ಬಿಟ್‌ಕಾಯಿನ್ - ಸಮಗ್ರ ತನಿಖೆ ನಡೆಯಲಿದೆ: ಬಿಎಸ್‌ವೈ

ಬಿಟ್‌ಕಾಯಿನ್ - ಸಮಗ್ರ ತನಿಖೆ ನಡೆಯಲಿದೆ: ಬಿಎಸ್‌ವೈ


ಬಿಟ್‌ಕಾಯಿನ್ - ಸಮಗ್ರ ತನಿಖೆ ನಡೆಯಲಿದೆ: ಬಿಎಸ್‌ವೈ


ತುಮಕೂರು: ರಾಷ್ಟ್ರ ರಾಜಕಾರಣ ಅದರಲ್ಲೂ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸುತ್ತಿರುವ ಬಿಟ್‌ಕಾನಿನ್ ಹಗರಣದಲ್ಲಿ ನಿಷ್ಪಕ್ಷಪಾತವಾಗಿ ಸಮಗ್ರ ತನಿಖೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕರಣದ ತನಿಖೆಗೆ ಆದೇಶಿಸಿದ್ದು, ಸಮಗ್ರ ತನಿಖೆ ನಡೆಯಲಿದೆ. ತಪ್ಪಿತಸ್ಥರು ಯಾರೇ ಇರಲಿ ಅವರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗಲಿದೆ ಎಂದರು. ಇಡೀ ಪ್ರಕರಣದಲ್ಲಿ ಬಿಜೆಪಿ, ಕಾಂಗ್ರೆಸ್ ಅಥವಾ ಜೆಡಿಎಸ್ ಯಾವುದೇ ಪಕ್ಷದವರು ಭಾಗಿಯಾಗಿದ್ದರೂ ಯಾವುದೇ ಮುಲಾಜಿಲ್ಲದೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.


ಇಡೀ ಪ್ರಕರಣ ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೂ ಬಂದಿದ್ದು, ಸೂಕ್ತ ತನಿಖೆ ನಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರ ಬದಲಾವಣೆ ಇಲ್ಲ ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜಗದೀಶ್ ಶೆಟ್ಟರ್ ಅವರು ಅವರ ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಹೋಗಿದ್ದಾರೆ ಎಂದು ಯಡಿಯೂರಪ್ಪ ನುಡಿದರು.