ಕಾಮಗಾರಿಗಳ ನಿರ್ಮಾಣ ಮೊತ್ತದಲ್ಲಿ ಶೇ.1 ರಷ್ಟು ಕಾರ್ಮಿಕರ ಕಲ್ಯಾಣ ಮಂಡಳಿಗೆ ಪಾವತಿಸಿ - ಡಾ.ಸ್ನೇಹ

ಕಾಮಗಾರಿಗಳ ನಿರ್ಮಾಣ ಮೊತ್ತದಲ್ಲಿ ಶೇ.1 ರಷ್ಟು ಕಾರ್ಮಿಕರ ಕಲ್ಯಾಣ ಮಂಡಳಿಗೆ ಪಾವತಿಸಿ - ಡಾ.ಸ್ನೇಹ

ಕಾಮಗಾರಿಗಳ ನಿರ್ಮಾಣ ಮೊತ್ತದಲ್ಲಿ ಶೇ.1 ರಷ್ಟು ಕಾರ್ಮಿಕರ ಕಲ್ಯಾಣ ಮಂಡಳಿಗೆ ಪಾವತಿಸಿ - ಡಾ.ಸ್ನೇಹ


ಕೋಲಾರ: ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಅಧೀನ ಕಛೇರಿ, ಉಪ ವಿಭಾಗಿಯ ಕಛೇರಿಗಳ ಅಧಿಕಾರಿಗಳು ಕಾಮಗಾರಿಗಳನ್ನು ಅನುಮೋದಿಸುವಾಗ ಕಾಮಗಾರಿ ಮೊತ್ತದ ಶೇ.1 ರಷ್ಟುನ್ನು ಸುಂಕವನ್ನು ಸಂಗ್ರಹಿಸಿ ಕಾರ್ಮಿಕ ಕಲ್ಯಾಣ ಮಂಡಳಿಗೆ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ||ಸ್ನೇಹ ಅವರು ತಿಳಿಸಿದರು.


 ಗುರುವಾರ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಸುಂಕ ಸಂಗ್ರಹಣಾ ಅಭಿಯಾನದ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸುಂಕ ಸಂಗ್ರಹಣಾಧಿಕಾರಿಗಳ ಕಾರ್ಯಗಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸುಂಕ ಸಂಗ್ರಹಣಾ ಅಭಿಯಾನದಡಿ ಶೇ.1 ರಷ್ಟು ಕಠಾವು ಮಾಡಿ ಸಂಗ್ರಹಿಸಿದ ಸುಂಕದ ಮೊತ್ತವನ್ನು ನವೆಂಬರ್ 30 ರೊಳಗಾಗಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ಪಾವತಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.


 ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಪಾಟೀಲ್ ಅವರು ಮಾತನಾಡಿ ಆಧಾರ್ ಸಂಖ್ಯೆಗೆ ಜೋಡಣೆಯಾದ ಅಸಂಘಟಿತ ಕಾರ್ಮಿಕರ ರಾಷ್ಟಿçÃಯ ದತ್ತಾಂಶವನ್ನು ಸಿದ್ದಪಡಿಸಲು ಕಾರ್ಮಿಕ ಹಾಗೂ ಉದ್ಯೋಗ ಮಂತ್ರಾಲಯವು ಇ-ಶ್ರಮ ಪೋರ್ಟಲ್ ತಿತಿತಿ.eshಡಿಚಿm.gov.iಟಿ ಅನ್ನು ಅಭಿವೃದ್ದಿಪಡಿಸಿಲಾಗಿದೆ. ಇದು ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳನ್ನು ವಿಸ್ತರಿಸಲು ಅನುಕೂಲವಾಗುವಂತೆ ಕಾರ್ಮಿಕರ ಹೆಸರು, ವೃತ್ತಿ, ವಿಳಾಸ, ವಿದ್ಯಾರ್ಹತೆ, ಕೌಶಲ್ಯದ ವಿಧ, ಕುಟುಂಬದ ವಿವರ , ಬ್ಯಾಂಕ್ ಖಾತೆ ವಿವರಗಳನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು.


 ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಕೆಲಸ ಕಾರ್ಮಿಕರು, ಚಾಲಕರು, ಟೈಲರ್‌ಗಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಕೇಂದ್ರ ಸರ್ಕಾರವು ಗುರುತಿಸಿರುವ ಸುಮಾರು 156 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು ನೋಂದಣಿಯಾಗಬಹುದು. ಇ-ಶ್ರಮ್ ಪೋರ್ಟಲ್ ತಿತಿತಿ.eshಡಿಚಿm.gov.iಟಿ  ನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಬೇಟಿ ನೀಡಿ ನೋಂದಣಿ ಮಾಡಿಸಿಕೊಳ್ಳಬಹುದು. ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿಯು ಉಚಿತವಾಗಿದ್ದು ಯಶಸ್ವಿ ನೋಂದಣಿಯ ನಂತರ ಫಲಾನುಭವಿಗಳೂ ಸ್ಥಳದಲ್ಲಿಯೆ ಗುರುತಿನ

ಚೀಟಿಯನ್ನು(Uಂಓ)ಪಡೆಯಬಹುದು. ಇದು ದೇಶದಾದ್ಯಂತ ಹಾಗೂ ಜೀವಿತಾವಧಿಯ ಮಾನ್ಯತೆ ಹೊಂದಿರುತ್ತದೆ ಎಂದು ಅವರು ತಿಳಿಸಿದರು.


