ಮುಖ್ಯಮಂತ್ರಿ ಬೊಮ್ಮಾಯಿ ಮಂಡಿಸಿದ ಮೊದಲ ಬಜೆಟ್ ಹೊಸ ತೆರಿಗೆ ಹೊರೆ ಇಲ್ಲ್ಲ-‘ಭರವಸೆಯೇ ಎಲ್ಲ’ -ಮುಖ್ಯಾಂಶಗಳು

ಮುಖ್ಯಮಂತ್ರಿ ಬೊಮ್ಮಾಯಿ ಮಂಡಿಸಿದ ಮೊದಲ ಬಜೆಟ್ ಹೊಸ ತೆರಿಗೆ ಹೊರೆ ಇಲ್ಲ್ಲ-‘ಭರವಸೆಯೇ ಎಲ್ಲ’ 

ಮುಖ್ಯಮಂತ್ರಿ ಬೊಮ್ಮಾಯಿ ಮಂಡಿಸಿದ ಮೊದಲ ಬಜೆಟ್ ಹೊಸ ತೆರಿಗೆ ಹೊರೆ ಇಲ್ಲ್ಲ-‘ಭರವಸೆಯೇ ಎಲ್ಲ’ -ಮುಖ್ಯಾಂಶಗಳು


ಮುಖ್ಯಮಂತ್ರಿ ಬೊಮ್ಮಾಯಿ ಮಂಡಿಸಿದ ಮೊದಲ ಬಜೆಟ್
ಹೊಸ ತೆರಿಗೆ ಹೊರೆ ಇಲ್ಲ್ಲ-‘ಭರವಸೆಯೇ ಎಲ್ಲ’ 

ಮತ್ತು ಮುಖ್ಯಾಂಶಗಳು


ಬೆಂಗಳೂರು: ಬಯಸದೇ ಬಂದ “ ಗದ್ದುಗೆ ಭಾಗ್ಯ”ವನ್ನು ಸಾಮರ್ಥ್ಯ ಮೀರಿ ನಿಭಾಯಿಸುತ್ತಿರುವ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚಿ 4ರ ಶುಕ್ರವಾರ ಮಧ್ಯಾಹ್ನ 12.30ಗಂಟೆಗೆ ಅವರ ಮೊಟ್ಟ ಮೊದಲ ಮುಂಗಡಪತ್ರವನ್ನೂ ಮಂಡಿಸಿಬಿಟ್ಟರು.


ಬಜೆಟ್ ಮಂಡನೆಗೆ ಮುನ್ನವೇ ಮುಂಜಾನೆ ನಗರದ ಒಂದೆರೆಡು ದೇವಾಲಯಗಳಲ್ಲಿ ಕರ್ನಾಟಕದ ಜನತೆಯ ಹೆಸರಿನಲ್ಲಿ ಸಂಕಲ್ಪ ಮಾಡಿ ಪೂಜೆ ಸಲ್ಲಿಸಿದ ಬೊಮ್ಮಾಯಿಯವರಿಗೆ ಹಣಕಾಸು ಇಲಾಖೆ ಅಧಿಕಾರಿಗಳು ಬಜೆಟ್ ಪ್ರತಿಯನ್ನು ನೀಡಿದರು. ನಿಯಮಿತ ಕಾರ್ಯಕ್ರಮದಂತೆ ಬಜೆಟ್ ಮಂಡನೆಗೆ ಮುನ್ನ ಸಚಿವ ಸಂಪುಟ ಸಭೆಯನ್ನು ನಡೆಸಿದ ಮುಖ್ಯಮಂತ್ರಿಯವರು ಅಲ್ಲಿ ಬಜೆಟ್‌ಗೆೆ ಅನುಮೋದನೆ ಪಡೆದರು.
ವಿಧಾನ ಸಭೆಯಲ್ಲಿ ಬೊಮ್ಮಾಯಿಯವರು ಮಂಡಿಸಿದ 2022-23ನೇ ಸಾಲಿನ ಮುಂಗಡಪತ್ರದಲ್ಲಿ ಕಳೆದ ಎರಡು ವರ್ಷಗಳ ಕೋವಿಡ್ ಬಿಕ್ಕಟ್ಟಿನಿಂದ ಆಗಿರುವ ಅನಾಹುತದಿಂದ ಹೊರಬರುವ ಹಾಗೂ ಇನ್ನೊಂದು ವರ್ಷದಲ್ಲಿ ಎದುರಿಸಬೇಕಿರುವ ವಿಧಾನ ಸಭಾ ಚುನಾವಣೆಯಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ಕನಸು ಕಂಡAತಿದೆ. 


