ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯಿಂದ ರಾಷ್ಟ್ರ ಜಾಗೃತಿಗಾಗಿ ‘ದೇಶಕ್ಕಾಗಿ ನಡಿಗೆ’

ತುಮಕೂರು: 75ನೇ ಸ್ವಾತಂತ್ರೋತ್ಸವ ಸಮಾರೋಪವನ್ನು ವಿಶೇಷ ಮತ್ತು ಆರ್ಥಪೂರ್ಣವಾಗಿ ಆಚರಿಸಲು ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆ ವತಿಯಿಂದ ದೇಶಕ್ಕಾಗಿ ನಡಿಗೆ ರಾಷ್ಟç ಜಾಗೃತಿ ಅಭಿಯಾನವನ್ನು ಶನಿವಾರ ನಗರದಲ್ಲಿ ನಡೆಸಲಾಯಿತು. ಇಲ್ಲಿನ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಿಂದ ಆರಂಭವಾದ ದೇಶಕ್ಕಾಗಿ ನಡಿಗೆ (ವಾಕಥಾನ್) ಗೆ ಬಿಗ್‌ಬಾಸ್ ಖ್ಯಾತಿಯ ಹಾಗೂ ಕಿರುತೆರೆ ನಟಿ ಕುಮಾರಿ ಚಂದನ ಅನಂತಕೃಷ್ಣ ಚಾಲನೆ ನೀಡಿದರು. 

ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡು ತ್ರಿವರ್ಣ ಧ್ವಜ ಹಿಡಿದು ಸರ್ಕಾರಿ ಕಿರಿಯ ಕಾಲೇಜು, ಟೌನ್‌ಹಾಲ್ ವೃತ್ತ, ಅಶೋಕ ರಸ್ತೆ, ಸ್ವತಂತ್ರ ಚೌಕ ಮಾರ್ಗವಾಗಿ ಗಾಜಿನ ಮನೆವರೆಗೆ ದೇಶಕ್ಕಾಗಿ ನಡಿಗೆ ಜಾಥಾ ನಡೆಸಿದರು. 

ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ತುಮಕೂರು ವಿ.ವಿ. ಕುಲಪತಿ ಪ್ರೊ. ಎಂ.ವೆAಕಟೇಶ್ವರಲು ಮಾತನಾಡಿದರು. ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ರಾಹುಲ್‌ಕುಮಾರ್ ಶಹಪುರ್‌ವಾಡ್, ಸಂಸ್ಥೆಯ ಅಧ್ಯಕ್ಷ ಜಿ.ಎಸ್. ಬಸವರಾಜು, ಗೌರವಾಧ್ಯಕ್ಷ ಎಸ್.ಪಿ. ಚಿದಾನಂದ್, ಜಿ.ಕೆ. ಶ್ರೀನಿವಾಸ್, ವಾಸವಿ ಗುಪ್ತ, ಮನೋಹರ್ ವೇದಿಕೆಯಲ್ಲಿದ್ದರು.