ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ: ಶಾಸಕ ಜ್ಯೋತಿಗಣೇಶ್
covid-for-children

ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ: ಶಾಸಕ ಜ್ಯೋತಿಗಣೇಶ್
ತುಮಕೂರು: ಕೊರೋನಾ ಮಹಾಮಾರಿಯಿಂದ ಮಕ್ಕಳನ್ನು ರಕ್ಷಿಸಲು ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ 15-18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ನಿರ್ದೇಶನದಂತೆ ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು 15-18 ವರ್ಷದ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯ 15-18 ವರ್ಷದ 1.25 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಮಕ್ಕಳಿಗೆ ಲಸಿಕೆ ನೀಡಲು ಅನುವಾಗುವಂತೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಲಸಿಕೆ ನೀಡಲು ಅಧಿಕಾರಿಗಳು ಯೋಜನೆ ರೂಪಿಸಿದ್ದು, ಪೋಷಕರು ಯಾವುದೇ ಆತಂಕಕ್ಕೆ ಒಳಗಾಗದೇ ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಕೊಡಿಸಬೇಕು ಎಂದು ಮನವಿ ಮಾಡಿದರು.
ಜಗತ್ತಿನಲ್ಲಿ ಒಮಿಕ್ರಾನ್ ಮತ್ತು ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದು, ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಲಸಿಕೆ ಪಡೆಯುವುದು ಅತ್ಯವಶ್ಯಕವಾಗಿದ್ದು, ಮೊದಲನೇ ಮತ್ತು ಎರಡನೇ ಡೋಸ್ ಲಸಿಕೆಯನ್ನು ನಿಗಧಿತ ಅವಧಿಯಲ್ಲಿ ನೀಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರಲ್ಲದೆ ಈ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮಗಳುಂಟಾಗುವುದಿಲ್ಲ. ಇತ್ತೀಚೆಗೆ ಮಕ್ಕಳಲ್ಲಿ ಹೆಚ್ಚಾಗಿ ಸೋಂಕು ಹರಡುತ್ತಿದ್ದು, ಕೋವಿಡ್‌ನಿಂದ ಮಕ್ಕಳನ್ನು ರಕ್ಷಿಸಬೇಕು. ತಜ್ಞರ ಅಂದಾಜಿನAತೆ ಮಾರ್ಚ್ ಮಾಹೆಯಲ್ಲಿ ಸೋಂಕು ಹೆಚ್ಚಳವಾಗುವ ಸಂಭವವಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳಿಗೆ ಲಸಿಕೆ ಕೊಡಿಸಬೇಕು ಎಂದು ಪೋಷಕರಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ನಾಗೇಂದ್ರಪ್ಪ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಮೊದಲ ಹಾಗೂ ಎರಡನೇ ಡೋಸ್ ಕೋವಿಡ್ ಲಸಿಕಾಕರಣವನ್ನು ಶೇ. 98ರಷ್ಟು ಪೂರ್ಣಗೊಳಿಸಲಾಗಿದ್ದು, ಕೇಂದ್ರ ಸರ್ಕಾರ ನೀಡಿರುವ ಸೂಚನೆಯನ್ವಯ ಯಾವುದೇ ತಪುö್ಪ ಕಲ್ಪನೆಗೆ ಒಳಗಾಗದೇ ಮಕ್ಕಳಿಗೆ ಲಸಿಕೆಯನ್ನು ಕೊಡಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದರು.
ನಂತರ ಎಂಪ್ರೆಸ್ ಕಾಲೇಜಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತೆ ರೇಣುಕಾ, ಜಿಲ್ಲಾ ಶಸ್ತçಚಿಕಿತ್ಸಕ ಡಾ: ವೀರಭದ್ರಯ್ಯ, ಡಿಡಿಪಿಐ ನಂಜಯ್ಯ, ಆರ್‌ಸಿಎಚ್ ಅಧಿಕಾರಿ ಡಾ: ಕೇಶವಮೂರ್ತಿ, ಪಿ.ಬಿ.ಬಸವರಾಜು ಇದ್ದರು.