ಗ್ರಾ.ಪಂ. ಸದಸ್ಯರ ಗೌರವಧನ ಹೆಚ್ಚಳ: ಸಿಎಂಗೆ ವಿಧಾನ ಪರಿಷತ್ ನಿಯೋಗ ಮನವಿ

ಗ್ರಾ.ಪಂ. ಸದಸ್ಯರ ಗೌರವಧನ ಹೆಚ್ಚಳ: ಸಿಎಂಗೆ ವಿಧಾನ ಪರಿಷತ್ ನಿಯೋಗ ಮನವಿ

ಗ್ರಾ.ಪಂ. ಸದಸ್ಯರ ಗೌರವಧನ ಹೆಚ್ಚಳ: ಸಿಎಂಗೆ ವಿಧಾನ ಪರಿಷತ್ ನಿಯೋಗ ಮನವಿ


ಗ್ರಾ.ಪಂ. ಸದಸ್ಯರ ಗೌರವಧನ ಹೆಚ್ಚಳ:
ಸಿಎಂಗೆ ವಿಧಾನ ಪರಿಷತ್ ನಿಯೋಗ ಮನವಿ


ಬೆಂಗಳೂರು: ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರನ್ನು ಗುರುವಾರ ವಿಧಾನ ಪರಿಷತ್ ನಿಯೋಗ ಭೇಟಿ ಮಾಡಿ  ಗ್ರಾ.ಪಂ. ಸದಸ್ಯರ ಗೌರವ ಧನ ಹೆಚ್ಚಿಸುವಂತೆ ಮನವಿ ಮಾಡಲಾಯಿತು. 

ಗ್ರಾಮ ಪಂಚಾಯತ್ ಸದಸ್ಯರ ಗೌರವಧನ ತಿಂಗಳಿಗೆ ಕನಿಷ್ಠ 10 ಸಾವಿರ ರೂಪಾಯಿಗಳಿಗೆ ಹೆಚ್ಚಿಸುವುದು. ಇತರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಿಗೆ ಅವರವರ ಕೆಲಸ ಕಾರ್ಯಗಳ ಅನುಗುಣವಾಗಿ ಗೌರವಧನವನ್ನು ಹೆಚ್ಚಿಸುವುದು. ಚುನಾಯಿತ ಪ್ರತಿನಿಧಿಗಳಿಗೆ ಜಿಲ್ಲಾ ಮಟ್ಟದಲ್ಲಿ ಓಡಾಡಲು ಉಚಿತ ಬಸ್ ಪಾಸ್ ಒದಗಿಸುವುದು. ಆರೋಗ್ಯ ವಿಮೆ ಮತ್ತು ಉಚಿತ ವೈದ್ಯಕೀಯ ಸೌಲಭ್ಯವನ್ನು ಒದಗಿಸುವುದು. 5 ವರ್ಷಗಳನ್ನು ಪೂರ್ಣಗೊಳಿಸಿದ ಚುನಾಯಿತ ಪ್ರತಿನಿಧಿಗಳಿಗೆ ಪಿಂಚಣಿ ಸೌಲಭ್ಯ ಒದಗಿಸುವುದು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಆರ್ಥಿಕವಾಗಿ ಹಿಂದುಳಿದ ನಿವೇಶನ ರಹಿತ ಚುನಾಯಿತ ಪ್ರತಿನಿಧಿಗಳಿಗೆ ನಿವೇಶನ ಸೌಲಭ್ಯವನ್ನು ನೀಡುವುದು.

ಈ ಮೇಲಿನ ಸೌಕರ್ಯಗಳನ್ನು ಒದಗಿಸಿ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳನ್ನು ಆರ್ಥಿಕವಾಗಿ ಬಲಿಷ್ಠಗೊಳಿಸಿದಾಗ ಮಾತ್ರ ಮಹಾತ್ಮ ಗಾಂಧೀಜಿಯವರು ಕಂಡ ``ಗ್ರಾಮ ಸ್ವರಾಜ್ಯದ'' ಕನಸು ನನಸಾಗುವುದು ಎಂದು ವಿಧಾನ ಪರಿಷತ್ ನಿಯೋಗ ಸಿಎಂಗೆ ಹೇಳಿತು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ ಇದ್ದರು.

ವಿಧಾನಪರಿಷತ್ ಸದಸ್ಯ ಆರ್. ರಾಜೇಂದ್ರರವರು ಸದನದಲ್ಲಿ ಮಾತನಾಡಿ, ಗ್ರಾ.ಪಂ ಸದಸ್ಯರ ಗೌರವಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು.