ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಮಾಜಿ ಉಪಮುಖ್ಯಮಂತ್ರಿ, ಶಾಸಕ ಪರಮೇಶ್ವರ್ ವಿಶ್ವಾಸ

ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಅಧಿಕಾರ
ಮಾಜಿ ಉಪಮುಖ್ಯಮಂತ್ರಿ, ಶಾಸಕ ಪರಮೇಶ್ವರ್ ವಿಶ್ವಾಸ
ಮಧುಗಿರಿ: ಬಿಜೆಪಿ ಸರ್ಕಾರವು ಜನ ವಿರೋಧಿ ಹಾಗೂ ರೈತ ವಿರೋಧಿ ಆಡಳಿತ ನೀಡುತ್ತಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ. ಜಿ. ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಮುಖಂಡ ಎಂ.ಜಿ. ಶ್ರೀನಿವಾಸ ಮೂರ್ತಿಯವರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಗಳಿಗಾಗಿ ಕಾಂಗ್ರೆಸ್ ನಾಯಕರು ಸಂಘಟನೆಯಲ್ಲಿ ತೊಡಗಿದ್ದು ಗೆಲುವಿಗಾಗಿ ರೂಪುರೇಷೆಗಳನ್ನು ಸಿದ್ಧಗೊಳಿಸಲಾಗುತ್ತಿದೆ. ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನ ಗಳಿಸಲಿದೆ ಎಂದರು.
ಬಿಜೆಪಿಯ ಜನವಿರೋಧಿ ಆಡಳಿತದಿಂದ ದಿನಬಳಕೆ ವಸ್ತುಗಳ ಬೆಲೆಗಳು ನಿರಂತರ ಏರಿಕೆಯಾಗುತ್ತಿದೆ. ಇದರಿಂದ ಸಾರ್ವಜನಿಕರು ತತ್ತರಿಸುತ್ತಿದ್ದು, ಇದರ ಪರಿಣಾಮ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ಕಳೆದ 3 ತಿಂಗಳಿನಿAದ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಗಮನ ಹರಿಸದಿರುವುದು ವಿಪರ್ಯಾಸ. ಸ್ವಾತಂತ್ರ‍್ಯ ಬಂದ ನಂತರ ಈ ರೀತಿ ರೈತರ ಬೃಹತ್ ಪ್ರತಿಭಟನೆ ಎಂದಿಗೂ ನಡೆದಿರಲಿಲ್ಲ ಎಂದರು.
ಮಧುಗಿರಿ ಉಪವಿಭಾಗದ ನಾಲ್ಕೂ ತಾಲೂಕುಗಳಲ್ಲಿ ಸಕಾಲಕ್ಕೆ ಮಳೆ ಬಾರದೆ ಬೆಳೆ ಒಣಗುತ್ತಿದ್ದು ಇದರ ಮಾಹಿತಿ ಪಡೆದುಕೊಂಡು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ ಅವರು, ಡಾ. ನಂಜುAಡಪ್ಪ ವರದಿ ಪ್ರಕಾರ ಈ ಭಾಗವು ಕೂಡ ಅತಿ ಹಿಂದುಳಿದ ಪ್ರದೇಶವಾಗಿದ್ದು ಸರಕಾರ ಅನುದಾನ ನೀಡಲು ತಾರತಮ್ಯ ಮಾಡುತ್ತಿದ್ದು ಅಭಿವೃದ್ಧಿ ಕುಂಠಿತಗೊAಡಿದೆ ಎಂದರು.
ಎತ್ತಿನ ಹೊಳೆ ಯೋಜನೆಗೆ ಬಿಜೆಪಿ ಸರಕಾರ ಬಜೆಟ್‌ನಲ್ಲಿ ಕೇವಲ 500 ಕೋಟಿ ರೂ. ಗಳನ್ನು ಮಂಜೂರು ಮಾಡಿದ್ದು ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ. ಕೊರಟಗೆರೆ ತಾಲೂಕಿನ ರೈತರಿಗೆ ಪರಿಹಾರ ನೀಡದೆ ಬೇರೆ ಕಡೆ ಬಫರ್ ಡ್ಯಾಮ್ ನಿರ್ಮಿಸಲು ಮುಂದಾಗಿರುವುದು ಸರಿಯಲ್ಲ ಎಂದರು.
ಇAದಿನ ದಿನಗಳಲ್ಲಿ ಪತ್ರಕರ್ತರೂ ಒತ್ತಡದಲ್ಲಿ ಬದುಕುತ್ತಿದ್ದು, ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮುಂದಿನ ದಿನಗಳಲ್ಲಿ ಸಿದ್ಧಾರ್ಥ ವೈದ್ಯಕೀಯ ಸಂಸ್ಥೆಯ ವತಿಯಿಂದ ಖ್ಯಾತ ತಜ್ಞ ವೈದ್ಯರ ತಂಡದೊAದಿಗೆ ಜಿಲ್ಲೆಯ ಪತ್ರಕರ್ತರಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ಜಿ.ಪಂ. ಮಾಜಿ ಸದಸ್ಯ ಹೆಚ್. ಕೆಂಚಮಾರಯ್ಯ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಎಂ.ಜಿ. ಶ್ರೀನಿವಾಸ್ ಮೂರ್ತಿ, ಪುರಸಭೆ ಸದಸ್ಯರಾದ ಎಂ.ಎಸ್. ಚಂದ್ರಶೇಖರ್, ಎಂ.ಆರ್. ಜಗನ್ನಾಥ್, ವಕೀಲರ ಸಂಘದ ಅಧ್ಯಕ್ಷ ಪಿ.ಸಿ. ಕೃಷ್ಣರೆಡ್ಡಿ, ಮುಖಂಡರಾದ ಚಂದ್ರಶೇಖರ್ ಗೌಡ, ಆರ್.ಎ. ನಾರಾಯಣ್, ಎಂ. ಶ್ರೀಧರ್ ಇದ್ದರು.
ಬಾಕ್ಸ್
ಜೆಡಿಎಸ್ ನಾಯಕರು ನಂಜೊತೆ ಮಾತಾಡಿದ್ದಾರೆ
ಜಿಲ್ಲೆಯಲ್ಲಿ ಸುರೇಶ್ ಬಾಬು, ಗುಬ್ಬಿ ವಾಸು ಮತ್ತು ಬೆಮೆಲ್ ಕಾಂತರಾಜು ಕಾಂಗ್ರೆಸ್ ಸೇರುವ ಬಗ್ಗೆ ನನ್ನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಆಯಾ ಕ್ಷೇತ್ರಗಳ ಮುಖಂಡರ ಮತ್ತು ಕಾರ್ಯಕರ್ತರ ಅಭಿಪ್ರಾಯ ಪಡೆದು ಹೈಕಮಾಂಡ್ ಗಮನಕ್ಕೆ ತರಲಾಗುವುದು. ಆದರೆ ತುಮಕೂರು ಗ್ರಾಮಂತರ ಮಾಜಿ ಶಾಸಕ ಸುರೇಶ್ ಗೌಡ ಕಾಂಗ್ರೆಸ್ ಸೇರುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದರು.