ಸಂಸತ್ತಿನಲ್ಲಿ ಕೃಷಿ ಕಾಯ್ದೆ ಹಿಂಪಡೆಯುವವರೆಗೂ ನಿರಂತರ ಪ್ರತಿಭಟನೆ: ಸಂಯುಕ್ತ ಹೋರಾಟ ಸಮಿತಿ

farmers protest tumkur repeal farm laws

ಸಂಸತ್ತಿನಲ್ಲಿ ಕೃಷಿ ಕಾಯ್ದೆ ಹಿಂಪಡೆಯುವವರೆಗೂ ನಿರಂತರ ಪ್ರತಿಭಟನೆ: ಸಂಯುಕ್ತ ಹೋರಾಟ ಸಮಿತಿ


ಸಂಸತ್ತಿನಲ್ಲಿ ಕೃಷಿ ಕಾಯ್ದೆ ಹಿಂಪಡೆಯುವವರೆಗೂ
ನಿರಂತರ ಪ್ರತಿಭಟನೆ: ಸಂಯುಕ್ತ ಹೋರಾಟ ಸಮಿತಿ


ತುಮಕೂರು: ರೈತ ವಿರೋಧಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ವಾಪಾಸ್ ಪಡೆಯಬೇಕು, ಎಂಎಸ್‌ಪಿ ಖಾತ್ರಿ ನೀಡಬೇಕು, ವಿದ್ಯುತ್ ಖಾಸಗೀಕರಣ, ಬೀಜಸಂರಕ್ಷಣೆ ಮಸೂದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಂಯುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಕ್ಯಾತ್ಸಂದ್ರ ಟೋಲ್ ಬಳಿ ರಾಷ್ಟಿçÃಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ನಿರತ ರೈತರನ್ನು ಪೊಲೀಸರು ವಶಕ್ಕೆ ಪಡೆದರು.


ಪ್ರತಿಭಟನೆಯನ್ನುದ್ದೇಶಿ ಮಾತನಾಡಿದ ರೈತಸಂಘ ಮತ್ತು ಹಸಿರುಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್, ಪ್ರಧಾನಿ ನರೇಂದ್ರ ಮೋದಿ ಅವರು ರೈತ ವಿರೋಧಿಯಾಗಿರುವ ಮೂರು ಮಸೂದೆಗಳನ್ನು ವಾಪಾಸ್ ಪಡೆಯುವುದಾಗಿ ಹೇಳಿದ್ದಾರೆ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಪ್ರಧಾನಿಗಳು ಕೊಟ್ಟ ಭರವಸೆಯಂತೆ ಸಂಸತ್ತಿನಲ್ಲಿ ವಾಪಾಸ್ ಪಡೆದುಕೊಳ್ಳುವವರೆಗೆ ಹೋರಾಟ ಮುಂದುವರೆಸಬೇಕು. ಆಗ ಮಾತ್ರ ರೈತರ ಹೋರಾಟಕ್ಕೆ ಜಯಸಿಗಲಿದೆ ಎಂದು ಹೇಳಿದರು.


ಪಂಚರಾಜ್ಯಗಳ ಚುನಾವಣೆಯಲ್ಲಿ ಸೋಲುವ ಭಯದಿಂದ ಪ್ರಧಾನಿಗಳು ರಾಜಕೀಯ ಅಸ್ತಿತ್ವ ಕಾಪಾಡಿಕೊಳ್ಳಲು, ಕಾಯ್ದೆ ಹಿಂಪಡೆಯುವುದಾಗಿ ಹೇಳಿದ್ದಾರೆ. ರೈತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ, ಸಂಸತ್ತಿನಲ್ಲಿ ಕಾಯ್ದೆಯನ್ನು ಕಾನೂನಾತ್ಮಕವಾಗಿ ಹಿಂಪಡೆಯುವುದರ ಜೊತೆಗೆ ರೈತರ ಬೇಡಿಕೆಗಳಾದ ಎಂಎಸ್‌ಪಿ ಖಾತ್ರಿ, ಬೀಜಸಂರಕ್ಷಣೆ ಮಸೂದೆ, ವಿದ್ಯುತ್ ಖಾಸಗೀಕರಣವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.


