‘ಮಾಯಸಂದ್ರದ ಅಭಿವೃದ್ಧಿಗೆ 1 ಕೋಟಿ ರೂ.’ ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿ ಕಂದಾಯ ಸಚಿವ ಆರ್. ಅಶೋಕ್
‘ಮಾಯಸಂದ್ರದ ಅಭಿವೃದ್ಧಿಗೆ 1 ಕೋಟಿ ರೂ.’ ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿ ಕಂದಾಯ ಸಚಿವ ಆರ್. ಅಶೋಕ್
‘ಮಾಯಸಂದ್ರದ ಅಭಿವೃದ್ಧಿಗೆ 1 ಕೋಟಿ ರೂ.’
ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿ
ಕಂದಾಯ ಸಚಿವ ಆರ್. ಅಶೋಕ್
ತುಮಕೂರು : ಕಂದಾಯ ಸಚಿವರ ಗ್ರಾಮ ವಾಸ್ತವ್ಯದ ನೆನಪಿಗಾಗಿ ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದ ಅಭಿವೃದ್ಧಿಗೆ ರೂ. ಒಂದು ಕೋಟಿ ಬಿಡುಗಡೆ ಮಾಡುವುದಾಗಿ ಕಂದಾಯ ಸಚಿವ ಆರ್. ಆಶೋಕ್ ಅವರು ಘೋಷಿಸಿದರು.
ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇದೇ ದಿನ ನಡೆಯಲಿರುವ ಗ್ರಾಮ ಸಭೆಯಲ್ಲಿ ಒಂದು ಕೋಟಿ ರೂ.ಗಳನ್ನು ಯಾವ ಕಾಮಗಾರಿಗೆ ಬಳಸಿಕೊಳ್ಳಬೇಕು ಎಂಬುದನ್ನು ತೀರ್ಮಾನಿಸಲಾಗುವುದು ಎಂದರು.
ರಾಜ್ಯದ ಜನತೆ ಪಿಂಚಣಿ, ವಿಧವಾ ವೇತನ, ವೃದ್ಧಾಪ್ಯ ವೇತನ ಮುಂತಾದ ಯೋಜನೆಗಳಿಗೆ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರ ಕಚೇರಿಗೆ ಅಲೆಡಾಡಬೇಕಿತ್ತು. ಗ್ರಾಮಸ್ಥರ ಈ ಅಲೆದಾಟವನ್ನು ತಪ್ಪಿಸಲೆಂದೇ ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ಗ್ರಾಮದ ಮನೆ ಬಾಗಿಲಿಗೆ ಕರೆತರುವ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಕಂದಾಯ ಇಲಾಖೆಯಲ್ಲಿ ಇದೊಂದು ಕ್ರಾಂತಿಕಾರಕ ಪರಿವರ್ತನೆ ತರಲಾಗಿದೆ. ಇದಲ್ಲದೆ ಜಿಲ್ಲಾಧಿಕಾರಿಗಳು ಪ್ರತಿ ಮಂಗಳವಾರ ಒಂದು ತಾಲ್ಲೂಕಿಗೆ ಭೇಟಿ ನೀಡಿ ಜನರ ಸಮಸ್ಯೆಯನ್ನು ಆಲಿಸಲಿದ್ದಾರೆ ಎಂದರು.
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಪ್ರತಿ ತಿಂಗಳು ಅವರಿಗೆ ಹತ್ತು ಸಾವಿರ ರೂಪಾಯಿ ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಇದಲ್ಲದೆ ಆಸಿಡ್ ದಾಳಿಗೊಳಗಾದ ಸಂತ್ರಸ್ತ ಮಹಿಳೆಯರಿಗೆ ಆಶ್ರಯ ಯೋಜನೆಯಡಿ ನಿವೇಶನ ಮತ್ತು ಮನೆ ನಿರ್ಮಿಸಿ ಕೊಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕಂದಾಯ ದಾಖಲೆಗಳನ್ನು ಪಡೆಯಲು ದಿನಗಟ್ಟಲೇ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದಕ್ಕಾಗಿ ಆರ್‌ಟಿಸಿ, ಅಟ್ಲಾಸ್, ಜಾತಿ ಮತ್ತು ಆದಾಯ ದೃಢೀಕರಣ ಪತ್ರಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸಲಾಗಿದ್ದು, ಈವರೆಗೆ 50 ಲಕ್ಷ ಕುಟುಂಬಗಳ ಸುಮಾರು 4 ಕೋಟಿಗೂ ಅಧಿಕ ಕಂದಾಯ ದಾಖಲೆಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ಇಂದಿನ ಒಂದು ಗ್ರಾಮ ವಾಸ್ತವ್ಯದಿಂದ 5331 ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ನೀಡಲಾಗುತ್ತಿದೆ. ಇದುವರೆಗೂ ರಾಜ್ಯಾದ್ಯಂತ ಈ ಕಾರ್ಯಕ್ರಮದಡಿ ಒಂದು ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 94362 ಅರ್ಜಿಗಳನ್ನು ವಿಲೇವಾರಿ ಮಾಡಿದ್ದು, ಬಾಕಿ 12613 ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಸಂಬAಧಪಟ್ಟ ಇಲಾಖೆಗಳಿಗೆ ವರ್ಗಾಯಿಸಲಾಗಿದೆ. ಈ ತಾಲ್ಲೂಕಿಗೆ ನೀರಾವರಿ ಮತ್ತು ಪಿಡಬ್ಲ್ಯೂಡಿ ಸೇರಿದಂತೆ 1600 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದರು.