ಹಿಂದಿನ ಸಾಲಿಗೆ ಹೋಲಿಸಿದಾಗ ಜಿಎಸ್‌ಟಿ ಸಂಗ್ರಹ ಪ್ರಮಾಣ ಹೆಚ್ಚಳ ಕಂಡಿದ್ದು ಇದು ರಾಜ್ಯದ ಆರ್ಥಿಕ ಆರೋಗ್ಯ ಚೇತರಿಸಿಕೊಳ್ಳುವ  ಹಾದಿಯಲ್ಲಿದೆ ಎಂಬ ಸೂಚನೆ ಎಂದರು.


ಯಾವುದೇ ಹೊಸ ತೆರಿಗೆಗಳಿಲ್ಲ, ಈಗ ತಾನೇ ಚೇತರಿಸಿಕೊಳ್ಳುತ್ತಿರುವ ಸೂಚನೆಗಳು ಕಾಣುತ್ತಿರುವ ಸಮಯದಲ್ಲಿ ಹೊಸ ತೆರಿಗೆಗಳನ್ನು ಹೇರಲು ಬಯಸುವುದಿಲ್ಲ ಎಂದು ಅವರು, ಈಗಾಗಲೇ ಕಳೆದ ನವೆಂಬರ್‌ನಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆಯಲ್ಲಿ ರೂ.7ರಷ್ಟನ್ನು ಕಡಿತಗೊಳಿಸಿದ್ದೇವೆ, ಈ ಪದಾರ್ಥಗಳ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸುವ ಉದ್ದೇಶವೂ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಸರ್ಕಾರದ ಸರಳ ಮತ್ತು ನೇರ ತೆರಿಗೆ ಸಂಗ್ರಹದ ಮೇಲೆ ಕಣ್ಣಿಟ್ಟಿಲ್ಲ ಎಂಬ ಇಂಗಿತ ವ್ಯಕ್ತಪಡಿಸಿದರು. 


ಬಜೆಟ್ ಗಾತ್ರ ಹೆಚ್ಚಳ ಕಂಡಿದೆ, ಎಲ್ಲ ವರ್ಗಗಳ ಕಲ್ಯಾಣ ಸರ್ಕಾರದ ಉದ್ದೇಶವಾಗಿದ್ದು ಇದು ಭರವಸೆಯ ಬಜೆಟ್, ಸಾಲದ ಪ್ರಮಾಣ ಇಳಿಸಲಾಗಿದೆ. ವಿತ್ತೀಯ ಕೊರತೆ 3.26% ಮಾತ್ರ. ಎಂದರು ಮುಖ್ಯಮಂತ್ರಿ.

ಮುಖ್ಯಾಂಶಗಳು :


ಬಜೆಟ್‌ನಲ್ಲಿ ಜಿಲ್ಲೆಗೆ ಸಿಕ್ಕಿದ್ದೇನು!?


• ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳನ್ನು ಜಿಲ್ಲಾ ಮಟ್ಟದಲ್ಲಿ ಪ್ರಾರಂಭಿಸಲು ಅನುವಾಗುವಂತೆ 200ಕ್ಕೂ ಹೆಚ್ಚು ಹಾಸಿಗೆಗಳ ಸಾಮಥ್ರ‍್ಯವಿರುವ ಸರ್ಕಾರಿ ಆಸ್ಪತ್ರೆಗಳನ್ನು ಬೋಧನಾ ಆಸ್ಪತ್ರೆಗಳಾಗಿ ಪರಿವರ್ತನೆ; ಈ ವರ್ಷ ತುಮಕೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಪ್ರಾರಂಭ. • ತುಮಕೂರಿನÀಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ ಸ್ಥಾಪನೆ; 2022-23ರಲ್ಲಿ 10 ಕೋಟಿ ರೂ. ಅನುದಾನ.

