ಮಾ. 28 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವಿದ್ಯಾರ್ಥಿಗಳಲ್ಲಿರುವ ಆತ್ಮವಿಶ್ವಾಸ ತುಂಬಿ - ಸಿಇಓ

ಮಾ. 28 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವಿದ್ಯಾರ್ಥಿಗಳಲ್ಲಿರುವ ಆತ್ಮವಿಶ್ವಾಸ ತುಂಬಿ - ಸಿಇಓ

ಮಾ. 28 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವಿದ್ಯಾರ್ಥಿಗಳಲ್ಲಿರುವ ಆತ್ಮವಿಶ್ವಾಸ ತುಂಬಿ - ಸಿಇಓ


ಮಾ. 28 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: 
ವಿದ್ಯಾರ್ಥಿಗಳಲ್ಲಿರುವ ಆತ್ಮವಿಶ್ವಾಸ ತುಂಬಿ - ಸಿಇಓ


ತುಮಕೂರು: ಜಿಲ್ಲೆಯಲ್ಲಿ ಮಾರ್ಚ್ 28 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಲ್ಲಿರುವ ಅನಗತ್ಯ ಭಯ, ಆತಂಕವನ್ನು ದೂರ ಮಾಡಿ ಶಾಂತಚಿತ್ತತೆಯಿAದ  ಪರೀಕ್ಷೆ ಎದುರಿಸುವ ಧೈರ್ಯ ತುಂಬಬೇಕೆAದು ಶಾಲಾ ಮುಖ್ಯ ಶಿಕ್ಷಕರುಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.


ನಗರದ ಗುರುಕುಲ ವಿದ್ಯಾಸಂಸ್ಥೆಯಲ್ಲಿAದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಪರೀಕ್ಷೆಗೆ ಯಾವುದೇ ವಿದ್ಯಾರ್ಥಿ ಗೈರು ಹಾಜರಾಗದಂತೆ ಕ್ರಮವಹಿಸಬೇಕು. ಕೋವಿಡ್ ಮತ್ತಿತರ ಕಾರಣಗಳಿಂದ ವಲಸೆ ಹೋಗಿರುವ, ಶಾಲೆಯನ್ನು ಬಿಟ್ಟ ಹಾಗೂ ಶಾಲೆಗೆ ಬಾರದ 10ನೇ ತರಗತಿ ಮಕ್ಕಳನ್ನು ಪತ್ತೆ ಹಚ್ಚಿ ಕರೆತಂದು ಪರೀಕ್ಷೆ ಬರೆಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಶಿಕ್ಷಕರು ಸೇರಿದಂತೆ ಮುಖ್ಯ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ನಿರ್ದೇಶಿಸಿದರು. 


ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸುಸ್ಥಿತಿಯಲ್ಲಿರುವ ಗಡಿಯಾರವನ್ನು ಅಳವಡಿಸಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವಾಗುವಂತೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯವನ್ನು ಒದಗಿಸಬೇಕು ಎಂದರಲ್ಲದೆ, ಪರೀಕ್ಷಾ ಕೇಂದ್ರಗಳಲ್ಲಿ ನಕಲು ಮಾಡುವುದು ಕಂಡು ಬಂದರೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಅವರು ಯಾವುದೇ ಗೊಂದಲ, ದೂರುಗಳಿಗೆ ಅವಕಾಶ ನೀಡದೆ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಸೂಚನೆ ನೀಡಿದರು.


ಪರೀಕ್ಷಾ ಸಮಯದಲ್ಲಿ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ರಜೆ ಮೇಲೆ ತೆರಳುವಂತಿಲ್ಲ. ಕೋವಿಡ್ ಮಾರ್ಗಸೂಚಿ ಹಾಗೂ ಪರೀಕ್ಷಾ ಮಾರ್ಗಸೂಚಿಗಳನ್ನು ಪಾಲಿಸಬೇಕು. ಜಿಲ್ಲೆಯ ಫಲಿತಾಂಶವು ಪ್ರತಿಶತ 100ರಷ್ಟು ಬರುವಂತೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ಶೈಕ್ಷಣಿಕ ವ್ಯವಸ್ಥೆಯನ್ನು ಸುಧಾರಿಸಲು ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವ ಕುರಿತು ಮಾತನಾಡಿದ ಅವರು, ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಶಾಲೆಗಳಿಗೆ ಶೌಚಾಲಯ, ಶಾಲಾ ಆವರಣ ಗೋಡೆ, ಆಟದ ಮೈದಾನ, ಭೋಜನಾಲಯಗಳನ್ನು ನಿರ್ಮಿಸಲು ಅವಕಾಶವಿದ್ದು, ಶಾಲಾ ಆಡಳಿತ ಮಂಡಳಿ ಹಾಗೂ  ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದು ಕಾಮಗಾರಿಗಳನ್ನು ಕೈಗೊಂಡು ಮಕ್ಕಳ ಕಲಿಕೆಗೆ ಉತ್ತಮ ವಾತಾವರಣ ಕಲ್ಪಿಸಬೇಕೆಂದು ತಿಳಿಸಿದರು


ಜಿಲ್ಲೆಯ ಹಲವೆಡೆ ಹಾಳಾಗಿರುವ ಶಾಲಾ ಕಟ್ಟಡಗಳು ದುರಸ್ತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದ ಅವರು ಅಮೃತ ಗ್ರಾಮ ಪಂಚಾಯತಿಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಈಗಾಗಲೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಿದ್ಧತೆಗಾಗಿ ರೂಪಿಸಿರುವ ಅಭ್ಯಾಸ ಹಾಳೆಗಳನ್ನು  ಬಿಡುಗಡೆ ಮಾಡಲಾಯಿತು. 


ಸಭೆಯಲ್ಲಿ ಡಿಡಿಪಿಐಗಳಾದ ಸಿ. ನಂಜಯ್ಯ ಹಾಗೂ ರೇವಣ ಸಿದ್ದಪ್ಪ, ಡಯಟ್ ಪ್ರಾಂಶುಪಾಲ ಮಂಜುನಾಥ್, ಪ್ರಾಥಮಿಕ ಶಿಕ್ಷಣ ನಿರ್ದೇಶಕ ಪ್ರಸನ್ನ ಕುಮಾರ್, ಬಿಇಓಗಳು ಸೇರಿದಂತೆ ಜಿಲ್ಲೆಯ ಸರ್ಕಾರಿ/ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರು ಹಾಜರಿದ್ದರು.