ಪಶುವೈದ್ಯರು ಪ್ರಾಮಾಣಿಕವಾಗಿ ಕರ್ತವ್ಯ  ನಿರ್ವಹಿಸಿ: ಜಿಲ್ಲಾಧಿಕಾರಿ ಸೆಲ್ವಮಣಿ

dc-selvamani-vet-doctors-work-promptly, ಪಶುವೈದ್ಯರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಸೆಲ್ವಮಣಿ

ಪಶುವೈದ್ಯರು ಪ್ರಾಮಾಣಿಕವಾಗಿ ಕರ್ತವ್ಯ  ನಿರ್ವಹಿಸಿ: ಜಿಲ್ಲಾಧಿಕಾರಿ ಸೆಲ್ವಮಣಿ

ಪಶುವೈದ್ಯರು ಪ್ರಾಮಾಣಿಕವಾಗಿ ಕರ್ತವ್ಯ 
ನಿರ್ವಹಿಸಿ: ಜಿಲ್ಲಾಧಿಕಾರಿ ಸೆಲ್ವಮಣಿ

ಕೋಲಾರ: ಪಶುವೈದ್ಯ ವೃತ್ತಿಯು ಶ್ರೇಷ್ಠ ಪ್ರಾಣಿ ಸೇವಾ ವೃತ್ತಿಯಾಗಿದ್ದು, ಎಲ್ಲಾ ಪಶುವೈದ್ಯರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಮೂಕ ಪ್ರಾಣಿಗಳ ಆರೋಗ್ಯ ರಕ್ಷಣೆಯನ್ನು ಮಾಡಿ, ರೈತರಿಗೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಸದೃಢಗೊಳಿಸಬೇಕಾಗಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಅಭಿಪ್ರಾಯಪಟ್ಟರು.


ನಗರದ ಪಶು ಆಸ್ಪತ್ರೆ ಸಂಕೀರ್ಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಕರ್ನಾಟಕ ಪಶುವೈದ್ಯಕೀಯ ಸಂಘ, ಕೋಲಾರ ರವರ ಸಂಯುಕ್ತಾಶ್ರಯದಲ್ಲಿ ನಡೆದ “ಕುರಿಗಳಲ್ಲಿ ಕಂಡುಬರುವ ರೋಗಗಳ ನಿರ್ವಹಣೆ ಹಾಗೂ ಹಸುಗಳಲ್ಲಿ ಬಂಜೆತನ ನಿವಾರಣೆ” ಎಂಬ ವಿಷಯದ ಬಗ್ಗೆ ಹಮ್ಮಿಕೊಂಡಿದ್ದ ತಾಂತ್ರಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.


ತಾಂತ್ರಿಕ ಕಾರ್ಯಾಗಾರಗಳನ್ನು ಪ್ರತಿ ತಿಂಗಳಲ್ಲಿ ಒಮ್ಮೆ ಹಮ್ಮಿಕೊಂಡು ಪಶುವೈದ್ಯ ವೃತ್ತಿಯಲ್ಲಿನ ಇತ್ತೀಚಿನ ತಂತ್ರಜ್ಞಾನ ಹಾಗೂ ಆವಿಷ್ಕಾರಗಳನ್ನು ತಿಳಿದುಕೊಂಡು ವೃತ್ತಿ ನೈಪುಣ್ಯತೆಯನ್ನು ಹೆಚ್ಚಿಸಿಕೊಂಡು ಕರ್ತವ್ಯ ನಿರ್ವಹಣೆಯನ್ನು ಉತ್ತಮಗೊಳಿಸಬೇಕೆಂದು ತಿಳಿಸಿದರು.ಜಿಲ್ಲೆಯಲ್ಲಿ ಹೈನೋದ್ಯೋಮ, ಕುರಿ ಮತ್ತು ಮೇಕೆ ಸಾಕಾಣಿಕೆ ಹಾಗೂ ಕೋಳಿ ಸಾಕಾಣಿಕೆಗೆ ಅತೀ ಹೆಚ್ಚಿನ ಅವಕಾಶಗಳಿದ್ದು, ಅದನ್ನು ಸದುಪಯೋಗಪಡಿಸಿಕೊಂಡು ಈ ಬಗ್ಗೆ ರೈತರಲ್ಲಿ ಹೆಚ್ಚು ಹೆಚ್ಚು ವಿಸ್ತರಣಾ ಚಟುವಟಿಕೆಗಳನ್ನು ಇಲಾಖಾ ವತಿಯಿಂದ ಹಮ್ಮಿಕೊಳ್ಳಬೇಕೆಂದು, ಸಭೆಯಲ್ಲಿ ಹಾಜರಿದ್ದ ಎಲ್ಲಾ ಪಶುವೈದ್ಯರಿಗೆ ತಿಳಿಸಿದರು.


ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಎನ್.ಜಗದೀಶ್‌ಕುಮಾರ್, ಕರ್ನಾಟಕ ಪಶುವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಕೆ.ಎನ್ ಮಂಜುನಾಥರೆಡ್ಡಿ ಹಾಗೂ ಪಶುವೈದ್ಯರಾದ ಡಾ. ಗಂಗತುಳಸಿರಾಮಯ್ಯ, ಡಾ.ಸಿ.ಹೆಚ್ ಆದಂಷಫೀವುಲ್ಲಾ, ಡಾ.ಅಪ್ಜಲ್‌ಪಾಷ, ಡಾ. ಎಸ್ ಶ್ರೀನಿವಾಸಗೌಡ, ಡಾ. ಎಸ್.ವಿಶ್ವನಾಥ ಹಾಜರಿದ್ದರು.