ಸ್ವಂತ ಬಲದ ಕಾಂಗ್ರೆಸ್ ಸರ್ಕಾರ ರಚನೆ ಬಿಜೆಪಿ ಸರ್ಕಾರದಿಂದ ಅವೈಜ್ಞಾನಿಕ ಕಾನೂನು: ಡಿಕೆಶಿ 

ಸ್ವಂತ ಬಲದ ಕಾಂಗ್ರೆಸ್ ಸರ್ಕಾರ ರಚನೆ ಬಿಜೆಪಿ ಸರ್ಕಾರದಿಂದ ಅವೈಜ್ಞಾನಿಕ ಕಾನೂನು: ಡಿಕೆಶಿ 


ಸ್ವಂತ ಬಲದ ಕಾಂಗ್ರೆಸ್ ಸರ್ಕಾರ ರಚನೆ
ಬಿಜೆಪಿ ಸರ್ಕಾರದಿಂದ ಅವೈಜ್ಞಾನಿಕ ಕಾನೂನು: ಡಿಕೆಶಿ 

ಹಾಸನ: ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ 70ಲಕ್ಷ ಗುರಿ ಮುಟ್ಟುವ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 63 ಲಕ್ಷ ಸದಸ್ಯತ್ವ ನೋಂದಣಿ ಮಾಡಲಾಗಿದೆ. ಕಾರ್ಯಕರ್ತರು ಮನೆ ಮನೆಗೆ ಹೋಗಿ ಸದಸ್ಯತ್ವ ಮಾಡಿ 70 ಲಕ್ಷ ಗುರಿ ತಲುಪುವ ವಿಶ್ವಾಸವಿದೆ ಎಂದರು.

ಇಡೀ ರಾಜ್ಯದಲ್ಲಿ ಜನ ಬಿಜೆಪಿ ಹಾಗೂ ದಳದಲ್ಲಿ ಗುರುತಿಸಿಕೊಂಡವರು ಕಾಂಗ್ರೆಸ್ ಸದಸ್ಯರಾಗುತ್ತಿದ್ದು, ನಮಗೆ ಆತ್ಮ ವಿಶ್ವಾಸ ಹೆಚ್ಚಿಸಿದೆ. ಪಂಚರಾಜ್ಯ ಚುನಾವಣೆಯಲ್ಲಿ ನಾವು ಪಂಜಾಬ್ ರಾಜ್ಯವನ್ನು ನಮ್ಮ ತಪ್ಪಿನಿಂದ ಸೋತಿದ್ದೇವೆ. ಬಿಜೆಪಿಯವರು ಇಲ್ಲಿಯೂ ಗೆಲ್ಲುವುದಾಗಿ ಬೀಗುತ್ತಿದ್ದಾರೆ. ಆದರೆ ಜನ ಕಾಂಗ್ರೆಸ್ ಜತೆ ಗುರುತಿಸಿಕೊಳ್ಳುತ್ತಿದ್ದಾರೆ. ಚುನಾವಣೆ ಫಲಿತಾಂಶ ನಂತರವೂ 30 ಲಕ್ಷ ಸದಸ್ಯರು ನೋಂದಣಿ ಆಗಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ತರಲು ಅವರೆಲ್ಲ ಸದಸ್ಯರಾಗುತ್ತಿರುವುದು ಸ್ಪಷ್ಟವಾಗಿದೆ. ಬಿಜೆಪಿ ಭ್ರಷ್ಟಾಚಾರದ ಬಗ್ಗೆ ನಾವು ಹೇಳಬೇಕಾಗಿಲ್ಲ. ವಿಶ್ವನಾಥ್, ಕೆಂಪಣ್ಣ ಅವರೆಲ್ಲರೂ ಹೇಳಿದ್ದಾರೆ ಎಂದರು.

