ಜಂತುಹುಳು ನಿವಾರಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ -ಡಾ||ಸ್ನೇಹ
dr sneha kolar
ಜಂತುಹುಳು ನಿವಾರಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ -ಡಾ||ಸ್ನೇಹ
ಕೋಲಾರ:
ಜಂತುಹುಳು ನಿವಾರಣೆ ಮಾಡುವುದರ ಪ್ರಯೋಜನಗಳು ಹಾಗೂ ರಾಷ್ಟಿçÃಯ ಜಂತುಹಳು ನಿವಾರಣಾ ದಿನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಹಾಗೂ ನವೆಂಬರ್ 23 ರಿಂದ 27ರ ವರೆಗೆ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಮಕ್ಕಳನ್ನು ಕರೆತರುವಂತೆ ಪೋಷಕರಿಗೆ ಉತ್ತೇಜಿಸಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ||ಸ್ನೇಹ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟಿçÃಯ ಜಂತುಹುಳು ನಿವಾರಣಾ ದಿನ ಹಾಗೂ ವಿಶ್ವ ಏಡ್ಸ್ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ರಾಷ್ಟಿçÃಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮದಡಿಯಲ್ಲಿ 1 ರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣೆಯಾಗುವುದನ್ನು ಉತ್ತೇಜಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ನೋಂದಾವಣೆಯಾಗಿರದ ಹಾಗೂ ಶಾಲೆಯಿಂದ ಹೊರಗುಳಿದ ಎಲ್ಲಾ ಮಕ್ಕಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ಜಗದೀಶ್ ಅವರು ಮಾತನಾಡಿ, ತಾಲ್ಲೂಕು ಮಟ್ಟದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಆಚರಣೆ ಹಾಗೂ ಜಾಥಾ ಕಾರ್ಯಕ್ರಮ ಮತ್ತು ವೇದಿಕೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಜಿಲ್ಲೆಯ ನಗರ ಮತ್ತು ಗ್ರಾಮಗಳಲ್ಲಿ ಒಟ್ಟು 20 ಹೈ ರಿಸ್ಕ್ ಸ್ಥಳಗಳಲ್ಲಿ ಹೆಚ್.ಐ.ವಿ, ಏಡ್ಸ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು. ಹೆಚ್.ಐ.ವಿ ಹರಡುವುದನ್ನು ತಡೆಗಟ್ಟಬೇಕು, ಯಾವುದೇ ವ್ಯಕ್ತಿ ಹೆಚ್.ಐ.ವಿ ಸೋಂಕಿಗೆ ಒಳಗಾಗಬಾರದು ಎಂದು ಅವರು ತಿಳಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದÀ ಡಾ||ಕಮಲ ಅವರು ಮಾತನಾಡಿ ಜಿಲ್ಲಾದ್ಯಂತ ಮಳೆಯು ಹೆಚ್ಚಾಗಿದ್ದು ಸೊಳ್ಳೆಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ಪತ್ತಿಯಾಗುತ್ತದೆ. ಸೊಳ್ಳೆಗಳಿಂದ ಡೆಂಗ್ಯೂ, ಚಿಕನ್ ಗುನ್ಯಾ ಹಾಗೂ ಇತರೆ ಖಾಯಿಲೆಗಳು ಬರುತ್ತದೆ ಆದ್ದರಿಂದ ಸೊಳ್ಳೆಗಳನ್ನು ನಿಯಂತ್ರಿಸಲು ಶಾಲೆ ಮಕ್ಕಳಲ್ಲಿ ಅರಿವು ಮೂಡಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ|| ನಾರಾಯಣಸ್ವಾಮಿ, ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ|| ರಮ್ಯಾ ದೀಪಿಕಾ, ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪ್ರೇಮ ಸೇರಿದಂತೆ ಮತ್ತಿತರರು ಇದ್ದರು.