ಯುವಕ-ಯುವತಿಯರು ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಿಕೊಳ್ಳಿ –ಡಾ|| ಆರ್.ಸೆಲ್ವಮಣಿ

ಯುವಕ-ಯುವತಿಯರು ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಿಕೊಳ್ಳಿ –ಡಾ|| ಆರ್.ಸೆಲ್ವಮಣಿ

ಯುವಕ-ಯುವತಿಯರು ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಿಕೊಳ್ಳಿ –ಡಾ|| ಆರ್.ಸೆಲ್ವಮಣಿ


ಕೋಲಾರ: ಭಾವಚಿತ್ರವುಳ್ಳ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2022 ಕಾರ್ಯಕ್ರಮವನ್ನು ನವೆಂಬರ್ 08 ರಿಂದ ಡಿಸೆಂಬರ್ 08 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಮತದಾರರ ಪಟ್ಟಿಗೆ ಸೇರ್ಪಡೆ, ಬಿಡತಕ್ಕವುಗಳು ಮತ್ತು ತಿದ್ದುಪಡಿಗಳನ್ನು ಮಾಡಲಾಗುವುದು. ಜನವರಿ 01,2022ಕ್ಕೆ 18 ವರ್ಷ ವರ್ಷ ತುಂಬುವ ಯುವಕ ಯವತಿಯರು ಮತದಾರರ ಪಟ್ಟಿಗೆ ಮೊದಲ ಬಾರಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ತಿಳಿಸಿದರು.
ಶನಿವಾರ ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಭಾವಚಿತ್ರವುಳ್ಳ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2022 ರ ಕಾರ್ಯಕ್ರಮದ ಅನುಷ್ಠಾನ ಹಾಗೂ ನಿರ್ವಹಿಸುವ ಕಾರ್ಯ ಚಟುವಟಿಕೆಗಳ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರು ಭಾರತ ಚುನಾವಣಾ ಆಯೋಗದ ಗಿoಣeಡಿ ಊeಟಠಿಟiಟಿe ಂಠಿಠಿ ಮೂಲಕ ನಮೂನೆ 6, 7, 8 ಮತ್ತು 8ಎ ಅರ್ಜಿಗಳನ್ನು ಆನ್‌ಲೈನ್ ಮೂಲಕ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು ಹಾಗೂ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಬೆಂಗಳೂರು ರವರ ವೆಬ್‌ಸೈಟ್ http://www.voterreg.kar.nic.in ºÁUÀÆ http://www.nvsp.inರಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.
