ಕರ್ನಾಟಕ ಮಾಧ್ಯಮ ಅಕಾಡೆಮಿ ನಿಯೋಗ ಭೇಟಿ: ಪತ್ರಿಕಾ ದಿನ ಆಚರಣೆಗೆ ರಾಜ್ಯಪಾಲರಿಗೆ ಆಹ್ವಾನ
ಕರ್ನಾಟಕ ಮಾಧ್ಯಮ ಅಕಾಡೆಮಿ ನಿಯೋಗ ಭೇಟಿ: ಪತ್ರಿಕಾ ದಿನ ಆಚರಣೆಗೆ ರಾಜ್ಯಪಾಲರಿಗೆ ಆಹ್ವಾನ

ಕರ್ನಾಟಕ ಮಾಧ್ಯಮ ಅಕಾಡೆಮಿ ನಿಯೋಗ ಭೇಟಿ:
ಪತ್ರಿಕಾ ದಿನ ಆಚರಣೆಗೆ ರಾಜ್ಯಪಾಲರಿಗೆ ಆಹ್ವಾನ
ಬೆಂಗಳೂರು: ಬರುವ ಜುಲೈ ಒಂದರಂದುಆಯೋಜಿಸಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆ ಮಾಡಲು ಆಗಮಿಸುವಂತೆ ಆಹ್ವಾನಿಸುವ ಸಲುವಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ನಿಯೋಗವು ಗುರುವಾರ ರಾಜ್ಯಪಾಲರಾದ ಥವಾರ್ ಚಂದ್ ಗೆಹ್ಲೊಟ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲರು, ಪತ್ರಕರ್ತರ ಬಗ್ಗೆ ತಮಗೆ ವಿಶೇಷ ಗೌರವವಿದ್ದು, ಕಾರ್ಯಕ್ರಮಕ್ಕೆ ಬರಲು ಪ್ರಯತ್ನ ಮಾಡುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅವರು, ಕನ್ನಡ ಪತ್ರಿಕೋದ್ಯಮ ಬಗ್ಗೆ ಮಾಹಿತಿಯುಳ್ಳ "ಕನ್ನಡ ಜರ್ನಲಿಸಮ್ ಮತ್ತು ಟಿಎಸ್ಆರ್" ಪುಸ್ತಕವನ್ನು ರಾಜ್ಯಪಾಲರಿಗೆ ನೀಡಿದರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು, ತಾವು ಬರೆದ "ಕೋವಿಡ್ ಕಥೆಗಳು" ಪುಸ್ತಕವನ್ನು ಕೊಡುಗೆಯಾಗಿ ನೀಡಿದರು. ರಾಜ್ಯದಲ್ಲಿ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ಕೊಡಿಸಿರುವುದನ್ನು ಈ ಪುಸ್ತಕದಲ್ಲಿ ದಾಖಲು ಮಾಡಿರುವುದಾಗಿ ವಿವರಿಸಿದರು.
ನಿಯೋಗದಲ್ಲಿ ಅಕಾಡೆಮಿ ಸದಸ್ಯರಾದ ನಾಗಾರ್ಜುನ ದ್ವಾರಕನಾಥ್, ಬದ್ರುದ್ದೀನ್, ಶಿವರಾಜ್, ಎಸ್.ಲಕ್ಷ್ಮಿನಾರಾಯಣ, ಶಿವಕುಮಾರ್ ಬೆಳ್ಳಿತಟ್ಟೆ ಅವರಿದ್ದರು.