ಬಗೆ ಹರಿಯದ ಹಿಜಾಬ್ ಕ್ಯಾತೆ; ಹೈಕೋರ್ಟ್ ಕೇಸ್ ತ್ರಿಸದಸ್ಯ ಪೀಠಕ್ಕೆ

ಬಗೆ ಹರಿಯದ ಹಿಜಾಬ್ ಕ್ಯಾತೆ; ಹೈಕೋರ್ಟ್ ಕೇಸ್ ತ್ರಿಸದಸ್ಯ ಪೀಠಕ್ಕೆ, hijab-three-judge-bench

ಬಗೆ ಹರಿಯದ ಹಿಜಾಬ್ ಕ್ಯಾತೆ; ಹೈಕೋರ್ಟ್ ಕೇಸ್ ತ್ರಿಸದಸ್ಯ ಪೀಠಕ್ಕೆ

 

ಬಗೆ ಹರಿಯದ ಹಿಜಾಬ್ ಕ್ಯಾತೆ; ಹೈಕೋರ್ಟ್ ಕೇಸ್ ತ್ರಿಸದಸ್ಯ ಪೀಠಕ್ಕೆ


ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಇದೀಗ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗೆ ವರ್ಗಾಯಿಸಿದೆ.

ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಸಿಜೆಗೆ ವರ್ಗಾಯಿಸಿದ್ದು ವಿಸ್ತೃತ ಪೀಠ ರಚಿಸುವ ಬಗ್ಗೆ ಹೈಕೋರ್ಟ್ ಸಿಜೆ ತೀರ್ಮಾನಿಸಲಿ. ಈ ಪ್ರಕರಣ ವಿಸ್ತೃತ ಪೀಠದಲ್ಲಿ ವಿಚಾರಣೆಗೆ ಯೋಗ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. 

ಹೈಕೋರ್ಟ್ ಸಿಜೆ ಈ ಬಗ್ಗೆ ವಿವೇಚನಾಧಿಕಾರ ಹೊಂದಿದ್ದಾರೆ. ತಕ್ಷಣವೇ ಸಂಪೂರ್ಣ ಕಡತ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿ ಎಂದು ಹೈಕೋರ್ಟ್ನ ರಿಜಿಸ್ಟಾçರ್‌ಗೆ ನ್ಯಾಯಮೂರ್ತಿ ನಿರ್ದೇಶನ ನೀಡಿದ್ದಾರೆ. ಮುಂದಿನ ವಿಚಾರಣೆ ವೇಳೆ ಅರ್ಜಿದಾರರು ಮನವಿ ಸಲ್ಲಿಸಬಹುದು. ಇನ್ನು ಮಧ್ಯಂತರ ಆದೇಶದ ಬಗ್ಗೆ ಮನವಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಸದ್ಯ ಈ ವಿವಾದದ ಬಗ್ಗೆ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ ರಾಜ್ಯ ಸರ್ಕಾರ ಸಂಘರ್ಷವನ್ನು ಕೊನೆಗಾಣಿಸಬೇಕಿದೆ. ವಿಪಕ್ಷಗಳೂ ಕೂಡ ಮತ್ತಷ್ಟು ಜವಾಬ್ದಾರಿಯುತವಾಗಿ ವರ್ತಿಸಬೇಕಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದರು.


ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಿ: ಸಿದ್ದು ಆಗ್ರಹ

ಬೆಂಗಳೂರು: ವಿದ್ಯಾರ್ಥಿಗಳ ನಡುವೆ ಕೋಮು ಸಂಘರ್ಷ ಹುಟ್ಟು ಹಾಕುತ್ತಿರುವವರು ಯಾರೇ ಆದರೂ ಪತ್ತೆ ಹಚ್ಚಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಎಸ್‌ಡಿಪಿಐ, ಸಿಎಫ್‌ಐ ಸೇರಿ ಯಾವುದೇ ಸಂಘಟನೆಯಿದ್ದರೂ ಮುಲ್ಲಾಜಿಲ್ಲದೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಈ ವಿಷಯದಲ್ಲಿ ಸರ್ಕಾರ ಇನ್ನೂ ಕಾಲಹರಣ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಹಿಜಾಬ್ ಧಾರಣೆಯ ಸರಿ-ತಪ್ಪು ಬಗ್ಗೆ ನ್ಯಾಯಾಲಯ ನಿರ್ಧರಿಸಲಿ. ಅಲ್ಲಿಯವರೆಗೆ ಕಾಯೋಣ. ಆದರೆ, ವಿದ್ಯಾರ್ಥಿನಿಗಳ ಮೇಲೆ ಹಲ್ಲೆಗೆ ಪ್ರಯತ್ನ, ಶಾಲೆಗೆ ಕಲ್ಲೆಸೆತ, ರಾಷ್ಟçಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಹಾರಿಸುವುದು ಸರಿಯಲ್ಲ.

ಮೊದಲು ಈ ಪುಂಡು ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳಿ. ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ಸರ್ಕಾರ ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ. ವಿವಾದದ ಮುಂದೆ ಯಾರಿದ್ದಾರೆ ಎನ್ನುವುದನ್ನು ಜನತೆ ಲೈವ್ ಆಗಿ ನೋಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಯಾವಾಗ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಬೇಡ: ಖರ್ಗೆ
ನವದೆಹಲಿ: `ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ಸಂಘರ್ಷವನ್ನು ಕೊನೆಗಾಣಿಸುವುದು ಕರ್ನಾಟಕ ಸರ್ಕಾರದ ಜವಾಬ್ದಾರಿ. ಅಲ್ಲದೇ ವಿಪಕ್ಷಗಳು ಕೂಡ ಈ ಸಂಘರ್ಷವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಾರದು ಎಂದು ಕಾಂಗ್ರೆಸ್ ಮುಖಂಡ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, 'ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ಸಂಘರ್ಷ ಅತ್ಯಂತ ಖೇದಕರ ಸಂಗತಿ. ರಾಜ್ಯ ಸರ್ಕಾರ ಆದಷ್ಟು ಬೇಗ ಈ ಸಂಘರ್ಷವನ್ನು ಕೊನೆಗಾಣಿಸಬೇಕು. ವಿಪಕ್ಷಗಳು ಕೂಡ ಇದರಲ್ಲಿ ರಾಜಕೀಯ ಲಾಭವನ್ನು ಹುಡುಕಬಾರದು. ರಾಜ್ಯದ ಕೋಮು ಸೌಹಾರ್ದತೆಯನ್ನು ಮತ್ತು ಹಿಂದೂ-ಮುಸ್ಲಿಂ ಒಗ್ಗಟ್ಟನ್ನು ಮುರಿಯಲು ಹಿಜಾಬ್ ವಿವಾದವನ್ನು ಸೃಷ್ಟಿಸಲಾಗಿದೆ ಎಂದರು.
ಕರ್ನಾಟಕ ವಿವಿಧ ಧರ್ಮ, ಭಾಷೆ, ಆಚರಣೆಗೆ ತವರೂರಾಗಿದೆ. ಶತಶತಮಾನಗಳಿಂದ ಇಲ್ಲಿನ ಜನರು ಅನ್ಯೋನ್ಯತೆಯಿಂದ ಬದುಕುತ್ತಿದ್ದಾರೆ. ವಿವಿಧತೆಯಲ್ಲಿ ಏಕತೆ ಎಂಬುದು ಕರ್ನಾಟಕದ ಮಂತ್ರ. ಈ ಏಕತೆಯನ್ನು ಮುರಿಯಲು ಕೆಲವು ಹಿಜಾಬ್ ಅಸ್ತç ಬಳಸುತ್ತಿರುವುದು ನೋವಿನ ಸಂಗತಿ ಎಂದು ಖರ್ಗೆ ಹೇಳಿದ್ದಾರೆ.