ಬೊಮ್ಮಾಯಿ ಸರ್ಕಾರಕ್ಕೆ 100 ದಿನ ಸಂಭ್ರಮ:  ಮತ್ತಷ್ಟು ಜನ ಪರ ಕಾರ್ಯ: ಸಿಎಂ

ಬೊಮ್ಮಾಯಿ ಸರ್ಕಾರಕ್ಕೆ 100 ದಿನ ಸಂಭ್ರಮ:  ಮತ್ತಷ್ಟು ಜನ ಪರ ಕಾರ್ಯ: ಸಿಎಂ


ಬೊಮ್ಮಾಯಿ ಸರ್ಕಾರಕ್ಕೆ 100 ದಿನ ಸಂಭ್ರಮ: 
ಮತ್ತಷ್ಟು ಜನ ಪರ ಕಾರ್ಯ: ಸಿಎಂ

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ 100 ದಿನದ ಸಂಭ್ರಮ. ಬದಲಾದ ರಾಜಕೀಯದಲ್ಲಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಯಶಸ್ವಿ 100 ದಿನಗಳನ್ನು ಪೂರೈಸಿದೆ.

ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬರುವ ದಿನಗಳಲ್ಲಿ ಮತ್ತಷ್ಟು ಜನ ಪರ ಕಾರ್ಯಗಳನ್ನು ಮಾಡುವುದಾಗಿ ಭರವಸೆ ನೀಡಿದರು. 

ವ್ಯವಸ್ಥೆಯಲ್ಲಿ ಸುಧಾರಣೆಯಾಗಬೇಕು, ಜನರ ಹತ್ತಿರ ಸರ್ಕಾರ ಮತ್ತು ಸೇವೆಯನ್ನು ಕೊಂಡೊಯ್ಯಬೇಕು, ಆರ್ಥಿಕ ಬೆಳವಣಿಗೆ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲವನ್ನು ಉಪಯೋಗಿಸಿಕೊಳ್ಳಬೇಕು ಎಂಬ ಚಿಂತನೆಯನ್ನಿಟುಕೊAಡು ಸರ್ಕಾರವನ್ನು ಮುನ್ನಡೆಸುವುದಾಗಿ ತಿಳಿಸಿದರು.

ಇದಕ್ಕೂ ಮುನ್ನ ಟ್ವಿಟ್ ಮಾಡಿದ್ದ ಮುಖ್ಯಮಂತ್ರಿ, ``ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಎಂಬ ಧ್ಯೇಯವಾಕ್ಯದಿಂದ ಪ್ರೇರಿತರಾಗಿ ಆದೇ ಹಾದಿಯಲ್ಲಿ ಸಾಗುತ್ತಿದ್ದೇವೆ. ರಾಜ್ಯದ 6.5 ಕೋಟಿ ಕನ್ನಡಿಗರ ಆಶೀರ್ವಾದದೊಂದಿಗೆ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಪಣ ತೊಟ್ಟಿದೆ. ಕನ್ನಡಿಗರ ಬದುಕನ್ನು ನವ ಚೈತ್ಯದಿಂದ ಸಶಕ್ತಗೊಳಿಸುವ ನಿಟ್ಟಿನಲ್ಲಿ ಕೆಲಸವನ್ನು ಮುಂದುವರೆಸಿದ್ದೇವೆ, ಮುಂಬರುವ ದಿನಗಳಲ್ಲಿ ಅಭಿವೃದ್ಧಿ ವೇಗವನ್ನು ಹೆಚ್ಚಿಸುವ ಪ್ರಯತ್ನ ಮಾಡುವುದಾಗಿ'' ತಿಳಿಸಿದ್ದರು.