ಆಯವ್ಯಯ ಘೋಷಣೆ: ಮುಖ್ಯಾಂಶಗಳು


• ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಎಲ್ಲ ಹಂತಗಳಲ್ಲಿ ನೂತನ ಪಠ್ಯಕ್ರಮ ರಚನೆ.


• ಹೋಬಳಿ ಮಟ್ಟದಲ್ಲಿ "ಮಾದರಿ ಶಾಲೆ"ಗಳು.• ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. 


• ಸರ್ಕಾರಿ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣಕ್ಕೆ 100 ಕೋಟಿ ರೂ.

169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್. *ರಾಜ್ಯದ ಏಳು ಸರ್ಕಾರಿ ಇಂಜಿನಿಯರಿAಗ್ ಕಾಲೇಜುಗಳ ಉನ್ನತೀಕರಣ; ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ.


• ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆ.
ದುರ್ಬಲ ವರ್ಗಗಳ ಸಬಲೀಕರಣ


• ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳ ಯೋಜನೆಗಳಿಗೆ 800 ಕೋಟಿ ರೂ.


• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮರ್ಥ್ಯದ ಬಹುಮಹಡಿಯ ದೀನ್ ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸಮುಚ್ಛಯ ನಿರ್ಮಾಣ.


• ಪ್ರತಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಒಂದು ಶಾಲೆಯನ್ನು ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಾಗಿ ಮರುನಾಮಕರಣ; ಪದವಿ ಪೂರ್ವ ತರಗತಿ ಪ್ರಾರಂಭ; ಸಿಬಿಎಸ್‌ಇ ಮಾನ್ಯತೆ ಪಡೆಯಲು ಕ್ರಮ. 25 ಕೋಟಿ ರೂ. ಅನುದಾನ.


• ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆ .


• ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಯೋಜನೆಯಲ್ಲಿ  ಶೇ.25ರಷ್ಟು ಮಹಿಳೆಯರಿಗೆ ಮೀಸಲು.
• ಗಂಗಾ ಕಲ್ಯಾಣ ಯೋಜನೆಯಲ್ಲಿ ಸುಧಾರಣೆ; ಬೋರ್ ವೆಲ್ ಕೊರೆಯಲು ಡಿ.ಬಿ.ಟಿ. ಮೂಲಕ ಹಣ ವರ್ಗಾವಣೆ; ವಿದ್ಯುದೀಕರಣ ಶುಲ್ಕ ಸರ್ಕಾರದಿಂದ ಪಾವತಿ. 2022-23ರಲ್ಲಿ ಒಟ್ಟಾರೆ 1,115 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.


• ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯಗಳ ನಿಗಮಗಳಡಿ 400 ಕೋಟಿ ರೂ. ಅಭಿವೃದ್ಧಿ ಯೋಜನೆ. ದೇವರಾಜ ಅರಸು ಅಭಿವೃದ್ಧಿ ನಿಗಮದಡಿ ಬರುವ ಇತರ ಹಿಂದುಳಿದ ಸಮುದಾಯಗಳಿಗೆ 400 ಕೋಟಿ ರೂ. ಯೋಜನೆ


• ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ತಲಾ 100 ಕೋಟಿ ರೂ. ಯೋಜನೆ.


• ಮರಾಠಾ ಅಭಿವೃದ್ಧಿ ನಿಗಮದ ಕಾರ್ಯಕ್ರಮಗಳಿಗೆ 50 ಕೋಟಿ ರೂ.


• ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ 50 ಕೋಟಿ ರೂ. ಯೋಜನೆ ಹಾಗೂ ಜೈನ, ಸಿಖ್ ಮತ್ತು ಬೌದ್ಧ ಸಮುದಾಯಗಳ ಅಭಿವೃದ್ಧಿಗೆ 50 ಕೋಟಿ ರೂ. ಯೋಜನೆ.

ರಾಜ್ಯದ ಪ್ರಮುಖ ನಗರಗಳಲ್ಲಿ ಹಾಗೂ ಬೆಂಗಳೂರಿನ ಎಲ್ಲ ವಾರ್ಡ್ಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಟ್ಟು 438 "ನಮ್ಮ ಕ್ಲಿನಿಕ್"ಗಳ ಸ್ಥಾಪನೆ.


