ರೈತರ ಹೋರಾಟ ಅಂತ್ಯ: ರೈತರಿಗೆ ಲಸಿಕೆ ನೀಡಲು ಸಿದ್ಧತೆ
farmers-protest-ended-vaccine-to-be-given
ರೈತರ ಹೋರಾಟ ಅಂತ್ಯ: ರೈತರಿಗೆ ಲಸಿಕೆ ನೀಡಲು ಸಿದ್ಧತೆ
ನವದೆಹಲಿ: ಕೃಷಿ ಕಾಯ್ದೆ ಹಿಂದಕ್ಕೆ ಪಡೆಯುವುದು, ಬೆಂಬಲ ಬೆಲೆ ಖಾತರಿ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊAಡು ಕಳೆದ ಒಂದು ವರ್ಷಕ್ಕೂ ಅಧಿಕ ಸಮಯದಿಂದ ಹೋರಾಟ ನಡೆಸುತ್ತಿದ್ದ ರೈತರು ತಮ್ಮ ಹೋರಾಟವನ್ನು ಅಂತ್ಯಗೊಳಿಸಿದ್ದಾರೆ.
ದೆಹಲಿಯ ವಿವಿಧ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ತಮ್ಮ ಹೋರಾಟವನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಎಲ್ಲ ರೈತರಿಗೆ ಸೋಂಕಿನ ಲಸಿಕೆ ನೀಡಲು ದೆಹಲಿ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.
ಕೇAದ್ರ ಗೃಹ ಸಚಿವಾಲಯ ಮತ್ತು ರೈತ ನಾಯಕರೊಂದಿಗೆ ನಡೆದ ಮಾತುಕತೆ ಯಶಸ್ವಿಯಾದ ಹಿನ್ನೆಲೆಯಲ್ಲಿ ರೈತರು ತಮ್ಮ ಹೋರಾಟವನ್ನು ಕೈಬಿಡಲು ನಿರ್ಧರಿಸಿದ್ದಾರೆ.
ರೈತರು ಮುಂದಿಟ್ಟುಕೊAಡು ಹೋರಾಟ ಮಾಡುತ್ತಿರುವ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು ಹೋರಾಟವನ್ನು ಅಂತ್ಯಗೊಳಿಸಿದ್ದಾರೆ.
ಹೋರಾಟ ನಡೆಸುತ್ತಿದ್ದ ರೈತರ ಮೇಲೆ ದಾಖಲಾಗಿದ್ದ ಎಲ್ಲ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವುದು, ರೈತರಿಗೆ ಬೆಂಬಲ ಬೆಲೆ ಖಾತರಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ.
40ಕ್ಕೂ ಹೆಚ್ಚು ರೈತಸಂಘಟನೆಗಳು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ಅಡಿಯಲ್ಲಿ ದೆಹಲಿಯ ವಿವಿಧ ಭಾಗಗಳಲ್ಲಿ ಕಳೆದ ಒಂದು ವರ್ಷಕ್ಕೂ ಅಧಿಕ ಸಮಯದಿಂದ ಹೋರಾಟ ನಡೆಸುತ್ತಿದ್ದರು.
ಕೇಂದ್ರ ಸರ್ಕಾರದ ಲಿಖಿತ ಭರವಸೆ ಹಿನ್ನೆಲೆಯಲ್ಲಿ ರೈತರು ಹೋರಾಟವನ್ನು ಕೈಬಿಟ್ಟಿದ್ದಾರೆ. ಕೇಂದ್ರ ಸರ್ಕಾರ ನೀಡಿರುವ ಭರವಸೆಗಳನ್ನು ಈಡೇರಿಸದಿದ್ದರೆ ಮತ್ತೆ ಮತ್ತೆ ಹೋರಾಟ ಮುಂದುವರೆಯಲಿದೆ ಎನ್ನುವ ಸೂಚನೆಯನ್ನು ರೈತ ನಾಯಕರು ಕೇಂದ್ರ ಸರ್ಕಾರಕ್ಕೆ ನೀಡಿದ್ದಾರೆ.