ಪರಿಷತ್ ಚುನಾವಣೆ: ಮಾದರಿ ನೀತಿ ಸಂಹಿತೆ ಅನ್ವಯ ಕ್ರಮ: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ
ಪರಿಷತ್ ಚುನಾವಣೆ: ಮಾದರಿ ನೀತಿ ಸಂಹಿತೆ
ಅನ್ವಯ ಕ್ರಮ: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ
ತುಮಕೂರು: ಕರ್ನಾಟಕ ವಿಧಾನ ಪರಿಷತ್‌ಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಆಯ್ಕೆಯಾಗಿರುವ ಸದಸ್ಯರ ಪದಾವಧಿಯು 2022ರ ಜನವರಿ 5ಕ್ಕೆ ಮುಕ್ತಾಯಗೊಳ್ಳಲಿದ್ದು, ತುಮಕೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ತೆರವಾಗುವ ಸದಸ್ಯ ಸ್ಥಾನಕ್ಕೆ ಡಿಸೆಂಬರ್ 10 ರಂದು ಚುನಾವಣೆ ನಡೆಸಲು ಮಾದರಿ ನೀತಿ ಸಂಹಿತೆಯAತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ವಿಧಾನ ಪರಿಷತ್ ಚುನಾವಣೆ ಸಂಬAಧ ಜರುಗಿದ ರಾಷ್ಟಿçÃಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಸಂಬAಧ ಮಾದರಿ ನೀತಿ ಸಂಹಿತೆಯು ನವೆಂಬರ್ 11 ರಂದು ಜಾರಿಗೆ ಬಂದಿದೆ. ಈ ಮಾದರಿ ನೀತಿ ಸಂಹಿತೆಯ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ತಾಲೂಕಿಗೆ ಒಂದರAತೆ ಫ್ಲೆöÊಯಿಂಗ್ ಸ್ಕಾ÷್ವಡ್ ತಂಡಗಳನ್ನು ರಚಿಸಲಾಗಿದೆ ಎಂದರು.
ಚುನಾವಣಾ ವೇಳಾ ಪಟ್ಟಿ ಅನ್ವಯ ನವೆಂಬರ್ 16 ರಿಂದ 23ರವರೆಗೆ ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿ ನೋಂದಣಿಯಾಗಿರುವ ಮತ್ತು 30 ವರ್ಷ ಮೇಲ್ಪಟ್ಟ ಮತದಾರರು ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ನಾಮಪತ್ರಗಳ ಪರಿಶೀಲನೆ ಕಾರ್ಯ ನವೆಂಬರ್ 24ರಂದು ನಡೆಯಲಿದ್ದು, ನವೆಂಬರ್ 26 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದೆ. ಡಿಸೆಂಬರ್ 10ರಂದು ಬೆಳಿಗ್ಗೆ 8 ಗಂಟೆಯಿAದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಡಿಸೆಂಬರ್ 14ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯು ಡಿಸೆಂಬರ್ 16ರೊಳಗೆ ಮುಕ್ತಾಯಗೊಳ್ಳಲಿದೆ ಎಂದರು.
ಸದರಿ ಚುನಾವಣೆಯು ಬ್ಯಾಲೆಟ್ ಪೇಪರ್ ಮೂಲಕ ನಡೆಯಲಿದೆ. ಪ್ರತಿಯೊಬ್ಬ ಮತದಾರನಿಗೆ ಚುನಾವಣೆಗೆ ಸ್ವರ್ಧಿಸುವ ಅಭ್ಯರ್ಥಿಗಳ ಸಂಖ್ಯೆಗೆ ಅನುಸಾರ ಪ್ರಾಶಸ್ತö್ಯ ಮತಗಳನ್ನು ದಾಖಲಿಸಲು ಅವಕಾಶವಿರುತ್ತದೆ. ಚುನಾವಣೆಗೆ ಬ್ಯಾಲೆಟ್ ಬಾಕ್ಸ್ಗಳನ್ನು ಬಳಸಲಾಗುವುದು ಎಂದು ತಿಳಿಸಿದರು.
ವಿಧಾನ ಪರಿಷತ್ ಚುನಾವಣೆಗೆ ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸದಸ್ಯರು ಮತದಾರರಾಗಿರುತ್ತಾರೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಮಾತನಾಡಿ, ಭಾರತ ಚುನಾವಣಾ ಆಯೋಗವು ಮತದಾರರ ಅನಕೂಲಕ್ಕಾಗಿ ಹೆಲ್ಪ್ಲೈನ್ ಆ್ಯಪ್ ತಂತ್ರಾAಶವನ್ನು ಬಿಡುಗಡೆಗೊಳಿಸಿದ್ದು, ಈಗಾಗಲೇ ನೋಂದಣಿಯಾಗಿರುವ ಮತದಾರರು ತಮ್ಮ ಹೆಸರು, ವಿಳಾಸ ಇತ್ಯಾದಿಗಳನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಹೊಸದಾಗಿ ನೋಂದಣಿ ಮಾಡಲು ಇಚ್ಛಿಸುವ ಯುವ/ಇತರೆ ಅರ್ಹ ಮತದಾರರು ವೋಟರ್ ಹೆಲ್ಪ್ಲೈನ್ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲು ರಾಜಕೀಯ ಪಕ್ಷಗಳ ಮುಖಂಡರ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು. ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.