 ಕಾರ್ಮಿಕರ ಸಹಾಯವಾಣಿ ಸಂಖ್ಯೆ 155214 (24/7), ಇ-ಶ್ರಮ್ ಸಹಾಯವಾಣಿ 14434ಗೆ ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 08.00 ರಿಂದ ರಾತ್ರಿ 8.00 ಗಂಟೆಯವರೆಗೆ ಕರೆ ಮಾಡಬಹುದು. ದೂರುಗಳನ್ನು ವೆಬ್ ಸೈಟ್ ವಿಳಾಸ www.gms.eshram.gov.inಟಿ ಸಲ್ಲಿಸಬಹುದು, ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳ ಮಾಹಿತಿಯನ್ನು https://findmycsc.nic.in/csc// ಮೂಲಕ ಪಡೆಯಬಹುದು ಎಂದು ಅವರು ತಿಳಿಸಿದರು.


ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಂಜೀವಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ಜಗದೀಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರೂಪದೇವಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಗಾಯಿತ್ರಿ ಅವರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.    

 

ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಕರೆ


ಕೋಲಾರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ 2021-22ನೇ ಸಾಲಿನಲ್ಲಿ ಶ್ರಮಶಕ್ತಿ ಸಾಲದ ಯೋಜನೆ, ಕಿರು (ಮೈಕ್ರೋ) ಸಾಲ ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಟ್ಯಾಕ್ಸಿ, ಗೂಡ್ಸ್ ವಾಹನ ಖರೀದಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ಮೈಕ್ರೋ ವೈಯಕ್ತಿಕ ಸಾಲ ಕೋವಿಡ್-19 (ಮಹಿಳೆಯರಿಗೆ ಮಾತ್ರ) ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


 ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ಧರು, ಸಿಖ್ಖರು ಹಾಗೂ ಪಾರ್ಸಿ ಜನಾಂಗದವರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿದಾರರು ಕೋಲಾರ ಜಿಲ್ಲೆಯ ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ 81,000 ರೂ.ಗಳು ಮತ್ತು ನಗರ ಪ್ರದೇಶದವರಿಗೆ 1,03,000 ರೂ.ಗಳು ಮೀರಬಾರದು. ಮಹಿಳೆಯರಿಗೆ ಶೇಕಡ 33 ರಷ್ಟು ಹಾಗೂ ಅಂಗವಿಕಲರಿಗೆ ಶೇಕಡ 3 ರಷ್ಟು ಮೀಸಲಾತಿಯಿರುತ್ತದೆ.


 ಅರ್ಜಿದಾರರು ತಮ್ಮ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್‌ಕಾರ್ಡ್, ಆಧಾರ್‌ಕಾರ್ಡ್, ಚುನಾವಣಾ ಗುರುತಿನ ಚೀಟಿ,  IಈSಅ ಕೋಡ್ ಇರುವ ಬ್ಯಾಂಕ್ ಖಾತೆ ಪಾಸ್ ಬುಕ್ ಪ್ರತಿ, ಯೋಜನಾ ವರದಿ ಹಾಗೂ ಅರ್ಜಿದಾರರ ಮತ್ತು ಜಾಮೀನುದಾರರ 2 ಭಾವಚಿತ್ರಗಳು ಸಲ್ಲಿಸಬೇಕು.
 ಅರ್ಜಿಗಳನ್ನು ಆನ್‌ಲೈನ್ kmdc.kar.nic.in/loan/login.aspx ಮೂಲಕ ಡಿಸೆಂಬರ್ 15 ರೊಳಗಾಗಿ ಸಲ್ಲಿಸಬೇಕು. ಅರ್ಜಿಯ ಪ್ರತಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ಕಛೇರಿಗೆ  ಡಿಸೆಂಬರ್ 21 ರೊಳಗಾಗಿ ಸಲ್ಲಿಸಬೇಕು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಗ್ರಾಹಕ ಸಂವಾದ ಸಭೆ


ಕೋಲಾರ: ಶ್ರೀನಿವಾಸಪುರ ಬೆ.ವಿ.ಕಂ ಉಪ ವಿಭಾಗ ಕಛೇರಿಯಲ್ಲಿ ನವೆಂಬರ್ 20 ರಂದು ಮಧ್ಯಾಹ್ನ 3.00 ಗಂಟೆಗೆ ಗ್ರಾಹಕ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.


 ಈ ಸಭೆಯು ಪ್ರತಿ ತಿಂಗಳ ಮೂರನೇ ಶನಿವಾರ ನಡೆಯಲಿದ್ದು ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ವಿದ್ಯುತ್ ಸಂಭAದಿತ ಯಾವುದೇ ವಿಷಯಗಳನ್ನು ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ಬೆ.ವಿ.ಕಂ, ಕಾರ್ಯ ಮತ್ತು ಪಾಲನ ಉಪ ವಿಭಾಗ ಶ್ರೀನಿವಾಸಪುರದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು(ವಿ) ತಿಳಿಸಿದ್ದಾರೆ.