ಪೆಟ್ರೋಲ್, ಡೀಸೆಲ, ರಸಗೊಬ್ಬರದ ಬೆಲೆ ಎಲ್ಲವೂ ಏರಿಕೆ ಆಗಿದ್ದು, ಬಿಜೆಪಿ ಜನರ ಜೀವನದ ಜತೆ ಚೆಲ್ಲಾಟವಾಡುತ್ತಿದೆ. ಜನ ಅರ್ಥ ಮಾಡಿಕೊಂಡಿದ್ದು, ಚುನಾವಣೆ ಬರಲಿ, ಅವಕಾಶ ಸಿಗಲಿ ಎಂದು ಕಾಯುತ್ತಿದ್ದಾರೆ. ರೈತರು ನೆಮ್ಮದಿಯಾಗಿಲ್ಲ, ಕೈಗಾರಿಕೆಗಳಿಗೆ ಬಂಡವಾಳ ಬರುತ್ತಿಲ್ಲ. ವ್ಯಾಪಾರಸ್ಥರಿಗೂ ತೊಂದರೆ ಆಗಿದೆ. ಪ್ರತಿ ಜಿಲ್ಲಾಯಲ್ಲಿ ಕೋಮುವಾದ ಹರಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ನಾವು ಕೊಟ್ಟ ಭರವಸೆಯನ್ನು ಶೇ.90 ರಷ್ಟು ಈಡೇರಿಸಿದ್ದೇವೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಕಾರಕ್ಕೆ ಬಂದರೆ ಎಲ್ಲ ವರ್ಗ ಅಧಿಕಾರಕ್ಕೆ ಬಂದAತೆ. ನಾವು ಮಕ್ಕಳಿಗೆ ಬಿಸಿಯೂಟ ಯೋಜನೆ, ಹೈನುಗಾರಿಕೆ ರೈತರಿಗೆ ಹಾಲಿನ ಪ್ರೋತ್ಸಾಹ ಧನ, ಪರಿಶಿಷ್ಟರ ಜನಸಂಖ್ಯೆ ಆಧಾರದ ಮೇಲೆ ಅನುದಾನ, ಯುಪಿಎ ಅವಯಲ್ಲಿ ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು, ಮಾಹಿತಿ ಹಕ್ಕು ಕಾಯ್ದೆ, ಆದರೆ ಬಿಜೆಪಿ ಅವರು ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ, ಆರ್ಟಿಕಲ್ 370 ಯಂತಹ ಕಾನೂನು ತರುತ್ತಿದ್ದಾರೆಯೇ ಹೊರತು ಜನರ ಆದಾಯ ಹೆಚ್ಚಿಸಲು, ರೈತರ ಬೆಂಬಲ ಬೆಲೆಗೆ, ಇಂಧನ ಬೆಲೆ ನಿಯಂತ್ರಣ ಮಾಡಲು, ಯುವಕರಿಗೆ ಉದ್ಯೋಗ ನೀಡಲು ಯಾವುದಾರರೂ ಕಾರ್ಯಕ್ರಮ ಮಾಡಿದ್ದಾÁರೆಯೇ ಎಂದು ಪ್ರಶ್ನಿಸಿದರು.

ಸ್ವಂತ ಬಲದ ಸರ್ಕಾರ ರಚನೆ ಮಾಡುತ್ತೇವೆ. ಜನ ಕಾಂಗ್ರೆಸ್ ಸರ್ಕಾರ ಬರಬೇಕು ಎಂದು ಅಪೇಕ್ಷಿಸುತ್ತಿದ್ದಾರೆ. ನಮ್ಮಲ್ಲಿ ಯಾವುದೇ ಬಣ ಇಲ್ಲ. ಕಾಂಗ್ರೆಸ್ ಬಣ ಅಷ್ಟೇ. ನಾನು ಪಕ್ಷದ ಅಧ್ಯಕ್ಷನಾಗಿದ್ದೇನೆ. ಪಕ್ಷದ ಕಾರ್ಯಕರ್ತನಾಗಿದ್ದೇನೆ ಎಂದು ಅವರು ಹೇಳಿದರು.

