ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಅಗತ್ಯ: ಡಾ|| ಆರ್.ಸೆಲ್ವಮಣಿ
ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಅಗತ್ಯ: ಡಾ|| ಆರ್.ಸೆಲ್ವಮಣಿ
ಕೋಲಾರ: ಒಬ್ಬ ವ್ಯಕ್ತಿ ಮರಣ ಹೊಂದಿದ ನಂತರ ತನ್ನ ಕಣ್ಣುಗಳನ್ನು ದಾನ ಮಾಡುವುದರಿಂದ ಇಬ್ಬರು ವ್ಯಕ್ತಿಗಳ ಜೀವನಕ್ಕೆ ಬೆಳಕನ್ನು ನೀಡಬಹುದು. ಆದ್ದರಿಂದ ಕಣ್ಣುಗಳ ರಕ್ಷಣೆ ಮತ್ತು ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ತಿಳಿಸಿದರು.
ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ೨೨ನೇ ವಿಶ್ವ ದೃಷ್ಟಿ ದಿನ ಕಾರ್ಯಕ್ರಮದ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಾನವನ ದೇಹದ ಪ್ರತಿಯೊಂದು ಅಂಗವು ತನ್ನದೇ ಆದ ಪ್ರಾಮುಖ್ಯತೆ ಹೊಂದಿದೆ. ಅದರಲ್ಲಿ ಕಣ್ಣಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಕಣ್ಣನ್ನು ರಕ್ಷಿಸಿಕೊಳ್ಳಲು ಪೌಷ್ಟಿಕ ಆಹಾರ ಸೇವಿಸಬೇಕು. ಕಣ್ಣುಗಳನ್ನು ಪದೇ ಪದೇ ಮುಟ್ಟಬಾರದು. ಟಿ.ವಿ, ಮೊಬೈಲ್, ಕಂಪ್ಯೂಟರ್‌ಗಳನ್ನು ಬಳುಸುವುದನ್ನು ಕಡಿಮೆ ಮಾಡಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅನುಷ್ಟಾನಾಧಿಕಾರಿ ಡಾ|| ಎನ್.ಸಿ. ನಾರಾಯಣಸ್ವಾಮಿ ಅವರು ಮಾತನಾಡಿ ಕಣ್ಣು ಪಂಚೇAದ್ರಿಯಗಳಲ್ಲಿ ಬಹಳ ಮುಖ್ಯವಾದ ಅಂಗ. ಪ್ರತಿಯೊಬ್ಬರು ಪ್ರಪಂಚ ಮತ್ತು ಪ್ರಕೃತಿಯ ಸೊಬಗನ್ನು ಸವಿಯಲು ದೃಷ್ಟಿ ಬಹಳಷ್ಟು ಮುಖ್ಯ. ಕಣ್ಣಿನ ಸೋಂಕು, ವಿಟಮಿನ್-ಎ ಕೊರತೆ, ಅಪೌಷ್ಠಿಕತೆ, ಕಣ್ಣಿಗೆ ಗಾಯಗಳಾದಾಗ, ಅನುವಂಶಿಕ ಕಾಯಿಲೆಗಳಿಂದ, ಪಟಾಕಿ ಸಿಡಿಸುವ ಸಂದರ್ಭದಲ್ಲಿ ಹಾಗೂ ಮೊಬೈಲ್, ಟಿ.ವಿ, ಹಾಗೂ ಕಂಪ್ಯೂಟರ್ ಹೆಚ್ಚಾಗಿ ಬಳಸುವುದರಿಂದ ಕಣ್ಣಿನ ದೃಷ್ಟಿ ಹೀನವಾಗುತ್ತದೆ ಎಂದು ಅವರು ತಿಳಿಸಿದರು.
ಸಣ್ಣ ಮಕ್ಕಳಲ್ಲಿ ಶಾಲೆಗಳಲ್ಲಿ ಕಣ್ಣಿನ ತಪಾಸಣೆ ಮಾಡಿ ಸುಮಾರು ೧೫೦೦ ರಿಂದ ೨೦೦೦ ಮಕ್ಕಳಿಗೆ ಕಣ್ಣಿನ ಸಮಸ್ಯೆ ಕಂಡು ಬಂದಿದೆ. ಹಿರಿಯ ವಯಸ್ಸಿನವರಲ್ಲಿ ಸುಮಾರು ೨೦೦೦ ಜನರಲ್ಲಿ ಕಣ್ಣಿನ ಸಮಸ್ಯೆ ಕಂಡು ಬರುತ್ತಿದೆ.