ಕೇಂದ್ರ ಸರ್ಕಾರದ ಮಾದರಿಯಲ್ಲಿಯೇ ರಾಜ್ಯ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದಿರುವ ಎಂಪಿಎAಸಿ ಮತ್ತು ಭೂಸುಧಾರಣಾ ತಿದ್ದುಪಡಿ ಮಸೂದೆಗಳನ್ನು ವಾಪಸ್ ಪಡೆಯಬೇಕು ಮತ್ತು ಹೋರಾಟದಲ್ಲಿ ಹುತ್ಮಾತ್ಮರಾಗಿರುವ 700 ರೈತರಿಗೆ ತೆಲಂಗಾಣ ಸರ್ಕಾರದಂತೆ ರಾಜ್ಯ ಸರ್ಕಾರವು 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ, ಅನ್ನದಾತರ ಹೋರಾಟಕ್ಕೆ ಕೇಂದ್ರ ಸರ್ಕಾರ ಹೆದರಿ ಮೂರು ಕಾಯ್ದೆಗಳನ್ನು ವಾಪಾಸ್ ಪಡೆಯುವುದಾಗಿ ಹೇಳಿದೆ, ಹೋರಾಟದಲ್ಲಿರುವ ರೈತರ ಬೇಡಿಕೆಗಳು ಬಾಕಿ ಇದ್ದು, ಸ್ವಾಮಿನಾಥನ್ ಆಯೋಗದ ವರದಿ ಜಾರಿಗೊಳಿಸುವುದು ಸೇರಿದಂತೆ ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.


ಹೋರಾಟದಲ್ಲಿ ಸಾವನ್ನಪ್ಪಿರುವ 700 ರೈತ ಹುತ್ಮಾತರ ಕುಟುಂಬದ ರಕ್ಷಣೆ ಮಾಡಲು ಕೇಂದ್ರ ಸರ್ಕಾರ 50 ಲಕ್ಷ ರೂ.ಗಳ ಪರಿಹಾರ ಘೋಷಿಸಬೇಕು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯಬೇಕೆAದು ಒತ್ತಾಯಿಸಿದ ಅವರು, ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿದೆ. ರೈತರು ಬೆಳೆದಿರುವ ಎಲ್ಲ ಬೆಳೆಗಳಿಗೆ ನಷ್ಟ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.


ಆರ್‌ಕೆಎಸ್ ಸಂಘಟನೆಯ ಸ್ವಾಮಿ ಅವರು ಮಾತನಾಡಿ, ದುರಂಹಕಾರಿ, ಫ್ಯಾಸಿಸ್ಟ್ ಸರ್ಕಾರ ರೈತರ ಮುಂದೆ ತಲೆ ಬಾಗಿದೆ, ಒಂದು ವರ್ಷದಿಂದ ಸಂಘಟಿತ ಹೋರಾಟದಿಂದ ಮೋದಿ ಸರ್ಕಾರ ಮಣಿದಿದೆ, ಮೋದಿ ಸರ್ಕಾರ ವಚನ ಭ್ರಷ್ಟ ಸರ್ಕಾರ, ಅವರನ್ನು ನಂಬುವAತಿಲ್ಲ. ರೈತರು ಗೆಲ್ಲಬೇಕಾದರೆ ಹೋರಾಟ ಮುಂದುವರೆಯಬೇಕು. ಶಾಸನ ಬದ್ಧವಾಗಿ ಹಿಂಪಡೆಯುಬೇಕು, ಕಿಶಾನ್ ಮೋರ್ಚಾ ಹೋರಾಟಕ್ಕೆ ರಾಜ್ಯದಲ್ಲಿ ಅಪೂರ್ವ ಬೆಂಬಲ ಸಿಕ್ಕಿದೆ ಎಂದರು.


