ಅಂತರ್ಜಲ ಮೌಲೀಕರಣ-2020 ವರದಿ ಬಿಡುಗಡೆ ಸಮಾರಂಭ
varadi bidugade
ಅಂತರ್ಜಲ ಮೌಲೀಕರಣ-2020 ವರದಿ ಬಿಡುಗಡೆ ಸಮಾರಂಭ
ಕೋಲಾರ : ಅಂತರ್ಜಲ ನಿರ್ದೇಶನಾಲಯ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದಿ ಇಲಾಖೆಯ ವತಿಯಿಂದ ಅಕ್ಟೋಬರ್ 09 ರಂದು ಮಧ್ಯಾಹ್ನ 12.00 ಗಂಟೆಗೆ ನಗರದ ಟಿ.ಚನ್ನಯ್ಯ ರಂಗಮAದಿರದಲ್ಲಿ ಕರ್ನಾಟಕ ರಾಜ್ಯದ ಅಂತರ್ಜಲ ಮೌಲೀಕರಣ-2020 ವರದಿ ಬಿಡುಗಡೆ ಸಮಾರಂಭ ಹಾಗೂ ಅಟಲ್ ಭೂಜಲ ಯೋಜನೆಯ ಸುಸ್ಥಿರ ಅಂತರ್ಜಲ ನಿರ್ವಹಣೆಯಲ್ಲಿ ಸಮುದಾಯದ ಸಹಭಾಗಿತ್ವ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆ ಮತ್ತು ಪುಸ್ತಕ ಬಿಡುಗಡೆಯನ್ನು ಕಾನೂನು,ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಧುಸ್ವಾಮಿ ಅವರು ನೆರವೇರಿಸುವರು. ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರ ಘನ ಉಪಸ್ಥಿತಿಯಲ್ಲಿ, ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಶ್ರೀನಿವಾಸಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು.
ಮುಖ್ಯ ಅತಿಥಿಗಳಾಗಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ, ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಹೆಚ್.ನಾಗೇಶ್ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಆರ್.ರಮೇಶ್ ಕುಮಾರ್, ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ. ಕೆ.ಎಂ, ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ವೈ.ನಂಜೇಗೌಡ, ಕೆ.ಜಿ.ಎಫ್ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಕಲಾ ಎಂ ಶಶಿಧರ್, ವಿಧಾನ ಪರಿಷತ್ ಶಾಸಕರಾದ ನಸೀರ್ ಅಹಮದ್, ಡಾ|| ವೈ.ಎ.ನಾರಾಯಣಸ್ವಾಮಿ, ಇಂಚರ ಗೋವಿಂದರಾಜು, ಡಾ||ಸಿ.ಆರ್.ಮನೋಹರ್, ಚಿದಾನಂದ್.ಎA.ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಓಂಶಕ್ತಿ ಚಲಪತಿ ಅವರು ಭಾಗವಹಿಸುವರು.