಯಕ್ರಮಗಳಲ್ಲಿ ಅಭಿರುಚಿ ಇರುವ ಮಾಜಿ ಸೈನಿಕರನ್ನು ಅಧಿಕಾರೇತರ ಸದಸ್ಯರನ್ನಾಗಿ ನೇಮಕ ಮಾಡುವುದಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಮಾಜಿ ಸೈನಿಕರು, ಮಾಜಿ ಸೈನಿಕರ ಪತ್ನಿಯರು ಮತ್ತು ಸಮಾಜ ಸೇವೆಯಲ್ಲಿ ಅಳವಡಿಸಿಕೊಳ್ಳುವಂತಹ ಗಣ್ಮಾನ್ಯ ವ್ಯಕ್ತಿಗಳು ತಮ್ಮ ಬಯೋ-ಡಾಟ ಮತ್ತು ಇಚ್ಚಾ ಪತ್ರವನ್ನು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಗ್ರಾಮಾಂತರ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ, ನಂ.58 ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ರಸ್ತೆ, ಬೆಂಗಳೂರು 560025 ಇಲ್ಲಿಗೆ ಡಿಸೆಂಬರ್ 01 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25588718 ನ್ನು ಸಂಪರ್ಕಿಸಬಹುದು ಎಂದು ಉಪ ನಿರ್ದೇಶಕರು(ಪ್ರಭಾರ), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ, ಬೆಂಗಳೂರು ಗ್ರಾಮಾಂತರ ಅವರು ತಿಳಿಸಿದ್ದಾರೆ.
ನಾಳೆ ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್: ಕೆ.ಆರ್.ನಾಗರಾಜ
ಕೋಲಾರ: ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಡಿಸೆಂಬರ್ 18 ರಂದು ರಾಷ್ಟಿçÃಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ನವೆಂಬರ್ 17 ರಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಪೂರ್ವ ಸಂಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಆರ್.ನಾಗರಾಜ ಅವರು ತಿಳಿಸಿದರು.
ಮಂಗಳವಾರ ತಮ್ಮ ಕಛೇರಿ ಸಭಾಂಗಣದಲ್ಲಿ ರಾಷ್ಟಿçÃಯ ಲೋಕ ಅದಾಲತ್‌ನ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ಸಮಾಜ ಸುವ್ಯವಸ್ಥೆಯಾಗಿರಬೇಕಾದರೆ ವ್ಯಾಜ್ಯಗಳು ಕಡಿಮೆಯಾಗಬೇಕು, ಸಾರ್ವಜನಿಕರು ನೆಮ್ಮದಿಯಾಗಿ ಜೀವನ ನಡೆಸಬೇಕು, ಪ್ರಜಾಪ್ರಭುತ್ವ ಸುಭದ್ರವಾಗಿರಬೇಕೆಂದರೆ ಪ್ರಜೆಗಳು ಪ್ರಜ್ಞಾವಂತರಾಗಬೇಕು. ಪ್ರತಿಯೊಬ್ಬ ನಾಗರಿಕರು ಕಾನೂನಿನ ಅರಿವು ಪಡೆದುಕೊಂಡರೆ ಕಾನೂನು ವ್ಯವಸ್ಥೆ ಸುಸ್ಥಿರವಾಗಿರುತ್ತದೆ ಎಂದು ಅವರು ತಿಳಿಸಿದರು.
ಲೋಕ್ ಅದಾಲತ್‌ನಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ರಾಜಿ ಆಗಬಹುದಾದ ಪ್ರಕರಣಗಳನ್ನು, ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ಕಾರ್ಮಿಕರ ಪ್ರಕರಣಗಳು, ವಿದ್ಯುತ್ ಕಳ್ಳತನ ಪ್ರಕರಣಗಳು, ಮರಳು ಕಳ್ಳತನ ಪ್ರಕರಣಗಳು, ವೈವಾಹಿಕ ಪ್ರಕರಣಗಳು, ಸಿವಿಲ್ ದಾವೆ, ಜನನ ಮತ್ತು ಮರಣ ನೊಂದಣಿ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳಾದ ವಿದ್ಯುತ್, ನೀರು, ಬಿಎಸ್‌ಎನ್‌ಎಲ್ ಬಿಲ್ ಪಾವತಿ ಪ್ರಕರಣಗಳನ್ನು ರಾಜಿ ಮಾಡಲಾಗುವುದು ಎಂದು ಅವರು ತಿಳಿಸಿದರು.
ಕೋಲಾರ ಜಿಲ್ಲೆಯಲ್ಲಿ 30 ನ್ಯಾಯಾಲಯಗಳಿದ್ದು ಒಟ್ಟು 40,106 ಪ್ರಕರಣಗಳಿವೆ. ಅವುಗಳಲ್ಲಿ ಸಿವಿಲ್ 23,405 ಮತ್ತು ಕ್ರಿಮಿನಲ್ 16,701 ಪ್ರಕರಣಗಳಿವೆ. ಕ್ರಿಮಿನಲ್ ಪ್ರಕರಣಗಳಲ್ಲಿ ರಾಜಿಯಾಗಬಹುದಾದ ಒಟ್ಟು 685 ಪ್ರಕರಣಗಳು, 5160 ಚೆಕ್ ಅಮಾನ್ಯ ಪ್ರಕರಣಗಳು, 637 ಮೋಟರ್ ವಾಹನ ಅಪಘಾತ ಪ್ರಕರಣಗಳು ಮತ್ತು 5037 ವಿಭಾಗದ ದಾವೆ ಪ್ರಕರಣಗಳಿವೆ ಅವುಗಳಲ್ಲಿ 6320 ಪ್ರಕರಣಗಳು ರಾಜಿಯಾಗಬಹುದು ಎಂದು ಅವರು ತಿಳಿಸಿದರು.