ಮತದಾರರ ಪಟ್ಟಿ ಪರಿಷ್ಕರಣೆ: ರಾಜಕೀಯ ಪಕ್ಷಗಳಿಗೆ ಹೆಚ್ಚು ಜವಾಬ್ದಾರಿ
ತುಮಕೂರು: ಚುನಾವಣೆಗೆ ಸಂಬAಧಿಸಿದAತೆ ಮತದಾರರ ಪಟ್ಟಿ ಪರಿಷ್ಕರಣೆಗೆ ಅನುಕೂಲವಾಗುವಂತೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಸಂಬAಧಿಸಿದAತೆ ಎಲ್ಲಾ ರಾಜಕೀಯ ಪಕ್ಷದವರು ತಮ್ಮ ಬಿಎಲ್‌ಎ/ಪ್ರತಿನಿಧಿಗಳ ಮೂಲಕ 80 ವರ್ಷ ಮೇಲ್ಪಟ್ಟ ಮತದಾರರ ಮನೆಗಳಿಗೆ ಭೇಟಿ ನೀಡಿ ಮತದಾರರು ಜೀವಂತ ಇರುವ/ವಾಸವಿರುವ ಬಗ್ಗೆ ಪರಿಶೀಲನೆ ನಡೆಸಿ ಖಾತ್ರಿಪಡಿಸಿಕೊಳ್ಳಬೇಕು. ಪರಿಶೀಲನೆ ವೇಳೆ ಮತದಾರರು ಮೃತಪಟ್ಟಿರುವುದು ಕಂಡುಬAದಲ್ಲಿ ಅಥವಾ ಖಾಯಂ ಸ್ಥಳಾಂತರಗೊAಡಿದ್ದಲ್ಲಿ ಅವರ ಸಂಬAಧಿಕರಿAದ ನಮೂನೆ 7ನ್ನು ಪಡೆದು ಅವರನ್ನು ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಮತದಾರರ ಕರಡು ಪಟ್ಟಿಯನ್ನು ನವೆಂಬರ್ 8ರಂದು ಎಲ್ಲಾ ಮತಗಟ್ಟೆಗಳಲ್ಲಿ ಹಾಗೂ ತಾಲೂಕು ತಹಸೀಲ್ದಾರ್ ಕಚೇರಿಗಳಲ್ಲಿ ಪ್ರಚುರಪಡಿಸಲಾಗಿದೆ. ಸದರಿ ಕರಡು ಮತದಾರರ ಪಟ್ಟಿಗೆ ಸಂಬAಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 8ರವರೆಗೆ ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್ 8ರೊಳಗಾಗಿ ಸ್ವೀಕೃತವಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಡಿಸೆಂಬರ್ 27ರೊಳಗಾಗಿ ವಿಲೇವಾರಿ ಮಾಡಿ, 2022ರ ಜನವರಿ 13ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗುವುದು ಎಂದು ತಿಳಿಸಿದರು.
ಮತದಾರ ಪಟ್ಟಿಗಳ ಪರಿಷ್ಕರಣೆ ಸಂಬAಧ ಸಾರ್ವತ್ರಿಕ ರಜಾದಿನಗಳಾದ ನವೆಂಬರ್ 14, 21 ಹಾಗೂ 28ರಂದು ವಿಶೇಷ ಆಂದೋಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ನಿಗದಿತ ದಿನಗಳಂದು ಬಿಎಲ್‌ಒಗಳು ಮತಗಟ್ಟೆಗಳಲ್ಲಿ ಹಾಜರಿದ್ದು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿರುವ 2683 ಮತಗಟ್ಟೆಗಳಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸುವ ಬಿಎಲ್‌ಒಗಳ ಕಾರ್ಯಕ್ಕೆ ಎಲ್ಲಾ ರಾಜಕೀಯ ಪಕ್ಷದವರೂ ಸಹಕಾರ ನೀಡಬೇಕು ಎಂದು ತಿಳಿಸಿದರು.
ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 1115260 ಪುರುಷರು, 1112523 ಮಹಿಳೆಯರು ಹಾಗೂ ಇತರೆ 112 ಸೇರಿ ಒಟ್ಟು 2227895 ಮತದಾರರಿದ್ದಾರೆ. ವಿವಾಹಿತ ಹೆಣ್ಣು ಮಕ್ಕಳು ತಮ್ಮ ಹೆಸರನ್ನು ಇನ್ನೂ ತಂದೆ ಮನೆಯ ವಿಳಾಸದ ಮತದಾರರ ಪಟ್ಟಿಯಲ್ಲಿಯೇ ಉಳಿಸಿಕೊಂಡಿದ್ದು, ಅಂತಹವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.