ಅರ್ಥಪೂರ್ಣವಾಗಿ ಡಾ. ಬಾಬು ಜಗಜೀವನ್ ರಾಮ್ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ - ಜಿಲ್ಲಾಧಿಕಾರಿ ವೆಂಕಟ್‌ರಾಜಾ.
ಅರ್ಥಪೂರ್ಣವಾಗಿ ಡಾ. ಬಾಬು ಜಗಜೀವನ್ ರಾಮ್ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ - ಜಿಲ್ಲಾಧಿಕಾರಿ ವೆಂಕಟ್‌ರಾಜಾ.
ಅರ್ಥಪೂರ್ಣವಾಗಿ ಡಾ. ಬಾಬು ಜಗಜೀವನ್ ರಾಮ್ ಮತ್ತು
ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ - ಜಿಲ್ಲಾಧಿಕಾರಿ ವೆಂಕಟ್‌ರಾಜಾ.
ಕೋಲಾರ : ಏಪ್ರಿಲ್ 5 ರಂದು ಡಾ|| ಬಾಬು ಜಗಜೀವನ್ ರಾಮ್ ಜಯಂತಿ ಹಾಗೂ ಏಪ್ರಿಲ್ 14 ರಂದು ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿAದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ವೆಂಕಟ್‌ರಾಜಾ ಅವರು ತಿಳಿಸಿದರು.
ಇಂದು ತಮ್ಮ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡಾ|| ಬಾಬು ಜಗಜೀವನ್ ರಾಮ್ ಹಾಗೂ ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಯ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಜಯಂತಿಗಳಿಗೆ ಕಡ್ಡಾಯವಾಗಿ ಅಧಿಕಾರಿಗಳು ಹಾಜರಾಗಬೇಕು, ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಸಲಾಗುವುದು. ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಧನ ನೀಡಲಾಗುವುದು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಅವರು ತಿಳಿಸಿದರು.
ಮುಖಂಡರು ಮಾತನಾಡಿ ಜಯಂತಿಗಳ ದಿನ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪೋತ್ಸಾಹಧನ ನೀಡಬೇಕು. ಜಯಂತಿಗಳಿಗೆ ಪ್ರತಿ ಇಲಾಖೆಗಳಿಂದ ಪಲ್ಲಕ್ಕಿಗಳನ್ನು ತರಬೇಕು. ಡಾ|| ಬಾಬು ಜಗಜೀವನ್ ರಾಮ್ ಹಾಗೂ
ಡಾ|| ಬಿ..ಆರ್.ಅಂಬೇಡ್ಕರ್ ಜಯಂತಿಯನ್ನು ಕೇವಲ ಜಾತಿಗೆ ಸೀಮಿತವಾಗದೆ ಎಲ್ಲರೂ ಸೇರಿ ಆಚರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಚಿನ್ ಘೋರ್ಪಡೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಚನ್ನಬಸಪ್ಪ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.