ದೃಷ್ಟಿ ಸಮಸ್ಯೆಗಳನ್ನು ತಡೆಯಲು ಪೌಷ್ಠಿಕ ಆಹಾರ ಸೇವಿಸಬೇಕು, ಧೂಮಪಾನ ಮಾಡಬಾರದು, ಕಣ್ಣುಗಳನ್ನು ಮುಟ್ಟುವ ಮುನ್ನ ಕೈಗಳನ್ನು ಸ್ವಚ್ಛ ಮಾಡಿಕೊಳ್ಳಬೇಕು ಹಾಗೂ ಕಂಪ್ಯೂಟರ್ ಉಪಯೋಗಿಸುವವರು ಪ್ರತಿ ೨೦ ನಿಮಿಷಕ್ಕೊಮ್ಮೆ ಪರದೆಯಿಂದ ಕನಿಷ್ಠ ೨೦ ಸೆಕೆಂಡ್‌ಗಳ ಕಾಲ ತಮ್ಮ ದೃಷ್ಟಿಯನ್ನು ಬೇರೆ ಕಡೆ ಹರಿಸಬೇಕು. ೪೦ ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಆಸ್ಪತ್ರೆಗೆ ಭೇಟಿ ಕೊಟ್ಟು ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕಣ್ಣಿನ ಮಹತ್ವದ ಬಗ್ಗೆ ಹಾಗೂ ಕಣ್ಣಿನ ರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಹಾಗೂ ಹಳ್ಳಿಗಳಲ್ಲಿ ಪ್ರತಿ ಮನೆಗೂ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿ ಕಣ್ಣಿನ ದೃಷ್ಟಿ ತೊಂದರೆ ಇರುವವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಲಾಗುವುದು ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಕೇಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಜಗದೀಶ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದನ್, ಆರ್.ಸಿ.ಎಚ್. ಅಧಿಕಾರಿ ಡಾ|| ವಿಜಯಕುಮಾರಿ, ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರೇಮ ಹಾಜರಿದ್ದರು.
ಈದ್ ಮಿಲಾದ್ ಆಚರಣೆ ಮಾರ್ಗಸೂಚಿ
ಕೋಲಾರ: ಕೋವಿಡ್-೧೯ ವೈರಾಣು ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಸಕ್ತ ವರ್ಷದ ಈದ್ ಮಿಲಾದ್ ಹಬ್ಬವನ್ನು ಅತ್ಯಂತ ಸರಳವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಬೇಕು. ಸಂಬAಧಪಟ್ಟ ಅಧಿಕಾರಿಗಳು, ಇಲಾಖಾ ಮುಖ್ಯಸ್ಥರು, ಪ್ರಾಧಿಕಾರಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಆಚರಣೆಗೆ ಮುನ್ನವೆ ನಿಷೇಧಗಳ ಕುರಿತು ವ್ಯಾಪಕವಾಗಿ ಪ್ರಚಾರ ಮಾಡಬೇಕು.
ಜಿಲ್ಲಾದ್ಯಂತ ಅಕ್ಟೋಬರ್ ೨೦ ರಂದು ಆಚರಿಸಲಿರುವ ಈದ್ ಮಿಲಾದ್ ಹಬ್ಬದ ಆಚರಣೆಯಲ್ಲಿ ಸಾಮೂಹಿಕ ಮೆರವಣೆಗೆಯನ್ನು ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಭೆ ಸಮಾರಂಭಗಳಲ್ಲಿ ೧೦೦ ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿ ವರ್ಧಕಗಳು, ಸೌಂಡ್ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ.
