ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಘಟಕ: ಪ್ರಸ್ತಾವನೆ ಸಲ್ಲಿಸಲು ಡಿಸಿ ಪಾಟೀಲ ಸೂಚನೆ, ರೇಷ್ಮೆ ಕೃಷಿಕರಿಗೆ ಗುರುತಿನಪತ್ರ

ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಘಟಕ: ಪ್ರಸ್ತಾವನೆ ಸಲ್ಲಿಸಲು ಡಿಸಿ ಪಾಟೀಲ ಸೂಚನೆ, ರೇಷ್ಮೆ ಕೃಷಿಕರಿಗೆ ಗುರುತಿನಪತ್ರ


ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಘಟಕ:


ಪ್ರಸ್ತಾವನೆ ಸಲ್ಲಿಸಲು ಡಿಸಿ ಪಾಟೀಲ ಸೂಚನೆ

ತುಮಕೂರು: ಜಿಲ್ಲೆಯಲ್ಲಿಯೇ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ವೈದ್ಯಕೀಯ ನಿರ್ವಹಣೆ ಮೇಲ್ವಿಚಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೈದ್ಯಕೀಯ ತ್ಯಾಜ್ಯ ನಿರ್ವಹಣೆಗೆ ತುಮಕೂರು ಜಿಲ್ಲೆ ಅನ್ಯ ಜಿಲ್ಲೆಯ ಆಸರೆ ಪಡೆಯುವುದು ಸರಿಯಲ್ಲ. ಹಾಗಾಗಿ ಜಿಲ್ಲೆಯಲ್ಲಿಯೇ ಒಂದು ನಿರ್ವಹಣಾ ಘಟಕ ಅತ್ಯಾವಶ್ಯಕವಾಗಿದ್ದು, ಸೂಕ್ತ ಜಾಗ ಗುರುತಿಸಿ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ನಿರ್ದೇಶಿಸಿದರು.
ಈಗಾಗಲೇ ವೈದ್ಯಕೀಯ ತ್ಯಾಜ್ಯ ನಿರ್ವಹಣೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಬೇರೆ ಜಿಲ್ಲೆಗಳಲ್ಲಿನ ನಿರ್ವಹಣಾ ಘಟಕದ ಮಾದರಿಯಲ್ಲಿಯೇ ಜಿಲ್ಲೆಯಲ್ಲಿಯೂ ಘಟಕ ನಿರ್ವಹಣೆಗೆ ಕ್ರಮ ವಹಿಸುವಂತೆ ತಿಳಿಸಿದರು. 
ಜಿಲ್ಲೆಯಲ್ಲಿ ಸಮರ್ಪಕವಾಗಿ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಮಾಡಬೇಕು. ಸಮರ್ಪಕವಾಗಿ ನಿರ್ವಹಣೆ ಮಾಡದೇ ಇದ್ದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ, ಜಿಲ್ಲಾ ಶಸ್ತçಚಿಕಿತ್ಸಕ ಡಾ. ವೀರಭದ್ರಯ್ಯ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹಿಮಾ ಇದ್ದರು.

ರೇಷ್ಮೆ ಕೃಷಿಕರಿಗೆ ಗುರುತಿನಪತ್ರ


ತುಮಕೂರು: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಡಾ. ವಿದ್ಯಾಕುಮಾರಿ ಅವರು ಸರ್ಕಾರದ ಆದೇಶದನ್ವಯ ಜಿಲ್ಲೆಯ ರೇಷ್ಮೆ ಬೆಳೆಗಾರರು ಯಾವುದೇ ಅಡೆತಡೆ ಇಲ್ಲದೆ, ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಾಣೆ ಮಾಡಲು ಅನುಕೂಲವಾಗುವಂತೆ ರೇಷ್ಮೆ ಕೃಷಿಕರಿಗೆ ಗುರುತಿನಪತ್ರ ವಿತರಿಸಿದರು. 
ಇತ್ತಿಚೆಗೆ ರೇಷ್ಮೆ ಬೆಳೆಗಾರರು ತಮ್ಮ ಉತ್ಪನ್ನವನ್ನು ಮಾರುಕಟ್ಟೆಗೆ ಸಾಗಿಸುವ ವೇಳೆ ಪೊಲೀಸರು ಮತ್ತು ಇತರೆ ಇಲಾಖೆ ಅಧಿಕಾರಿಗಳು ಕಿರುಕುಳವನ್ನು ತಪ್ಪಿಸಲು ಗುರುತಿನಪತ್ರ ವಿತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ ರೇಷ್ಮೆ ಬೆಳೆಗಾರರಿಗೆ ಉತ್ಪನ್ನವನ್ನು ಒಂದೆಡೆಯಿAದ ಮತ್ತೊಂದೆಡೆ ಸಾಗಿಸಲು ಗುರುತಿನ ಪತ್ರವನ್ನು ನೀಡಲು ಆಯಾ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ರೇಷ್ಮೆ ಇಲಾಖೆ ಉಪನಿರ್ದೇಶಕ ಡಾ. ವೈ.ಕೆ. ಬಾಲಕೃಷ್ಣಪ್ಪ ಅವರು ಸಿಇಒ ಅವರ ಮೂಲಕ ರೈತರಿಗೆ ಗುರುತಿನ ಪತ್ರ ವಿತರಿಸಿದರು.