ನಾವು ನಮ್ಮ ನಾಯಕರ ಜತೆ ಚರ್ಚಿಸಿದ್ದು, ಈ ತಿಂಗಳಲ್ಲಿ ವಿಭಾಗವಾರು ಮಟ್ಟದಲ್ಲಿ ಎಲ್ಲ ಜಿಲ್ಲಾ ನಾಯಕರನ್ನು ಕರೆಸಿ ಸಭೆ ಮಾಡುತ್ತಿದ್ದೇನೆ. ಪ್ರತಿ ವಿಧಾನಸಭಾ ಕ್ಷೇತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮ ಬಳಿ ಇರುವ ವರದಿ ಬಗ್ಗೆಯೂ ಚರ್ಚಿಸುತ್ತೇವೆ. ಅಭ್ಯರ್ಥಿ ಆಯ್ಕೆ ವೇಳೆ ಗೆಲುವೇ ಮಾನದಂಡ ಆಗಲಿದೆ ಎಂದರು.

ಮಸೀದಿಗಳಲ್ಲಿ ಮೈಕ್ ಶಬ್ಧ ಕುರಿತ ಸರ್ಕಾರದ ಸುತ್ತೋಲೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಸುಪ್ರೀಂಕೋರ್ಟ್ ಈಗ ಮಾಡಿರುವ ಕಾನೂನಿನಂತೆ ನಡೆದುಕೊಳ್ಳಲಿ. ಮೊನ್ನೆ ಯಾರೋ ತಲೆಕೆಟ್ಟವನು ಹಲಾಲ್ ಕಟ್ ಬೇಡ, ಪ್ರಾಣಿ ತಲೆಗೆ ಹೊಡೆದು, ಮೂರ್ಚೆಗೊಳಿಸಿ ವಧೆ ಮಾಡಬೇಕು ಎಂದ. ಪೊಲೀಸರು ಮಾಲಿನ್ಯ ನಿಯಂತ್ರಣ ಮಾಪನ ಮಾಡುವ ಯಾವ ಸಾಧನ ಇಟ್ಟುಕೊಂಡು ಪರಿಶೀಲನೆ ನಡೆಸುತ್ತಾರೆ? ಅವೈಜ್ಞಾನಿಕ ಕಾನೂನುಗಳನ್ನೇ ಬಿಜೆಪಿ ಸರ್ಕಾರ ಮಾಡುತ್ತಿದೆ. ವಾಸ್ತವವಾಗಿ ಸಾಧ್ಯವಾಗುವ ಕಾನೂನು ಮಾಡುತ್ತಿಲ್ಲ ಎಂದು ಉತ್ತರಿಸಿದರು.

ಚುನಾವಣೆಯಲ್ಲಿ ಯಾವ ವಿಚಾರ ಇಟ್ಟುಕೊಂಡು ಹೋಗುತ್ತೀರ ಎಂಬ ಪ್ರಶ್ನೆಗೆ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿಗೆ ಮುಕ್ತಿ ನೀಡಿ, ಜನರಿಗೆ ಶಕ್ತಿ ತುಂಬಿ ಅವರ ಬದುಕಿನ ವಿಚಾರವಾಗಿ ಚರ್ಚೆ ಮಾಡುತ್ತೇವೆ. ಪತ್ರಿಕೆಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಒಂದೊAದು ಹುದ್ದೆಗೆ ಒಂದೊAದು ದರ ನಿಗದಿ ಮಾಡಿರುವ ಬಗ್ಗೆ ವರದಿ ಬಂದಿವೆ. ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರದ ಎಂದರೆ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ. ಈ 40% ಸರ್ಕಾರ ವಿಚಾರವನ್ನು ಇಟ್ಟುಕೊಂಡು ಹೋರಾಟ ಮುಂದುವರಿಸುತ್ತೇವೆ. ಸದಸ್ಯತ್ವ ನೋಂದಣಿ ಕಾರ್ಯಕ್ರಮ ಮುಗಿದ ನಂತರ ನಮ್ಮ ಕಾರ್ಯಕ್ರಮ ತಿಳಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.