ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಚಿವಾಲಯ ನೌಕರರ ಮೌನ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಚಿವಾಲಯ ನೌಕರರ ಮೌನ ಪ್ರತಿಭಟನೆ, karnataka-government-secretariat-protest
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ
ಸಚಿವಾಲಯ ನೌಕರರ ಮೌನ ಪ್ರತಿಭಟನೆ
ಬೆಂಗಳೂರು: ಸಚಿವಾಲಯದಲ್ಲಿ ಹೊರಗುತ್ತಿಗೆ ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸರ್ಕಾರದ ಸಚಿವಾಲಯ ನೌಕರರರು ವಿಧಾನಸೌಧ ಮತ್ತು ವಿಕಾಸಸೌಧದ ಮಧ್ಯೆ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂಭಾಗ ಕಪ್ಪು ಮಾಸ್ಕ್ ಧರಿಸಿ ಮೌನ ಪ್ರತಿಭಟನೆ ನಡೆಸಿದರು.
ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಚಿವಾಲಯದ ಶಾಖಾಧಿಕಾರಿಗಳಿಗೆ ತಹಶೀಲ್ದಾರ್ ಹುದ್ದೆಗೆ ನಿಯೋಜನೆ ಮೇರೆಗೆ ಹೋಗಲು ಅವಕಾಶ ನೀಡಬೇಕು. ಹೊರಗುತ್ತಿಗೆ ಸೇವೆಯನ್ನು ರದ್ದುಪಡಿಸಿ, ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ ಮಾಡಬೇಕು ಎಂದು ನೌಕರರು ಆಗ್ರಹಿಸಿದರು.
ನಿವೃತ್ತಿ ಅಧಿಕಾರಿ, ನೌಕರರನ್ನು ಪುನರ್ ನೇಮಕ ಮಾಡಬಾರದು. ಅವಧಿ ಮೀರಿರುವ ನಿಯೋಜನೆಯಲ್ಲಿರುವ ಅಧಿಕಾರಿಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಲಾಯಿತು.