ರೈತನ ಮೇಲೆ ಚಿರತೆ ದಾಳಿ

chirate

ರೈತನ ಮೇಲೆ ಚಿರತೆ ದಾಳಿ

ರೈತನ ಮೇಲೆ ಚಿರತೆ ದಾಳಿ


ಚಿಕ್ಕನಾಯಕನಹಳ್ಳಿ: ಮನೆಯ ಮುಂದೆ ದೂರವಾಣಿಯಲ್ಲಿ ಮಾತನಾಡುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಶನಿವಾರ ರಾತ್ರಿ ೮.೩೦ ರ ಸುಮಾರಿಗೆ ಶೆಟ್ಟಿಕೆರೆ ಹೋಬಳಿಯ ನಾಗೇನಹಳ್ಳಿಯಲ್ಲಿ ನಡೆದಿದೆ.
ನಾಗೇನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ವಾಸವಾಗಿರುವ ಗಂಗಾಧರ್ ಚಿರತೆಯಿಂದ ದಾಳಿಗೊಳಗಾದವರು. ಅವರು ತಮ್ಮ ಮನೆಯ ಮುಂಭಾಗದಲ್ಲಿರುವ ಕಾರಿನ ಶೆಡ್ ಬಳಿ ಪೋನ್‌ನಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ಚಿರತೆ ದಾಳಿ ನಡೆಸಿದೆ. ವ್ಯಕ್ತಿಯು ಪ್ರಾಣಾಪಾಯದಿಂದ ಪಾರಾಗಿದ್ದು, ಬೆಂಗಳೂರಿನ ಪೀಪಲ್ ಟ್ರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರಿಸಿದ್ದಾರೆ.