ಡಿಪ್ಲೊಮಾ ಕೋರ್ಸ್ ಪಿಯುಸಿಗೆ ಸಮ
ಡಿಪ್ಲೊಮಾ ಕೋರ್ಸ್ ಪಿಯುಸಿಗೆ ಸಮ
ಬೆಂಗಳೂರು: ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಅನ್ನು ಪಿಯುಸಿ ವಿದ್ಯಾರ್ಹತೆಗೆ ತತ್ಸಮಾನವೆಂದು ಸರ್ಕಾರ ಘೋಷಿಸಿದೆ. ನೇರ ನೇಮಕಾತಿ ಅಥವಾ ಅನುಕಂಪದ ಆಧಾರದ ಮೇಲೆ ನೇಮಕಾತಿ ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯಲು ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಶಿಕ್ಷಣವನ್ನು ಪಿಯುಸಿಗೆ ಸಮ ಎಂದು ಘೋಷಿಸಲಾಗಿದೆ. ಈ ವಿಷಯದಲ್ಲಿ ಗೊಂದಲ ಇದ್ದ ಕಾರಣ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಹಲವು ಸಭೆಗಳನ್ನು ಮಾಡಿದ್ದರು. ಅವರ ಸಲಹೆ ಮೇರೆಗೆ ಈ ತೀರ್ಮಾನ ಮಾಡಲಾಗಿದೆ. 2015ಕ್ಕಿಂತ ಹಿಂದಿನ ವರ್ಷಗಳಲ್ಲಿ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಕೆಪಿಎಸ್‌ಸಿ ನಡೆಸುವ ಇಲಾಖಾ ಪರೀಕ್ಷೆಗಳ ಜತೆಗೆ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.