 ಸಾರ್ವಜನಿಕರು ನಮೂನೆ-6 ಸೇರ್ಪಡೆಗಾಗಿ ಮತ್ತು ನಮೂನೆ-8 ತಿದ್ದುಪಡಿಗಾಗಿ ಸಲ್ಲಿಸವಾಗ ಹಟ್ಟಿದ ದಿನಾಂಕದ ಆಧಾರಕ್ಕಾಗಿ ಜನನ ಮತ್ತು ಮರಣ ನೋಂದಣಾಧಿಕಾರಿಗಳಿAದ ನೀಡುವ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಚಾಲನ ಪರವಾನಿಗೆ, 10ನೇ ತರಗತಿ ಹಾಗೂ ದ್ವಿತೀಯ ಪಿ.ಯು.ಸಿ ಅಂಕಪಟ್ಟಿ ಅಥವಾ ಭಾರತದ ಪಾಸ್ಪೋರ್ಟ್ ಮತ್ತು ನಿವಾಸದ ಆಧಾರಕ್ಕಾಗಿ ಅದೇ ವಿಳಾಸವುಳ್ಳ ಕನಿಷ್ಠ 1 ವರ್ಷ ನೀರು, ವಿದ್ಯುತ್, ಗ್ಯಾಸ್ ಸಂಪರ್ಕ ಬಿಲ್, ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಬ್ಯಾಂಕಿನ ಪಾಸ್ ಬುಕ್ ಅಥವಾ ಪೋಸ್ಟ್ ಆಫೀಸ್ ಪುಸ್ತಕ, ಭಾರತದ ಪಾಸ್ಪೋರ್ಟ್, ನೋಂದಾಯಿತಿ ಬಾಡಿಗೆ ಕರಾರು ಪತ್ರ ಹಾಗೂ ನೋಂದಾಯಿತಿ ಮಾರಾಟ ಕರಾರು ಪತ್ರ ಇವುಗಳಲ್ಲಿ ಯಾವುದಾದರು ಒಂದು ದಾಖಲೆಗಳನ್ನು ನೀಡಬೇಕು ಎಂದು ಅವರು ತಿಳಿಸಿದರು.
 ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸಿಕೊಳ್ಳದೇ ಇರುವವರು ನಮೂನೆ 6 ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಮತದಾರರ ಪಟ್ಟಿಯಲ್ಲಿ ವಿವರಗಳು ತಪ್ಪಿದ್ದಲ್ಲಿ ನಮೂನೆ 8 ರಲ್ಲಿ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಮತ ಪ್ರದೇಶದ ವರ್ಗಾವಣೆ ಬಯಸುವವರು ನಮೂನೆ 8ಎ ರಲ್ಲಿ ಅರ್ಜಿ ಸಲ್ಲಿಸಿ ವರ್ಗಾವಣೆ ಮಾಡಿಕೊಳ್ಳಬಹುದು. ಮತದಾರರ ಪಟ್ಟಿಯಲ್ಲಿ ಭಾವಚಿತ್ರವಿಲ್ಲದಿರುವವರು ನಮೂನೆ 8 ರೊಂದಿಗೆ ಭಾವಚಿತ್ರ ಸಹಿತ ಅರ್ಜಿ ಸಲ್ಲಿಸಬಹುದು. ಮೃತ ಹಾಗೂ ಶಾಶ್ವತವಾಗಿ ಸ್ಥಳಾಂತರಗೊAಡಿರುವವರು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ನಮೂನೆ 7 ರಲ್ಲಿ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು ಎಂದು ಅವರು ತಿಳಿಸಿದರು.
ವಿಶೇಷ ಅಭಿಯಾನ ಕಾರ್ಯಕ್ರಮವನ್ನು ಭಾನುವಾರಗಳಾದ ನವೆಂಬರ್ 07, 14, 21 ಮತ್ತು 28 ರಂದು ನಡೆಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಮತಗಟ್ಟೆ ಹಂತದ ಅಧಿಕಾರಿಗಳು ತಮ್ಮ ಮತಗಟ್ಟೆಗಳಲ್ಲಿ ಬೆಳಿಗ್ಗೆ 10.00 ಗಂಟೆಯಿAದ ಸಂಜೆ 5.00 ಗಂಟೆಯವರೆಗೆ ಉಪಸ್ಥಿತರಿರುತ್ತಾರೆ. ಹೆಚ್ಚಿನ ಸಹಕಾರ ಮತ್ತು ಮಾಹಿತಿಗಾಗಿ ಸಂಬAಧಪಟ್ಟ ಮತಗಟ್ಟೆ ಪ್ರದೇಶದ ಬಿ.ಎಲ್.ಒ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಛೇರಿಯನ್ನು ಸಾರ್ವಜನಿಕರು ಸಂಪರ್ಕಿಸಬೇಕು ಎಂದು ಅವರು ತಿಳಿಸಿದರು. 


