ಪ್ರತಿಯೊಬ್ಬರು ಲಸಿಕೆಯನ್ನು ಸ್ವಯಂಪ್ರೇರಿತರಾಗಿ ಪಡೆದುಕೊಳ್ಳಬೇಕು -ನ್ಯಾ.ಸಿ.ಹೆಚ್.ಗಂಗಾಧರ್

Lasike

ಪ್ರತಿಯೊಬ್ಬರು ಲಸಿಕೆಯನ್ನು ಸ್ವಯಂಪ್ರೇರಿತರಾಗಿ ಪಡೆದುಕೊಳ್ಳಬೇಕು -ನ್ಯಾ.ಸಿ.ಹೆಚ್.ಗಂಗಾಧರ್

ಪ್ರತಿಯೊಬ್ಬರು ಲಸಿಕೆಯನ್ನು ಸ್ವಯಂಪ್ರೇರಿತರಾಗಿ ಪಡೆದುಕೊಳ್ಳಬೇಕು

-ನ್ಯಾ.ಸಿ.ಹೆಚ್.ಗಂಗಾಧರ್


ಕೋಲಾರ : ಕೋವಿಡ್-19 ಕಳೆದ ಒಂದುವರೆ ವರ್ಷದಿಂದ ಇಡೀ ವಿಶ್ವವನ್ನೇ ಬಾಧಿಸುತ್ತಿದ್ದು, ಅನೇಕ ಜನರು ಸಾವಿಗೀಡಾಗಿ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಪ್ರತಿಯೊಬ್ಬರು ಸ್ವಯಂಪ್ರೇರಿತರಾಗಿ ಕೋವಿಡ್ ಲಸಿಕೆಯನ್ನು ಪಡೆದುಕೊಂಡರೆ ಕರೋನಾವನ್ನು ನಿಯಂತ್ರಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಹೆಚ್. ಗಂಗಾಧರ್ ಅವರು ತಿಳಿಸಿದರು.
 ಇಂದು ನರಸಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿವಿಧ ಇಲಾಖೆಗಳು ಹಾಗೂ ವಕೀಲರ ಸಂಘ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಅಕ್ಟೋಬರ್ 2 ರಿಂದ ನವೆಂಬರ್ 14 ರವರೆಗೆ ಭಾರತ ದೇಶವಾಸಿಗಳಿಗೆ ರಾಷ್ಟ್ರೀಯ ಜಾಗೃತಿ ಮತ್ತು ಅಪರಿಮಿತ ಕಾನೂನು ಅರಿವು ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಕೋವಿಡ್-19 ಲಸಿಕಾಕರಣ ಮತ್ತು ವಿಪತ್ತು ನಿರ್ವಹಣೆ ಕಾಯ್ದೆಯ ಬಗ್ಗೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳುವಂತೆ ಸರ್ಕಾರ ಅನೇಕ ಕಾರ್ಯಕ್ರಮಗಳ ಮೂಲಕ ಪ್ರಚಾರ ಮಾಡುತ್ತಿದ್ದು. ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಿ ಹಾಗೂ ಪ್ರತಿಯೊಬ್ಬರು ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಬೇಕು ಎಂದು ತಿಳಿಸಿದರು.
ಜೆ.ಎಂ.ಎಫ್.ಸಿ, ಕೋಲಾರ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿವೇಕ್ ಗ್ರಾಮೋಪಾಧ್ಯಾಯ ಅವರು ವಿಪತ್ತು ನಿರ್ವಹಣೆ ಕಾಯ್ದೆಯ ಬಗ್ಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಕೆ.ಆರ್.ಧನರಾಜ್ ಅವರು ಕಾನೂನು ಸೇವ ಪ್ರಾಧಿಕಾರದ ಧ್ಯೆಯೋದ್ದೇಶಗಳ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ವೈದ್ಯಾಧಿಕಾರಿಗಳಾದ ರಮ್ಯಾ ದೀಪಿಕಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಶ್ರೀಧರ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ರಘುಪತಿ ಗೌಡ, ನರಸಾಪುರ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಸುಮಿತ್ರ, ನರಸಾಪುರ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ರವಿ.ಹೆಚ್.ಎಂ, ಅವರು ಸೇರಿದಂತೆ ಮತ್ತಿತರರು ಉಪಸ್ಥಿತರಿದರು.

ಮೋಟಾರು ವಾಹನ ಕಾಯ್ದೆ 1988 ಹಾಗೂ ಗ್ರಾಹಕರ ಕಾನೂನುಗಳ ಬಗ್ಗೆ ಅರಿವು ಕಾರ್ಯಕ್ರಮ
ಕೋಲಾರ, ಅಕ್ಟೋಬರ್ 05 (ಕರ್ನಾಟಕ ವಾರ್ತೆ): ನಂ.19-587
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿವಿಧ ಇಲಾಖೆಗಳು ಹಾಗೂ ವಕೀಲರ ಸಂಘ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 06 ರಂದು ಬೆಳಿಗ್ಗೆ 10.30 ಗಂಟೆಗೆ ವೇಮಗಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ 75ನೇ ವರ್ಷದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಅಕ್ಟೋಬರ್ 2ರಿಂದ ನವೆಂಬರ್ 14 ರವರೆಗೆ ಭಾರತ ದೇಶವಾಸಿಗಳಿಗೆ ರಾಷ್ಟ್ರೀಯ ಜಾಗೃತಿ ಮತ್ತು ಅಪರಿಮಿತ ಕಾನೂನು ಅರಿವು “ಮೋಟಾರು ವಾಹನ ಕಾಯ್ದೆ 1988 ಹಾಗೂ ಗ್ರಾಹಕರ ಕಾನೂನುಗಳ ಬಗ್ಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪವನೇಶ್.ಡಿ ಮಾಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಮಗಲ್ ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿಗಳಾದ ರಮೇಶ್ ಅವರು ವಹಿಸುವರು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಹೆಚ್. ಗಂಗಾಧರ್ ಅವರು ತಿಳಿಸಿದ್ದಾರೆ.