ಸAಸದ ಜಿ.ಎಸ್. ಬಸವರಾಜು ಮಾತನಾಡಿ, ಹೇಮಾವತಿ ನಾಲೆಯಿಂದ ತಾಲ್ಲೂಕಿನ ಚಿತ್ರಣವೇ ಬದಲಾಗಿದ್ದು, ಗುರುತ್ವದ ಮೂಲಕ ನೀರಾವರಿಯನ್ನು ಅಳವಡಿಸಿಕೊಂಡಿದೆ ಎಂದರು.
ಶಾಸಕ ಮಸಾಲ ಜಯರಾಂ ಮಾತನಾಡಿ, 2018 ರಿಂದ ಈವರೆಗೆ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದ್ದೆನೆ ಎಂದ ಅವರು, ತಾಲ್ಲೂಕಿನಾದ್ಯಂತ 128ಕ್ಕೂ ಅಧಿಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದರಲ್ಲದೇ ಸುಮಾರು 100 ಕೋಟಿ ವೆಚ್ಚದಲ್ಲಿ 3 ವಸತಿ ಶಾಲೆಗಳನ್ನು ಕಟ್ಟಿಸಲಾಗಿದೆ
ತಾಲ್ಲೂಕಿನಾದ್ಯಂತ 138 ಕೋಟಿಗೂ ಅಧಿಕ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಿದ್ದು, 6 ಕೋಟಿಗೂ ಅಧಿಕ ವೆಚ್ಚದಲ್ಲಿ ಅಂಬೇಡ್ಕರ್ ಭವನಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು.
ರಾಜ್ಯಸಭಾ ಸದಸ್ಯ ಜಗ್ಗೇಶ್ ಮಾತನಾಡಿ, 1952 ರಿಂದ ಅನೇಕ ಸರ್ಕಾರಗಳು ಬಂದು ಹೋಗಿವೆ. ಆದರೆ ಇಂದು ಸರ್ಕಾರವೇ ಮನೆ ಬಾಗಿಲಿಗೆ ಬಂದಿದ್ದು, ರೈತರು, ನಾಗರೀಕರು ತಮ್ಮ ಅಹವಾಲುಗಳನ್ನು ಹೇಳಿಕೊಂಡು ಪರಿಹರಿಸಿಕೊಳ್ಳಬಹುದಾಗಿದೆ ಎಂದರು.
ಶಾಸಕರಾದ ಜ್ಯೋತಿ ಗಣೇಶ್, ಸಿ.ಎಂ. ರಾಜೇಶ್ ಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳ ಗೌರಮ್ಮ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲರು, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರ ವಾಡ್, ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಇದ್ದರು.
***************
ಜಿಲ್ಲೆಯಲ್ಲಿ 34,000 ಹೆಕ್ಟೇರ್
ಅರಣ್ಯ ಭೂಮಿ ರೈತರಿಗೆ
ತುಮಕೂರು ಜಿಲ್ಲೆಯ 34 ಸಾವಿರ ಹೆಕ್ಟೇರ್ ಡೀಮ್ಡ್ ಅರಣ್ಯ ಪ್ರದೇಶದ 20 ಸಾವಿರ ಹೆಕ್ಟೇರ್ ಭೂಮಿಯನ್ನು ಕಂದಾಯ ಇಲಾಖೆ ವಶಕ್ಕೆ ಪಡೆದು ಉಳುಮೆ ಮಾಡುತ್ತಿರುವ ರೈತರಿಗೆ ನೀಡಲಾಗುವುದು
ಇನಾಂ ಜಮೀನುಗಳ ಮರು ಮಂಜೂರಾತಿ ಅರ್ಜಿ ಸಲ್ಲಿಸಲು ಇನ್ನೊಂದು ವರ್ಷ ಅವಧಿ ವಿಸ್ತರಿಸಲಾಗಿದ್ದು, ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಪ್ರಸ್ತುತ 30 ದಿನಗಳ ಕಾಲಾವಕಾಶವನ್ನು 3 ದಿನಗಳಿಗೆ ಇಳಿಸಲು ಕ್ರಮವಹಿಸಲಾಗುವುದು. ಕರ್ನಾಟಕ ಭೂ ಕಂದಾಯ ಅಧಿನಿಯಮದಡಿ 1964ರ ಕಲಂ 94ಸಿ ಮತ್ತು 94ಸಿಸಿ ಅಡಿಯಲ್ಲಿ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮ ಮಾಡಲು ಒಂದು ವರ್ಷದವರೆಗೆ ಅವಕಾಶ ಕಲ್ಪಿಸಲಾಗಿದೆ
ತುರುವೇಕೆರೆ ತಾಲೂಕಿನ ಮಾಯಸಂದ್ರ, ಶಿರಾ ಗೌಡಗೆರೆ, ತಿಪಟೂರು ನೊಣವಿನ ಕೆರೆಗೆ ನಾಡ ಕಚೇರಿಗಳನ್ನು ಮಂಜೂರು ಮಾಡಲಾಗಿದ್ದು, ಗುಬ್ಬಿ ತಾಲ್ಲೂಕಿನಲ್ಲಿ 62 ಲಕ್ಷ ರೂ. ಯೋಜನೆಯಡಿ ಉಪನೋಂದಣಾಧಿಕಾರಿ ಕಚೇರಿ ಉದ್ಘಾಟನೆ ಮಾಡಲಾಗಿದ್ದು, ತುರುವೇಕೆರೆಯಲ್ಲಿ ಮಿನಿ ವಿಧಾನ ಸೌಧಕ್ಕೆ 10 ಕೋಟಿ ರೂ. ನೀಡಲಾಗುವುದು.
-ಆರ್. ಆಶೋಕ್, ಕಂದಾಯ ಸಚಿವ