ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಪುತ್ರ ಡಾ. ಜೆ.ಎಂ. ಅಭಿಜ್ಞ ಮತ್ತು ಡಾ. ಎನ್.ಎಂ. ಅಶ್ವಿನಿ ರವರ ಮದುವೆಯು ಚಿಕ್ಕನಾಯಕನಹಳ್ಳಿ ತಾಲೂಕಿನ ಜೆ.ಸಿ.ಪುರದ ಅವರ ನಿವಾಸದಲ್ಲಿ ಗುರುವಾರ ಬೆಳಿಗ್ಗೆ ನಡೆಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಪಾಲ್ಗೊಂಡು ನೂತನ ವಧು ವರರಿಗೆ ಶುಭ ಹಾರೈಸಿದರು.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಆಗಮಿಸಿ ನವ ವಧುವರರಿಗೆ ಶುಭಕೋರಿದರು. ವಿಧಾನ ಪರಿಷತ್ ಸದಸ್ಯ ವೈ.ಎನ್. ನಾರಾಯಣಸ್ವಾಮಿ, ಮಾಜಿ ಶಾಸಕರಾದ ಬಿ. ಸುರೇಶ್‌ಬಾಬು, ಎಂ.ಟಿ. ಕೃಷ್ಣಪ್ಪ ಜೊತೆಯಲ್ಲಿದ್ದರು.
ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪಾಲ್ಗೊಂಡು ನೂತನ ವಧುವರರಿಗೆ ಶುಭ ಕೋರಿದರು.
ಆದಿಚುಂಚನಗಿರಿ ಮಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಹ ಆಗಮಿಸಿ ನವ ವಧುವರರನ್ನು ಆಶೀರ್ವದಿಸಿದರು.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೇರಿದಂತೆ ರಾಜ್ಯ ಸರ್ಕಾರದ ಬಹುತೇಕ ಎಲ್ಲ ಮಂತ್ರಿಗಳು, ವಿಧಾನ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲೆಯ ಎಲ್ಲ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಉನ್ನತ ಮಟ್ಟದ ಅಧಿಕಾರಿಗಳು ಮದುವೆಗೆ ಹಾಜರಾಗಿ ಶುಭ ಹಾರೈಸಿದರು.
ಜೆ.ಸಿ.ಪುರದಲ್ಲಿ ಬೃಹತ್ ಪೆಂಡಾಲ್ ನಿರ್ಮಿಸಲಾಗಿದ್ದು ಸಚಿವರ ಸ್ವಕ್ಷೇತ್ರ ಚಿಕ್ಕನಾಯಕನಹಳ್ಳಿ ತಾಲೂಕಿನ ಹಾಗೂ ಅಕ್ಕಪಕ್ಕದ ತಾಲೂಕುಗಳ ಜನರು ಮದುವೆಯಲ್ಲಿ ಪಾಲ್ಗೊಂಡರು.