ಕೋವಿಡ್ ಬೂಸ್ಟರ್ ಡೋಸ್ ಲಸಿಕೆಗೆ ಚಾಲನೆ ಎಲ್ಲರೂ ಕೋವಿಡ್ ನಿಯಮ ಪಾಲಿಸಿ: ಜ್ಯೋತಿಗಣೇಶ್ 

ಕೋವಿಡ್ ಬೂಸ್ಟರ್ ಡೋಸ್ ಲಸಿಕೆಗೆ ಚಾಲನೆ ಎಲ್ಲರೂ ಕೋವಿಡ್ ನಿಯಮ ಪಾಲಿಸಿ: ಜ್ಯೋತಿಗಣೇಶ್ 

ಕೋವಿಡ್ ಬೂಸ್ಟರ್ ಡೋಸ್ ಲಸಿಕೆಗೆ ಚಾಲನೆ ಎಲ್ಲರೂ ಕೋವಿಡ್ ನಿಯಮ ಪಾಲಿಸಿ: ಜ್ಯೋತಿಗಣೇಶ್ 

 

ಕೋವಿಡ್ ಬೂಸ್ಟರ್ ಡೋಸ್ ಲಸಿಕೆಗೆ ಚಾಲನೆ
ಎಲ್ಲರೂ ಕೋವಿಡ್ ನಿಯಮ ಪಾಲಿಸಿ: ಜ್ಯೋತಿಗಣೇಶ್ 


ತುಮಕೂರು: ಕೋವಿಡ್ ಮೂರನೇ ಅಲೆ ಹೆಚ್ಚಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊರೋನಾ ವಾರಿರ‍್ಸ್ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ರಮಕ್ಕೆ ನಗರ ಶಾಸಕ ಜ್ಯೋತಿಗಣೇಶ್ ಸೋಮವಾರ ಚಾಲನೆ ನೀಡಿದರು.


ನಗರದ ಜಿಲ್ಲಾಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎರಡನೇ ಲಸಿಕೆ ಪಡೆದು ಒಂಭತ್ತು ತಿಂಗಳು ಕಳೆದವರು ಭಯಭೀತಿಗೆ ಒಳಗಾಗದೇ ಬೂಸ್ಟರ್ ಡೋಸ್ ಪಡೆದುಕೊಳ್ಳಬೇಕು, ಕೋವಿಡ್ ತಡೆಯಲು ಸಹಕಾರದೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.


ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ನಿಯಮಾವಳಿಗಳನ್ನು ರಾಜಕಾರಣಿಗಳಾದಿಯಾಗಿ ಎಲ್ಲರು ಪಾಲಿಸಬೇಕು, ಕೋವಿಡ್ ನಿಯಮಗಳನ್ನು ಪಾಲಿಸದೇ ಕೋವಿಡ್ ಹೆಚ್ಚಳಕ್ಕೆ ನಾವೇ ಕಾರಣಕರ್ತರಾಗುತ್ತಿರುವುದು ಸರಿಯಲ್ಲ, ಈ ನಿಟ್ಟಿನಲ್ಲಿ ಎಲ್ಲರೂ ಕೋವಿಡ್ ಲಸಿಕೆ ಪಡೆದುಕೊಳ್ಳುವಂತೆ ಮನವಿ ಮಾಡಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಅವರು, ಮುಂಚೂಣಿ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರದ ಸೂಚನೆಯಂತೆ ಬೂಸ್ಟರ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಇಂದು 26 ಸಾವಿರ ಮಂದಿಗೆ ಲಸಿಕೆ ವಿತರಿಸಲು ಅವಕಾಶವಿದ್ದು, ಅರ್ಹರು ಲಸಿಕೆಯನ್ನು ಪಡೆದುಕೊಳ್ಳಬಹುದಾಗಿದೆ ಎಂದರು.


ಎರಡನೇ ಲಸಿಕೆ ಪಡೆದು 9 ತಿಂಗಳಾಗಿದ್ದವರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಪಡೆಯಲು ಅರ್ಹರಿದ್ದು, ಯಾವುದೇ ಭೀತಿ ಇಲ್ಲದೇ ಸಾವಕಾಶವಾಗಿ ಲಸಿಕೆಯನ್ನು ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಪಡೆಯಬಹುದಾಗಿದೆ ಎಂದು ತಿಳಿಸಿದರು.


ಕೇಂದ್ರ ಸರ್ಕಾರದ ಸೂಚನೆಯಂತೆ 15 ವರ್ಷ ಮೇಲ್ಪಟ್ಟ 18 ವರ್ಷದೊಳಗಿನ ಮಕ್ಕಳಿಗೆ ಶಾಲೆಗಳಲ್ಲಿ ಹಾಗೂ ಶಾಲೆಯನ್ನು ತೊರೆದವರನ್ನು ಸಮುದಾಯದಲ್ಲಿ ಗುರುತಿಸಿ ಲಸಿಕೆ ನೀಡುವ ಕಾರ್ಯವನ್ನು ಆರೋಗ್ಯ ಇಲಾಖೆ ಕೈಗೊಂಡಿರುವುದಾಗಿ ಮಾಹಿತಿ ನೀಡಿದರು.


ಜಿಲ್ಲಾ ಶಸ್ತçಚಿಕಿತ್ಸಕ ಡಾ. ವೀರಭದ್ರಯ್ಯ, ಆರ್‌ಎಂಒ ಡಾ.ವೀಣಾ, ಡಾ. ಸನತ್‌ಕುಮಾರ್ ಮೂರನೇ ಡೋಸ್ ಪಡೆಯುವ ಮೂಲಕ ಚಾಲನೆ ನೀಡಿದರು.


ಡಾ. ರಜನಿ, ಡಾ. ಕೇಶವರಾಜ್, ಡಾ. ಮುಕ್ತಾಂಭ, ಡಾ. ತೀರ್ಥನಾಥ್, ಡಾ. ದಿನೇಶ್, ಡಾ. ವೀಣಾ ಬಿ. ಗೌಡ, ಡಾ. ಮೋಹನ್‌ದಾಸ್ ಇದ್ದರು.