ನವೆಂಬರ್ 02 ರಂದು ಶಿಕ್ಷಕರ ಕೌನ್ಸಿಲಿಂಗ್
ಕೋಲಾರ: 2020-21 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ, ತತ್ಸಮಾನ ವೃಂದದ ನಿರ್ದಿಷ್ಠ ಪಡಿಸಿದ ಹುದ್ದೆಗಳ ಮತ್ತು ತಾಂತ್ರಿಕ ಸಹಾಯಕರ ಗಣಕೀಕೃತ ಕೌನ್ಸಿಲಿಂಗ್‌ನ್ನು ನವೆಂಬರ್ 02 ರಂದು ಪೂರ್ವಾಹ್ನ 10.30 ಗಂಟೆಗೆ ಉಪನಿರ್ದೇಶಕರ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಅರ್ಹ ಶಿಕ್ಷಕರು ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್.ಜಿ.ನಾಗೇಶ್ ಅವರು ತಿಳಿಸಿದ್ದಾರೆ.

ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಬೇಕು
 – ಡಾ|| ಸ್ನೇಹಾ
ಕೋಲಾರ: ಇಲಾಖೆಗಳಿಂದ ಅನುಷ್ಠಾನಕ್ಕೆ ತಂದಿರುವ ಯೋಜನೆಗಳನ್ನು ನಿರೀಕ್ಷಿತ ಮಟ್ಟದಲ್ಲಿ ಕಾರ್ಯಕಗತಗೊಳಿಸಿಲ್ಲ. ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಸ್ನೇಹಾ ಅವರು ತಾಕೀತು ಮಾಡಿದರು.
ಶನಿವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೂಡಲೇ ವರದಿ ತಯಾರಿಸಿ ಸರ್ಕಾರಕ್ಕೆ ಕಳುಹಿಸಬೇಕು ಎಂದರು. ವಿವಿಧ ಇಲಾಖೆಗಳಿಂದ ತಯಾರಿಸಲಾಗಿರುವ ಕ್ರಿಯಾ ಯೋಜನೆಗೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. 
ಸಮಾಜ ಕಲ್ಯಾಣ ಇಲಾಖಾಧಿಕಾರಿ ಮಾತನಾಡಿ, ವಿದ್ಯಾರ್ಥಿ ನಿಲಯಗಳು ಸೆಪ್ಟೆಬಂರ್ ತಿಂಗಳಿAದ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳ ಪ್ರವೇಶ ಪ್ರಾರಂಭವಾಗಿದೆ. ಕಳೆದ ವರ್ಷ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಬಿಡುಗಡೆ ಮಾಡಲು ಆನ್‌ಲೈನ್ ತಾಂತ್ರಿಕ ದೋಷದಿಂದ ತಡವಾಗಿದೆ. ವಕೀಲರ ಅಭ್ಯಾಸಕ್ಕೆ ಸಹಾಯಧನ ಬಿಡುಗಡೆ ಬಾಕಿ ಇದೆ ಎಂದು ತಿಳಿಸಿದರು.
ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್‌ಗೌಡ ಮಾತನಾಡಿ, 2020-21ನೇ ಸಾಲಿನಲ್ಲಿ ಹುಳ ಸಾಕಾಣೆ, ಹನಿ ನೀರಾವರಿ ಪದ್ದತಿ ಹಾಗೂ ಉಪಕರಣ ಖರೀದಿಗೆ ಸಹಾಯಧನ ಬಿಡುಗಡೆಯಾಗಿದ್ದು, ಅರ್ಹ ಫಲಾನುಭವಿಗಳಿಗೆ ತಲುಪಿಸಲಾಗಿದೆ ಎಂದು ತಿಳಿಸಿದರು. 
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್ ಮಾತನಾಡಿ, ಇಲಾಖೆಗೆ ಈ ಸಾಲಿನಲ್ಲಿ ಶೇ.63ರಷ್ಟು ಗುರಿ ಸಾಧನೆ ಮಾಡಲಾಗಿದೆ. ಜಲಾಯಾನ ಯೋಜನೆಯಡಿ ಬಿಡುಗಡೆಯಾಗಬೇಕಾಗಿರುವ ಅನುದಾನ ಇದುವರೆಗೂ ಮಂಜೂರಾಗಿಲ್ಲ. ಈ ಭಾರಿ ವಾಡಿಕೆ ಮಳೆಗಿಂತ ಶೇ.40ರಷ್ಟು ಹೆಚ್ಚಾಗಿದ್ದು ತಗ್ಗು ಪ್ರದೇಶದಲ್ಲಿ 55 ಎಕರೆಯಷ್ಟು ಮುಂಗಾರು ಬೆಳೆಗಳು ನಾಶವಾಗಿವೆ. ಕಂದಾಯ ಮತ್ತು ಕೃಷಿ ಇಲಾಖಾಧಿಕಾರಿಗಳ ಜಂಟಿ ಸರ್ವೇ ಕಾರ್ಯ ನಡೆಸಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿಗಳು ಗುರಿ ಸಾಧನೆ ಸಮಾಧಾನಕರವಾಗಿಲ್ಲ. ಗುರಿ ಸಾಧನೆಯಲ್ಲಿ ಹಿಂದೆ ಉಳಿದಿರುವುದಕ್ಕೆ ಕೋವಿಡ್ ನೆಪ ಹೇಳಿದರೆ ಸಹಿಸುವುದಿಲ್ಲ. ಕಚೇರಿಯಿಂದ ಹೊರಗೆ ಬಂದು ಕೆಲಸ ಮಾಡಿದ್ದರೆ ಗುರಿ ಸಾಧನೆಯಾಗುತ್ತಿರಲಿಲ್ಲವೇ? ಕ್ರಿಯಾ ಯೋಜನೆ ತಯಾರಿಸುವುದು ಬಾಕಿ ಇರುವ ಇಲಾಖೆಗಳವರು ಕೂಡಲೇ ತಯಾರಿಸಿ ಸಲ್ಲಿಸಬೇಕು. ವಿಳಂಬ ಮಾಡಿದರೆ ಅನುದಾನ ಮಂಜೂರಾಗುವುದು ವಿಳಂಬವಾಗುತ್ತದೆ ಎಂದು ಎಚ್ಚರಿಸಿದರು. 
 ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಾಬು ಮಾತನಾಡಿ, ತಾಲ್ಲೂಕು ಪಂಚಾಯಿತಿಯಿAದ ಹಮ್ಮಿಕೊಳ್ಳುವ ಅಭಿವೃದ್ಧಿ ಕಾಮಗಾರಿಗಳಿಗೆ ಆಯಾ ಪಂಚಾಯಿತಿಯ ಗಮನಕ್ಕೆ ತರಲಾಗುವುದು. ಸದ್ಯಕ್ಕೆ ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿಲ್ಲ. ಕೆಲ ಗ್ರಾಮಗಳಲ್ಲಿ ಪೈಪ್ ಲೈನ್ ಆಳವಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.