ಮಧುಗಿರಿಗೆ ಇಂದು ದೇವೇಗೌಡ

hdd madhugiri

ಮಧುಗಿರಿಗೆ ಇಂದು ದೇವೇಗೌಡ

ಮಧುಗಿರಿಗೆ ಇಂದು ದೇವೇಗೌಡ


ಮಧುಗಿರಿ: ತುಮಕೂರು ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಜ್ಯಾತ್ಯಾತೀತ ಜನತಾದಳ ಪಕ್ಷದ ಅಭ್ಯರ್ಥಿ ಅನಿಲ್ ಕುಮಾರ್‌ರವರ ಪರ ಚುನಾವಣಾ ಪ್ರಚಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರವರು ಮಧುಗಿರಿಗೆ ಆಗಮಿಸಲಿದ್ದಾರೆ.

ಪಟ್ಟಣದ ವಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯುವ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ  ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಶಾಸಕ ಗೌರಿಶಂಕರ್, ಮಾಜಿ ಶಾಸಕ ತಿಮ್ಮರಾಯಪ್ಪ, ಸುಧಾಕರ್ ಲಾಲ್, ಜಿಲ್ಲಾ  ಜಾತ್ಯತೀತ ಜನತಾದಳ ಅದ್ಯಕ್ಷ ಅಂಜಿನಪ್ಪ ಸೇರಿದಂತೆ ಗ್ರಾ.ಪಂ. ಸದಸ್ಯರು, ಪುರಸಭಾ ಸದಸ್ಯರು, ಜಿ.ಪಂ. ಮತ್ತು ತಾ.ಪಂ. ಮಾಜಿ ಸದಸ್ಯರು, ಮುಖಂಡರು ಭಾಗವಹಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಶಾಸಕ ಎಂ.ವಿ. ವೀರಭದ್ರಯ್ಯ ತಿಳಿಸಿದ್ದಾರೆ.