ಮಕ್ಕಳ ವಿರುದ್ಧ ಅತ್ಯಾಚಾರ ಹಾಗೂ ಇನ್ನಿತರ ಪ್ರಕರಣಗಳು ನಡೆದಾಗ ಸಂಬAಧಪಟ್ಟವರು ಪೊಲೀಸ್ ಠಾಣೆಗೆ ಬಂದು ದೂರು ನೀಡಿ -ನ್ಯಾ.ಬಿ.ಪಿ. ದೇವಮಾನೆ
ಮಕ್ಕಳ ವಿರುದ್ಧ ಅತ್ಯಾಚಾರ ಹಾಗೂ ಇನ್ನಿತರ ಪ್ರಕರಣಗಳು ನಡೆದಾಗ ಸಂಬAಧಪಟ್ಟವರು ಪೊಲೀಸ್ ಠಾಣೆಗೆ ಬಂದು ದೂರು ನೀಡಿ -ನ್ಯಾ.ಬಿ.ಪಿ. ದೇವಮಾನೆ
ಕೋಲಾರ : ಮಕ್ಕಳ ವಿರುದ್ಧ ಅತ್ಯಾಚಾರ ಹಾಗೂ ಇನ್ನಿತರ ಪ್ರಕರಣಗಳು ನಡೆದಾಗ ಸಂಬಂಧಪಟ್ಟವರು ಪೊಲೀಸ್ ಠಾಣೆಗೆ ಬಂದು ದೂರು ನೀಡಿ ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕು. ಮಕ್ಕಳ ಮೇಲೆ ಪ್ರಕರಣಗಳು ಹೆಚ್ಚು ನಡೆಯುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರ್ಕಾರ ಪೋಕ್ಸೋ ಕಾಯ್ದೆಯನ್ನು ಜಾರಿಗೊಳಿಸಿದೆ. ಅತಿ ಗಂಭೀರ ಪ್ರಕರಣಕ್ಕೆ ಕನಿಷ್ಠ ೨೦ ವರ್ಷ, ಗರಿಷ್ಠ ಗಲ್ಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಪೋಕ್ಸೋ ಪ್ರಕರಣಗಳ ವಿಶೇಷ ಶೀಘ್ರಗತಿ ನ್ಯಾಯಾಲಯದ ಗೌರವಾನ್ವಿತ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಪಿ. ದೇವಮಾನೆ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೋಲಾರ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಡಿದ್ದ, ಭಾರತದ ೭೫ನೇ ವರ್ಷದ ಸ್ವಾತಂತ್ರö್ಯದ ಅಮೃತ ಮಹೋತ್ಸವದ ಅಂಗವಾಗಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು, ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ, ಪೋಕ್ಸೊ ಕಾಯ್ದೆ ೨೦೧೨, ಮಕ್ಕಳಿಗೆ ಮಾರಕವಾಗುವಂತಹ ಮೂಢನಂಬಿಕೆಗಳ ವಿರುದ್ಧ ಕೌಟುಂಬಿಕ, ಸಾಮಾಜಿಕವಾಗಿ ನಡೆಯುವ ದೌರ್ಜನ್ಯ ಸಮಸ್ಯೆಗಳು ಹಾಗೂ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಕಾಯ್ದೆ ಕುರಿತು ಜಿಲ್ಲಾ ಮಟ್ಟದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಹೆಚ್ಚಾಗುತ್ತಿದ್ದು ಅಧಿಕಾರಿಗಳು ತಡೆಯಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು. ಪ್ರತಿಯೊಬ್ಬರು ಮೂಢನಂಬಿಕೆಯ ವಿರುದ್ಧ ಹೋರಾಡಬೇಕು ಎಂದು ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಹೆಚ್. ಗಂಗಾಧರ್ ಅವರು ಮಾತನಾಡಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ. ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಅಧಿನಿಯಮದ ಬಗ್ಗೆ ತಿಳಿಸಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಚೌಡಪ್ಪ.ಎಸ್.ಹೆಚ್. ಅವರು ಮಾತನಾಡಿ ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಿದರು. ಕೋವಿಡ್ ಸಮಯದಲ್ಲಿ ಹೆಚ್ಚು ಬಾಲ್ಯವಿವಾಹಗಳು ನಡೆದಿರುವುದು ತಮ್ಮ ಗಮನಕ್ಕೆ ಬಂದಿದ್ದು ಎಲ್ಲಾ ಅಧಿಕಾರಿಗಳು ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕ್ರಮಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎಂ.ಜಿ. ಪಾಲಿ ಅವರು ವಹಿಸಿದ್ದರು.
ಕಾರ್ಯಾಗಾರದಲ್ಲಿ ಚೈಲ್ಡ್ ರೈಟ್ಸ್ ಟ್ರಸ್ಟ್ನ ಸಂಪನ್ಮೂಲ ವ್ಯಕ್ತಿಗಳಾದ ಸತೀಶ್ ಅವರು ಪೋಕ್ಸೋ ಕಾಯ್ದೆ ೨೦೧೨ ರ ಕುರಿತು ಮತ್ತು ಲಕ್ಷಿö್ಮÃಪ್ರಸನ್ನ ಅವರು ಮಕ್ಕಳಿಗೆ ಮಾರಕವಾಗುವಂತಹ ಮೂಢನಂಬಿಕೆಗಳ ವಿರುದ್ಧ ಕೌಟುಂಬಿಕ, ಸಾಮಾಜಿಕವಾಗಿ ನಡೆಯುವ ದೌರ್ಜನ್ಯ ಸಮಸ್ಯೆಗಳ ಬಗ್ಗೆ ಹಾಗೂ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಕಾಯ್ದೆ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಮೇಶ್.ಎಂ., ವಕೀಲರಾದ ಧನರಾಜ್.ಕೆ.ಆರ್, ಕೆ.ಮಂಜು, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.