ಲೋಕ್ ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಎರಡು ಪಕ್ಷಗಾರರು ನೆಮ್ಮದಿಯಿಂದ ಜೀವನ ಮಾಡಬಹುದು. ನ್ಯಾಯಾಲಯದ ಶುಲ್ಕವನ್ನು ಸಹ ಪಕ್ಷಗಾರರಿಗೆ ವಾಪಸ್ ನೀಡಲಾಗುವುದು ಆದ್ದರಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ನಡೆಯುವ ರಾಷ್ಟಿçÃಯ ಲೋಕ್ ಅದಾಲತ್‌ನ ಉಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಹೆಚ್. ಗಂಗಾಧರ ಇದ್ದರು.
ಅಧಿಕಾರೇತರ ಸದಸ್ಯರನ್ನು ನೇಮಕ ಮಾಡಲು ಅರ್ಜಿ ಕರೆ
ಕೋಲಾರ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕೋಲಾರ ಜಿಲ್ಲೆ, ಕೋಲಾರ ಇಲ್ಲಿಗೆ ಜಿಲ್ಲಾ ಆಯ್ಕೆ ಸಮಿತಿಯ ಸಭೆಗೆ ಅಧಿಕಾರೇತರ ಸದಸ್ಯರನ್ನು ನೇಮಕ ಮಾಡಬೇಕಾಗಿದ್ದು, ವಿಶ್ವಕರ್ಮ ಸಮುದಾಯದ ಜನಾಂಗದವರಿAದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳವರು ಸ್ವ-ವಿವರಗಳೊಂದಿಗೆ ನವೆಂಬರ್ 29 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿ., ಜಿಲ್ಲಾಧಿಕಾರಿಗಳ ಭವನ, 2ನೇ ಮಹಡಿ, ಕೋಲಾರ ಇಲ್ಲಿಗೆ ಸಲ್ಲಿಸಬೇಕು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆ: ಡಿಸೆಂಬರ್ 10ರಂದು ಮತದಾನ
ಕೋಲಾರ: ಕರ್ನಾಟಕ ವಿಧಾನ ಪರಿಷತ್‌ಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ದ್ವೆöÊವಾರ್ಷಿಕ ಚುನಾವಣೆಗಳು 2021 ಸ್ಥಳೀಯ ಸಂಸ್ಥೆಗಳ ಕ್ಷೇತ್ರ ನಂ 18ರ ಕೋಲಾರ ಚುನಾವಣಾ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಒಬ್ಬ ಸದಸ್ಯರನ್ನು ಚುನಾಯಿಸಲು ಚುನಾವಣೆ ನಡೆಸಬೇಕಾಗಿದೆ.
ನಾಮ ಪತ್ರಗಳನ್ನು ಉಮೇದುದಾರರು ಅಥವಾ ಸೂಚಕರು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು, ಕೋಲಾರ ರವರಿಗೆ ಅಥವಾ ಅಪರ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ||ಸ್ನೇಹ ಸಿ.ವಿ. ರವರಿಗೆ ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನವೆಂಬರ್ 23 ರವರೆಗೆ ಬೆಳಿಗ್ಗೆ 11.00 ಗಂಟೆಯಿAದ ಮಧ್ಯಾಹ್ನ 3.00 ಗಂಟೆಯವರೆಗೆ (ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ಸಲ್ಲಿಸಬಹುದು.
ನಾಮಪತ್ರದ ನಮೂನೆಗಳನ್ನು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪಡೆಯಬಹುದು. ನಾಮಪತ್ರಗಳನ್ನು ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು, ನಂ 18 ಕೋಲಾರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ, ಜಿಲ್ಲಾಧಿಕಾರಿಗಳ ಕಛೇರಿ, ಕೋಲಾರದಲ್ಲಿ ನವೆಂಬರ್ 24 ರಂದು ಬೆಳಿಗ್ಗೆ 11.00 ಗಂಟೆಗೆ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ತಿಳಿವಳಿಕೆ ಪತ್ರವನ್ನು ಉಮೇದುದಾರನು ಅಥವಾ ಅವನ ಯಾರೇ ಸೂಚಕರು ಅಥವಾ ಅದನ್ನು ಸಲ್ಲಿಸಲು ಉಮೇದುವಾರನಿಂದ ಲಿಖಿತದಲ್ಲಿ ಅಧಿಕೃತನಾದ ಆತನ ಚುನಾವಣಾ ಏಜೆಂಟನು ಇಬ್ಬರಲೊಬ್ಬರು ಚುನಾವಣಾಧಿಕಾರಿಗೆ ಅವರ ಕಛೇರಿ ವೇಳೆಯಲ್ಲಿ ನವೆಂಬರ್ 26 ರಂದು ಮಧ್ಯಾಹ್ನ 3.00 ಗಂಟೆಯೊಳಗಾಗಿ ಸಲ್ಲಿಸಬೇಕು.
ಚುನಾವಣೆಗೆ ಸ್ಪರ್ಧೆ ನಡೆದ ಸಂದರ್ಭದಲ್ಲಿ ಡಿಸೆಂಬರ್ 10ರಂದು ಬೆಳಿಗ್ಗೆ 8.00 ಗಂಟೆಯಿAದ ಸಾಯಂಕಾಲ 4.00 ಗಂಟೆಯವರೆಗೆ ಮತದಾನ ನಡೆಯುತ್ತದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ನಂ.18ರ ಕೋಲಾರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿ ಡಾ||ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.