53 ಸಾವಿರ ನಳ ಸಂಪರ್ಕ : ಹೆಚ್ಚುವರಿ ಕ್ರಿಯಾ ಯೋಜನೆಗೆ ಜಿ. ಪಂ. ಸಿಇಓ ಡಾ. ವಿದ್ಯಾಕುಮಾರಿ ನೇತೃತ್ವದಲ್ಲಿ  ಚರ್ಚೆ 

53 ಸಾವಿರ ನಳ ಸಂಪರ್ಕ : ಹೆಚ್ಚುವರಿ ಕ್ರಿಯಾ ಯೋಜನೆಗೆ ಜಿ. ಪಂ. ಸಿಇಓ ಡಾ. ವಿದ್ಯಾಕುಮಾರಿ ನೇತೃತ್ವದಲ್ಲಿ  ಚರ್ಚೆ 


53 ಸಾವಿರ ನಳ ಸಂಪರ್ಕ : ಹೆಚ್ಚುವರಿ ಕ್ರಿಯಾ ಯೋಜನೆಗೆ
ಜಿ. ಪಂ. ಸಿಇಓ ಡಾ. ವಿದ್ಯಾಕುಮಾರಿ ನೇತೃತ್ವದಲ್ಲಿ  ಚರ್ಚೆ 


ತುಮಕೂರು: ಜಿಲ್ಲಾ ಪಂಚಾಯತ್‌ನಲ್ಲಿ ಶುಕ್ರವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಹೆಚ್ಚುವರಿ ಕ್ರಿಯಾ ಯೋಜನೆ ರೂಪಿಸುವ ಕುರಿತು ಚರ್ಚೆ ನಡೆಯಿತು.
ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ೪೧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೊದಲ ಹಂತದಲ್ಲಿ ೮೪ ಹಾಗೂ ಎರಡನೇ ಹಂತದಲ್ಲಿ ೮೨ ಸೇರಿದಂತೆ ಒಟ್ಟು ೧೬೬ ಗ್ರಾಮಗಳಲ್ಲಿ ನಳ ಸಂಪರ್ಕ ಕಲ್ಪಿಸುವ ಕಾರ್ಯ ಕೈಗೊಂಡಿದ್ದು, ಹೆಚ್ಚುವರಿಯಾಗಿ ೧೩೮ ಗ್ರಾಮ ಪಂಚಾಯತಿ ವ್ಯಾಪ್ತಿಯ ೨೭೨ ಗ್ರಾಮಗಳ ೩೭೭ ಜನವಸತಿಯ ಸುಮಾರು ೫೩೦೦೦ ಕಾರ್ಯಾತ್ಮಕ ಗೃಹ ನಳಸಂಪರ್ಕ ಕಲ್ಪಿಸಲು ನಿರ್ಧಾರ ಕೈಗೊಂಡು ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಯಿತು. 
ಸುಸ್ಥಿರ ಜಲಮೂಲಗಳ ಕಮಿಟಿಯ ಒಪ್ಪಿಗೆ ಪಡೆದು ಜಲಜೀವನ್ ಮಿಷನ್ ಯೋಜನೆ ಅನುಷ್ಠಾನಗೊಳಿಸಲು ಹೆಚ್ಚುವರಿ ಗ್ರಾಮಗಳನ್ನು ಸಭೆಯಲ್ಲಿ ಆಯ್ಕೆ ಮಾಡಿದ ನಂತರ ಸಿಇಓ ಮಾತನಾಡಿ, ಆಯ್ಕೆ ಮಾಡಿದ ಗ್ರಾಮಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆದ ಬಳಿಕ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. 
ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯನ್ನು ನೂರರಷ್ಟು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು.  ಸರ್ಕಾರ ನಿಗದಿಪಡಿಸಿರುವ ಕಾಲಾವಧಿ ೨೦೨೩ರೊಳಗೆ ಈ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. 
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ಮುತ್ತಪ್ಪ ಹಾಗೂ ಹಿರಿಯ ಭೂವಿಜ್ಞಾನಿ ದಾಸಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನ, ಜಿಲ್ಲಾ ಅಂತರ್ಜಲ ಇಲಾಖೆಯ ಹಿರಿಯ ಭೂವಿಜ್ಞಾನಿ ನಾಗವೇಣಿ, ಜೆಜೆಎಂ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಅರುಣ್‌ಕುಮಾರ್ ಇದ್ದರು.