ಪೆದ್ದನಹಳ್ಳಿಗೆ ಡಿಸಿ,ಎಸ್ಪಿ ಭೇಟಿ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ
ಪೆದ್ದನಹಳ್ಳಿಗೆ ಡಿಸಿ,ಎಸ್ಪಿ ಭೇಟಿ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ

ಪೆದ್ದನಹಳ್ಳಿಗೆ ಡಿಸಿ,ಎಸ್ಪಿ ಭೇಟಿ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ
ತುಮಕೂರು: ಗುಬ್ಬಿ ತಾಲ್ಲೂಕು ಪೆದ್ದನಹಳ್ಳಿ ಗ್ರಾಮದಲ್ಲಿ ಹತ್ಯೆಗೀಡಾದ ಗಿರೀಶ್ ಅವರ ಮನೆಗೆ ಸೋಮವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಪೂರ್‌ವಾಡ್ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಮೃತರ ಕುಟುಂಬಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಕ್ರಮವಹಿಸುವಂತೆ ತಹಶೀಲ್ದಾರ್ ಆರತಿಯವರಿಗೆ ಸೂಚಿಸಿದರು. ಇದಕ್ಕೂ ಮುನ್ನ ಕೊಲೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳೀಯರಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಕುಮಾರಪ್ಪ, ಗುಬ್ಬಿ ಸರ್ಕಲ್ ಇನ್ಸ್ಪೇಕ್ಟರ್ ನದಾಫ್, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಮತ್ತಿತರರು ಇದ್ದರು.