ದೌರ್ಜನ್ಯ ಪ್ರಕರಣಗಳು ಹೆಚ್ಚು ದಾಖಲಾಗಿರುವ


ಪ್ರದೇಶಗಳಲ್ಲಿ ಜಾಗೃತಿಗೆ ಜಿಲ್ಲಾಧಿಕಾರಿ ಸೂಚನೆ


ತುಮಕೂರು: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ದೌರ್ಜನ್ಯ ಪ್ರಕರಣಗಳು ದಾಖಲಾಗಿರುವ ಪ್ರದೇಶಗಳಲ್ಲಿ ಕಾನೂನು ಜಾಗೃತಿ ಮೂಡಿಸುವ ಮುಖೇನ ದೌರ್ಜನ್ಯ ಪ್ರಕರಣಗಳ ತಡೆಗಟ್ಟಲು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಚ್ಚು ದೌರ್ಜನ್ಯ ಪ್ರಕರಣಗಳು ನಡೆದಿರುವ ಪ್ರದೇಶಗಳನ್ನು ಗುರುತಿಸಬೇಕು. ಬಳಿಕ ಆ ಪ್ರದೇಶಗಳಲ್ಲಿ ನಿರ್ದಿಷ್ಟ ದಿನದಂದು ಸಮಾಜ ಕಲ್ಯಾಣ, ಪೊಲೀಸ್, ಶಿಕ್ಷಣ ಇಲಾಖೆ ಸೇರಿದಂತೆ ಸಂಬAಧಿಸಿದ ಎಲ್ಲಾ ಇಲಾಖಾಧಿಕಾರಿಗಳು ಸಮನ್ವಯ ಸಾಧಿಸಿ ಕಾನೂನು ಅರಿವು ಮೂಡಿಸಬೇಕು ಎಂದು ನಿರ್ದೇಶಿಸಿದರು.
ದೌರ್ಜನ್ಯ ಅಧಿನಿಯಮ ಅನ್ವಯ ದಾಖಲಾದ ಪ್ರತಿಯೊಂದು ಪ್ರಕರಣಕ್ಕೂ ವಿಳಂಬ ಮಾಡದೆ ಪರಿಹಾರ ಮಂಜೂರು ಮಾಡಬೇಕು. ಪ್ರಕರಣಗಳ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಇದೇ ವೇಳೆ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರು ಮಾತನಾಡಿ, ದೌರ್ಜನ್ಯ ಪ್ರಕರಣಗಳು ನಡೆದಾಗ ಅಂತಹ ಪ್ರಕರಣಗಳಿಗೆ ಸಂಬAಧಿಸಿದAತೆ ಪೊಲೀಸರು ದೂರುಗಳನ್ನು ದಾಖಲಿಸಿಕೊಳ್ಳಲು ವಿಳಂಬ ಮಾಡುತ್ತಾರೆ. ಪ್ರಕರಣಗಳನ್ನು ದಾಖಲಿಸಿಕೊಳ್ಳುವಂತೆ ಒತ್ತಾಯ ಮಾಡುವ ಸ್ಥಿತಿ ಬಂದಿದೆ ಎಂದು ಆರೋಪಿಸಿದರು.
ಇದಕ್ಕೆ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಎಲ್ಲಿಯೇ ದೌರ್ಜನ್ಯ ಪ್ರಕರಣ ನಡೆದರೂ ತಕ್ಷಣವೇ ದೂರು ದಾಖಲಿಸಿಕೊಳ್ಳಲು ಕ್ರಮ ವಹಿಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶಿಸಿದರು. 
ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ಮಾತನಾಡಿ, ಯಾವುದೇ ದೌರ್ಜನ್ಯ ಪ್ರಕರಣ ನಡೆದರೂ ತಕ್ಷಣವೇ ದೂರು ದಾಖಲಿಸಿಕೊಳ್ಳಲಾಗುತ್ತಿದೆ. ಪ್ರಕರಣ ದಾಖಲಿಸಿಕೊಳ್ಳುವಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ವಿಳಂಬ ತೋರುವುದಿಲ್ಲ. ಪ್ರಕರಣ ದಾಖಲಿಸಿಕೊಳ್ಳಲು ವಿಳಂಬ ಮಾಡಿದರೆ ಅಂತಹವುಗಳನ್ನು ಗಮನಕ್ಕೆ ತಂದರೆ ತಕ್ಷಣವೇ ಪ್ರಕರಣ ದಾಖಲಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿ, ನಿಯಮದ ಪ್ರಕಾರ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಿಕೊಂಡು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು. ಇದರಿಂದ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಬಹುದು. ಆರೋಪಿಗಳು ಒಮ್ಮೆ ಶಿಕ್ಷೆ ಅನುಭವಿಸಿದರೆ ಮತ್ತೆ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಅಜಯ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ನಂಜಯ್ಯ ಸೇರಿದಂತೆ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರು ಇದ್ದರು.