ಸ್ಯಾನಿಟೈಸೇಷನ್ ಹಾಗೂ ಹ್ಯಾಂಡ್‌ವಾಷ್‌ನೊAದಿಗೆ ಕೈ ತೊಳೆಯಲು ಪ್ರವೇಶ ದ್ವಾರದಲ್ಲಿ ಸೂಕ್ತ ವ್ಯವಸ್ಥೆ ಮಾಡಬೇಕು. ಪ್ರಾರ್ಥನಾ ಸ್ಥಳಗಳಲ್ಲಿ ಮುಖ ಗವಸನ್ನು ಕಡ್ಡಾಯವಾಗಿ ಧರಿಸಬೇಕು. ೬೦ ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ೧೦ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿ ಪ್ರಾರ್ಥನೆ ಮಾಡಬೇಕು. ಮಸೀದಿಯಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ತಮ್ಮ ಮನೆಗಳಿಂದ ಮುಸಲ್ಲಾವನ್ನು ಕಡ್ಡಾಯವಾಗಿ ತರಬೇಕು. ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡಬಾರದು. ಕೋವಿಡ್ -೧೯ ಸಮುಚಿತ ವರ್ತನೆಗಳೊಂದಿಗೆ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸಬೇಕು. ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಮಾಡಬೇಕು.
ಮಸೀದಿಗಳನ್ನು ಹೊರತುಪಡಿಸಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅಂದರೆ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗದಲ್ಲಿ ಹಬ್ಬವನ್ನು ಆಚರಿಸುವಂತಿಲ್ಲ. ಖಬರಸ್ಥಾನದಲ್ಲಿ ಈದ್ ಮಿಲಾದ್ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಮತ್ತು ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸಬಾರದು.
ಹಬ್ಬ ಹರಿದಿನಗಳು ಸಮಾಜದಲ್ಲಿ ಶಾಂತಿ ಸೌಹರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರವಾಗಿರುವುದರಿಂದ ಈದ್ ಮಿಲಾದ್ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡಬೇಕು. ಯಾವುದೇ ವ್ಯಕ್ತಿ ಈ ಆದೇಶವನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ಹಾಗೂ ಭಾರತೀಯ ದಂಡ ಸಂಹಿತೆಯ ಕಲಂ ೧೮೮ ರ ಅಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಮತ್ತು ಅನ್ವಯವಾಗುವ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ತಿಳಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಜಯಂತಿ: ಸಾಮೂಹಿಕ ಮೆರವಣಿಗೆ ಇಲ್ಲ
ಕೋಲಾರ: ಕೋವಿಡ್-೧೯ ವೈರಾಣು ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಸಕ್ತ ವರ್ಷದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಸರಳವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಬೇಕು. ಜಿಲ್ಲಾದ್ಯಂತ ಅಕ್ಟೋಬರ್ ೨೦ ರಂದು ಆಚರಿಸುವ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಸಾಮೂಹಿಕ ಮೆರವಣೆಗೆಯನ್ನು ನಿಷೇಧಿಸಲಾಗಿದೆ.
ಪ್ರವಚನ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಭೆ ಸಮಾರಂಭಗಳಲ್ಲಿ ೧೦೦ ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು, ಸೌಂಡ್ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ. ಆಚರಣೆಯ ಸ್ಥಳಗಳಲ್ಲಿ ಮುಖ ಗವಸನ್ನು ಕಡ್ಡಾಯವಾಗಿ ಧರಿಸಬೇಕು. ೬೦ ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ೧೦ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾರ್ವಜನಿಕವಾಗಿ ನಡೆಯುವ ಆಚರಣೆ, ಕಾರ್ಯಕ್ರಮಗಳಲ್ಲಿ ಜನರ ಒಗ್ಗೂಡುವಿಕೆಯಲ್ಲಿ ಭಾಗವಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.
ಗ್ರಾಮವಾಸ್ತವ್ಯ ಕಾರ್ಯಕ್ರಮ
ಕೋಲಾರ: “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಗಾಮವಾಸ್ತವ್ಯ ಕಾರ್ಯಕ್ರಮವನ್ನು ಅಕ್ಟೋಬರ್ ೧೬ ರಂದು ಬೆಳಿಗ್ಗೆ ೧೦.೦೦ ಗಂಟೆಯಿAದ ಸಂಜೆ ೦೫.೦೦ ಗಂಟೆಯವರೆಗೆ ಕೋಲಾರ ತಾಲ್ಲೂಕಿನ ಸುಗಟೂರು ಹೋಬಳಿಯ ಚಿಟ್ನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೋಲಾರ ತಹಶೀಲ್ದಾರ್ ಅವರು ತಿಳಿಸಿದ್ದಾರೆ.