‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ ಸದುಪಯೋಗ ಪಡಿಸಿಕೊಳ್ಳಿ: ವೈ.ಎಸ್. ಪಾಟೀಲ

‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ ಸದುಪಯೋಗ ಪಡಿಸಿಕೊಳ್ಳಿ: ವೈ.ಎಸ್. ಪಾಟೀಲ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’
ಸದುಪಯೋಗ ಪಡಿಸಿಕೊಳ್ಳಿ: ವೈ.ಎಸ್. ಪಾಟೀಲ


ತುಮಕೂರು: ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಅನುಷ್ಠಾನಕ್ಕೆ ತಂದಿರುವ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ ಯೋಜನೆಯನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಕುರಿತು ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆ ಆವರಣದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ 5 ಲಕ್ಷಕ್ಕಿಂತ ಹೆಚ್ಚು ಮಂದಿ ಈ ಯೋಜನೆಯ ಉಪಯೋಗ ಪಡೆದುಕೊಳ್ಳುತ್ತಿದ್ದು, ಹೆಚ್ಚಿನ ಮಂದಿಗೆ ಯೋಜನೆಯನ್ನು ತಲುಪಿಸುವ ಗುರಿ ಹೊಂದಲಾಗಿದೆ. ಅಲ್ಲದೆ, ಬಿಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೂ ಉಚಿತ ಆರೋಗ್ಯ ಸೇವೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಗೌರ್ನಮೆಂಟ್ ಸ್ಕೂಲ್ ಆಫ್ ನರ್ಸಿಂಗ್ ಹಾಗೂ ಗೌರ್ನಮೆಂಟ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡು ‘ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ’, ‘ಬಿಪಿಎಲ್ ಕಾರ್ಡ್ ಇರುವವರಿಗೆ ಒಂದು ವರ್ಷಕ್ಕೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ’ ಸೇರಿದಂತೆ ಹಲವು ಘೋಷವಾಕ್ಯಗಳ ಮೂಲಕ ಅರಿವು ಮೂಡಿಸಿದರು.
ಜಿಲ್ಲಾ ಪಂಚಾಯತ್ ಸಿಇಒ ಡಾ. ಕೆ. ವಿದ್ಯಾಕುಮಾರಿ, ಡಿ.ಹೆಚ್.ಓ. ನಾಗೇಂದ್ರಪ್ಪ, ಜಿಲ್ಲಾ ಶಸ್ತçಚಿಕಿತ್ಸಕ ಡಾ. ವೀರಭದ್ರಯ್ಯ, ಡಾ. ವೀಣಾ, ಆರ್.ಸಿ.ಹೆಚ್. ಅಧಿಕಾರಿ ಡಾ. ಕೇಶವ್‌ರಾಜ್, ಡಿ.ಎಸ್.ಓ. ಮೋಹನ್‌ದಾಸ್, ಡಿ.ಎಲ್.ಒ. ಡಾ. ಚೇತನ್ ಇದ್ದರು.