``ರಾಜ್ಯೋತ್ಸವ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳಿರಲಿ’’ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಾಟೀಲ ಸೂಚನೆ

``ರಾಜ್ಯೋತ್ಸವ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳಿರಲಿ’’ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಾಟೀಲ ಸೂಚನೆ

``ರಾಜ್ಯೋತ್ಸವ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳಿರಲಿ’’
ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಾಟೀಲ ಸೂಚನೆ


ತುಮಕೂರು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ ೧ರಂದು ಜರುಗಲಿರುವ ಕನ್ನಡ ತಾಯಿ ಭುವನೇಶ್ವರಿ ದೇವಿ ಮೆರವಣಿಗೆಯಲ್ಲಿ ಕೃಷಿ, ತೋಟಗಾರಿಕೆ, ಜಿಲ್ಲಾ ಪಂಚಾಯತ್, ಪ್ರಾದೇಶಿಕ ಸಾರಿಗೆ ಕಛೇರಿ, ಕೆ.ಎಸ್.ಆರ್.ಟಿ.ಸಿ., ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸ್ತಬ್ಧ ಚಿತ್ರಗಳನ್ನು ಸಿದ್ಧಪಡಿಸಿ ಪ್ರದರ್ಶಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. 
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶುಕ್ರವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ವರ್ಷದಂತೆ ಕೋವಿಡ್ ನಿಯಮಗಳನ್ನು ಅನುಸರಿಸುವ ಮೂಲಕ ನಾಡಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. 
ಪ್ರತಿ ವರ್ಷದಂತೆ ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥ ವಾಹನದಲ್ಲಿರಿಸಿ ಸಾಂಸ್ಕೃತಿಕ ಕಲಾ ತಂಡಗಳು ಹಾಗೂ ಸ್ತಬ್ಧ ಚಿತ್ರಗಳೊಂದಿಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂಭಾಗದಿAದ ಬೆಳಗ್ಗೆ ೮ ಗಂಟೆಗೆ ಮೆರವಣಿಗೆ ಪ್ರಾರಂಭಿಸಿ ನಗರದ ಅಶೋಕ ರಸ್ತೆ, ಟೌನ್ ಹಾಲ್ ವೃತ್ತ, ಬಿ.ಹೆಚ್. ರಸ್ತೆ, ಭದ್ರಮ್ಮ ವೃತ್ತದ ಮೂಲಕ ಅಂತಿಮವಾಗಿ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ಸೇರಬೇಕೆಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.  
ರಾಜ್ಯೋತ್ಸವ ದಿನದಂದು ಬೆಳಗ್ಗೆ ೯ ಗಂಟೆಗೆ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಮತ್ತು ಗೌರವ ರಕ್ಷೆ ಸ್ವೀಕಾರ ಹಾಗೂ ಕನ್ನಡ ರಾಜ್ಯೋತ್ಸವದ ಸಂದೇಶ ನೀಡುವ ಕಾರ್ಯಕ್ರಮ ನಡೆಯಲಿದ್ದು, ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು.
ರಾಜ್ಯೋತ್ಸದ ಹಿನ್ನೆಲೆಯಲ್ಲಿ ಅಕ್ಟೋಬರ್ ೩೧ ಮತ್ತು ನವೆಂಬರ್ ೧ರಂದು ಎರಡು ದಿನಗಳ ಕಾಲ ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಹೂವಿನಿಂದ ಅಲಂಕರಿಸಿದ ಕಮಾನು ಮತ್ತು ಟೌನ್ ಹಾಲ್ ವೃತ್ತ, ಶ್ರೀ ಶಿವಕುಮಾರ ಸ್ವಾಮಿ ವೃತ್ತ, ಭದ್ರಮ್ಮ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ವೃತ್ತ ಮತ್ತು ಹೊರಪೇಟೆ ವೃತ್ತ ಸೇರಿದಂತೆ ನಗರದ ಪ್ರಮುಖ ವೃತ್ತ ಹಾಗೂ ಎಲ್ಲಾ ಸರ್ಕಾರಿ ಕಛೇರಿಗಳ ಕಟ್ಟಡಕ್ಕೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 
ರಾಜ್ಯೋತ್ಸವದಂದು ಕಾಲೇಜು ಮೈದಾನದಲ್ಲಿ ಆ್ಯಂಬುಲೆನ್ಸ್ ವಾಹನ, ಸ್ಯಾನಿಟೈಸರ್, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಜೊತೆಗೆ ಕೋವಿಡ್-೧೯ ನಿಯಮ ಉಲ್ಲಂಘನೆಯಾಗದAತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ  ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಕನ್ನಡಪರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.