ಎಐಟಿಯುಸಿ ಕಾರ್ಯದರ್ಶಿ ಗಿರೀಶ್ ಮಾತನಾಡಿ ಮೋದಿ ಸರ್ಕಾರವನ್ನು ಜನರು ನಂಬಲು ಸಾಧ್ಯವಿಲ್ಲ ಅವರು ನೀಡಿದ್ದ ಭರವಸೆಗಳೆಲ್ಲ ಪೊಳ್ಳು, ಚುನಾವಣೆಯಲ್ಲಿ ಗೆಲ್ಲುವಾಗಿನಿಂದ ಇಲ್ಲಿಯವರೆಗೆ ನೀಡಿದ್ದ ಯಾವ ಭರವಸೆಯನ್ನು ಮೋದಿ ಸರ್ಕಾರ ಈಡೇರಿಸಿಲ್ಲ, ಮುಂಬರುವ ಪಂಚರಾಜ್ಯಗಳ ಚುನಾವಣೆಯಲ್ಲಿ ಸರ್ಕಾರ ಬೀಳುತ್ತೆ ಎಂಬ ಭಯದಿಂದ ಜನರನ್ನು ಮರಳು ಮಾಡಲು ಯತ್ನಿಸುತ್ತಿದ್ದಾರೆ. ಜೀವ ವಿರೋಧಿ ಕಾಯ್ದೆಗಳಾಗಿರುವ ವಿದ್ಯುತ್, ಕಾರ್ಮಿಕ ಕಾಯ್ದೆಗಳನ್ನು ಸಹ ಹಿಂಪಡೆಯಬೇಕೆAದು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರಾದ ಕೆಂಕೆರೆ ಸತೀಶ್, ಪೂಜಾರಪ್ಪ, ಧನಂಜಯಾರಾಧ್ಯ, ಗಿರೀಶ್, ಸಿದ್ದರಾಜು, ಅನಿಲ್ ಕುಮಾರ್, ಬೆಟ್ಟಾಗೌಡ, ರಿಯಾಜ್ ಪಾಷ, ಕಲ್ಯಾಣಿ, ಅಜ್ಜಪ್ಪ, ಕಂಬೇಗೌಡ, ಬಿ. ಉಮೇಶ್, ಸುಬ್ರಮಣ್ಯ, ಸೈಯದ್ ಮುಜೀಬ್, ಕಮಲಮ್ಮ ಸೇರಿದಂತೆ ವಿವಿಧ ರೈತ ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.




ಅಕಾಲಿಕ ಮಳೆದಿಂದಾಗಿ ರೈತರು ಜಾನುವಾರಗಳನ್ನು ಕಳೆದುಕೊಂಡಿದ್ದಾರೆ. ಅನೇಕ ಮನೆಗಳು ಕುಸಿತವಾಗಿದ್ದು, ರೈತರಿಗೆ ಉಂಟಾಗಿರುವ ನಷ್ಟವನ್ನು ರಾಜ್ಯ ಸರ್ಕಾರ ತುರ್ತಾಗಿ ತುಂಬಿಕೊಡಬೇಕು, ಕಳೆದ ವರ್ಷದ ಬೆಳೆ ವಿಮೆ ಪರಿಹಾರ ಬಾಕಿ ಇದ್ದು, ಶೀಘ್ರ ವಿಮೆ ಪರಿಹಾರ ಕೊಡಿಸಬೇಕು ಹಾಗೂ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ರೈತರ ಬೆಳೆಗೆ ಸೂಕ್ತ ಬೆಲೆ ನೀಡಬೇಕು.
- ಸಂಯುಕ್ತ ಹೋರಾಟ ಸಮಿತಿ