300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ. 


• ಬಡ ಹಿರಿಯ ನಾಗರಿಕರಿಗೆ ಯೋಜನೆಯಡಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ ಸೌಲಭ್ಯ. 


• ಹುಬ್ಬಳ್ಳಿಯಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಹೃದ್ರೋಗ ಕೇಂದ್ರ ಸ್ಥಾಪನೆ. • ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊAದಿಗೆ 75 ತಾಲ್ಲೂಕು ಆಸ್ಪತ್ರೆಗಳ ಮ್ಯಾಪಿಂಗ್, ತಾಲ್ಲೂಕು ಮಟ್ಟದಲ್ಲಿ ಹೃದಯ ಸಂಬAಧಿ ಚಿಕಿತ್ಸೆ.


• ಬೆಳಗಾವಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪನೆ.


• ಆಯ್ದ 10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ನೀಡುವ Iಟಿಜಿusioಟಿ ಅeಟಿಣಡಿe ಗಳನ್ನು ಸ್ಥಾಪಿಸಲಾಗುವುದು.


• ಏಳು ತಾಲ್ಲೂಕು ಆಸ್ಪತ್ರೆಗಳು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.


• “ಮುಖ್ಯಮಂತ್ರಿ ಆರೋಗ್ಯ ವಾಹಿನಿ” ಯೋಜನೆಯಡಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಒದಗಿಸಲು ಬೀದರ್, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಚಾರಿ ಕ್ಲಿನಿಕ್ ಪ್ರಾರಂಭ.


• ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ.


ಬಡವರಿಗೆ ವೈದ್ಯಕೀಯ ಶಿಕ್ಷಣಕ್ಕೆ ನೆರವು


• ಬಡವರಿಗೆ ವೈದ್ಯಕೀಯ ಶಿಕ್ಷಣ ಅವಕಾಶ ಒದಗಿಸಲು ಅ. ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ. ಆ. ಸರ್ಕಾರಿ ಕೋಟಾದಡಿ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕುಗಳಿAದ ಶೈಕ್ಷಣಿಕ ಸಾಲ ಒದಗಿಸಲು ನೆರವು.


• ಪೌಷ್ಟಿಕ ಕರ್ನಾಟಕÀ ಯೋಜನೆಯಡಿ 93 ಕೋಟಿ ರೂ. ವೆಚ್ಚದಲ್ಲಿ ಪ್ರಾಯೋಗಿಕವಾಗಿ ರಾಜ್ಯದ 14 ಜಿಲ್ಲೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆ.


• ಬಾಲ್ಯವಿವಾಹ ಹಾಗೂ ಹೆಣ್ಣುಮಕ್ಕಳು ಶಾಲೆಬಿಡುವುದನ್ನು ತಪ್ಪಿಸಿ, ಅಪೌಷ್ಟಿಕತೆ ನಿವಾರಿಸುವ “ಸ್ಫೂರ್ತಿ” ಯೋಜನೆ ರಾಜ್ಯಾದ್ಯಂತ ವಿಸ್ತರಣೆ.

ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ:


• ಆಯ್ದ ಸ್ವ-ಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು, 500 ಕೋಟಿ ರೂ. ಅನುದಾನ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆ. 3.9 ಲಕ್ಷ ಮಹಿಳೆಯರಿಗೆ ಅನುಕೂಲ.


• ಮಹಿಳಾ ಸ್ವ-ಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕುಗಳಿAದ ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ. 


• ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ “ಅಸ್ಮಿತೆ” ಹೆಸರಿನಡಿ ಮಾರಾಟ; ರಾಜ್ಯ ಮಟ್ಟದಲ್ಲಿ ಮಾರಾಟ ಮೇಳ 


• ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ, ಧಾರವಾಡದಲ್ಲಿ ಕಸೂತಿ, ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ, ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ ಹಾಗೂ ಇಳಕಲ್, ಗುಳೇದಗುಡ್ಡ, ಬೆಳಗಾವಿ - ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮುರುನÀಲ್ಲಿ ಸೀರೆ ಮೈಕ್ರೋಕ್ಲಸ್ಟರ್ ಅಭಿವೃದ್ಧಿ.