32 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಮತ್ತು ಕೆ.ಸಿ.ವ್ಯಾಲಿ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮ
kc valley 32 lakes
32 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಮತ್ತು ಕೆ.ಸಿ.ವ್ಯಾಲಿ
ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮ
ಕೋಲಾರ : ಜಿಲ್ಲಾಡಳಿತ ಹಾಗೂ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು, ಅಕ್ಟೋಬರ್ 09 ರಂದು ಬೆಳಿಗ್ಗೆ 11.00 ಗಂಟೆಗೆ ಮುಳಬಾಗಿಲು ತಾಲ್ಲೂಕಿನ ಜಮ್ಮನಹಳ್ಳಿ, ರಾಷ್ಟಿçÃಯ ಹೆದ್ದಾರಿ-75 ಪಕ್ಕದಲ್ಲಿ, ಹೋಟೆಲ್ ಶ್ರೀ ಬಾಲಾಜಿ ಭವನ ಹತ್ತಿರ. ಕೋಲಾರ ಜಿಲ್ಲೆ, ಮುಳಬಾಗಿಲು ತಾಲ್ಲೂಕಿನ, ಹೊಳಲಿ ಕೆರೆ ಪಂಪ್‌ಹೌಸ್‌ನಿAದ ನೀರನ್ನು ಎತ್ತುವಳಿ ಮಾಡಿ 32 ಕೆರೆಗಳನ್ನು ತುಂಬಿಸುವ ಕಾಮಗಾರಿ ಮತ್ತು ಕೆ.ಸಿ.ವ್ಯಾಲಿ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಧುಸ್ವಾಮಿ ಅವರು ನೆರವೇರಿಸುವರು. ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರ ಘನ ಉಪಸ್ಥಿತಿಯಲ್ಲಿ, ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಹೆಚ್.ನಾಗೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ, ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಆರ್.ರಮೇಶ್ ಕುಮಾರ್, ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಶ್ರೀನಿವಾಸಗೌಡ, ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್.ನಾರಾಯಣಸ್ವಾಮಿ. ಕೆ.ಎಂ, ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ, ಕೆ.ಜಿ.ಎಫ್ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಕಲಾ ಎಂ ಶಶಿಧರ್, ವಿಧಾನ ಪರಿಷತ್ ಶಾಸಕ ನಸೀರ್ ಅಹಮದ್, ಡಾ|| ವೈ.ಎ.ನಾರಾಯಣಸ್ವಾಮಿ, ಇಂಚರ ಗೋವಿಂದರಾಜು, ಡಾ||ಸಿ.ಆರ್.ಮನೋಹರ್, ಚಿದಾನಂದ್.ಎಂ.ಗೌಡ ಹಾಗೂ ದೇವರಾಯಸಮುದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ.ಎಂ.ಬಾಲಕೃಷ್ಣ ಅವರು ಭಾಗವಹಿಸುವರು.