ಪೊಲೀಸರ ಸೇವೆ ಶ್ಲಾಘನೀಯ: ನ್ಯಾ ಮಹೇಶ್ ಪಾಟೀಲ್

ಪೊಲೀಸರ ಸೇವೆ ಶ್ಲಾಘನೀಯ: ನ್ಯಾ ಮಹೇಶ್ ಪಾಟೀಲ್


ಪೊಲೀಸರ ಸೇವೆ ಶ್ಲಾಘನೀಯ: ನ್ಯಾ ಮಹೇಶ್ ಪಾಟೀಲ್

ಕೆಜಿಎಫ್: ರಾಷ್ಟçದಾದ್ಯಂತ ಸಾರ್ವಜನಿಕರ ನೆಮ್ಮದಿಗೆ ಧಕ್ಕೆಯಾಗದಂತೆ ಹಗಲಿರುಳು ದುಡಿಯುವ ಪೊಲೀಸರ ಸೇವೆಯು ಶ್ಲಾಘನೀಯವೆಂದು ಕೆಜಿಎಫ್ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹೇಶ್ ಎಸ್ ಪಾಟೀಲ್ ಅವರು ನುಡಿದರು. 
ಅವರು ಕೆಜಿಎಫ್ ಪೊಲೀಸ್ ಜಿಲ್ಲೆಯ ರಾಬರ್ಟ್ಸನ್‌ಪೇಟೆ ಪೊಲೀಸ್ ವೃತ್ತದಲ್ಲಿ ಗುರುವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಹುತಾತ್ಮರ ಸ್ಮಾರಕಕ್ಕೆ ಗೌರವ ವಂದನೆ ಸಲ್ಲಿಸಿ ಮಾತನಾಡಿದರು.
ಸಮಾಜದಲ್ಲಿ ಶಾಂತಿ, ಸೌಹಾರ್ದತೆ, ಮತ್ತು ನಾಗರೀಕರ ಸುರಕ್ಷತೆಗಾಗಿ ಹಗಲಿರುಳು, ತಮ್ಮ ಪ್ರಾಣವನ್ನು ಲೆಕ್ಕಿಸದೇ ದುಡಿಯುತ್ತಿರುವ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡುವ ವೇಳೆಯಲ್ಲಿ ಹುತಾತ್ಮರಾದದ್ದನ್ನು ಸ್ಮರಿಸಿ ವರ್ಷಕ್ಕೊಮ್ಮೆ ಹುತಾತ್ಮರ ದಿನವನ್ನು ಆಚರಿಸಿ, ಗೌರವ ಸಲ್ಲಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯವೆAದರು.  ಹುತಾತ್ಮರಾದ ಪೊಲೀಸರ ಕುಟುಂಬಗಳ ಕಲ್ಯಾಣಕ್ಕೆ ಸರ್ಕಾರವು ಸೂಕ್ತವಾದ ಯೋಜನೆಯನ್ನು ಜಾರಿಗೆ ತರಬೇಕೆಂದು ನ್ಯಾಯಾಧೀಶರಾದ ಮಹೇಶ್ ಎಸ್ ಪಾಟೀಲ್ ಅವರು ಕೋರಿದರು. 
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ರಾಷ್ಟçದಾದ್ಯಂತ 377 ಮಂದಿ ಈ ಪೈಕಿ ರಾಜ್ಯದ 16 ಮಂದಿ ಪೊಲೀಸರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಕಾನೂನು ಪಾಲನೆಯ ಪೊಲೀಸರ ಕರ್ತವ್ಯ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆಯೆಂದರು. ದೇಶಾದ್ಯಂತ ಹುತಾತ್ಮರಾದ ಪೊಲೀಸರ ಪಟ್ಟಿಯನ್ನು ಎಸ್ಪಿ ಇಲಕ್ಕಿಯಾ ಕರುಣಾಕರನ್ ವಾಚಿಸಿದರು. 
ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂಧಿಗಳು, ಪತ್ರಕರ್ತರು, ವಕೀಲರು, ಹಲವಾರು ಸಂಘ ಸಂಸ್ಥೆಗಳವರು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದರು. ಡಿ.ಎ.ಆರ್.ನ ಆರ್.ಪಿ.ಐ. ವಿ.ಸೋಮಶೇಖರ್ ಅವರ ನೇತೃತ್ವದಲ್ಲಿ ಆಕರ್ಷಕ ಕವಾಯಿತು ನಡೆಯಿತು. 
ಡಿವೈಎಸ್ಪಿ ಮುರಳೀಧರ, ಜಿಲ್ಲಾ ಪೊಲೀಸ್ ಕಛೇರಿಯ ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ, ನಗರಸಭಾಧ್ಯಕ್ಷ ವಳ್ಳಲ್ ಮುನಿಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ರಾಜಗೋಪಾಲಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ರವಿರೆಡ್ಡಿ, ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು. ಭೀಮಸೇನಾಕಾಂಬ್ಳೇ, ಸದಾಶಿವ ಮನಗುಳಿ ಅವರುಗಳು ಕಾರ್ಯಕ್ರಮವನ್ನು ನಿರೂಪಿಸಿದರು. 
• ಚಿತ್ರ 21 ಕೆಜಿಎಫ್ 01 : ಪೊಲೀಸ್ ಹುತಾತ್ಮ ದಿನಾಚರಣೆಯಲ್ಲಿ ನ್ಯಾಯಾಧೀಶ ಮಹೇಶ್ ಎಸ್ ಪಾಟೀಲ್, ಎಸ್ಪಿ ಇಲಕ್ಕಿಯಾ ಕರುಣಾಕರನ್, ಡಿವೈಎಸ್ಪಿ ಮುರಳೀಧರ ಇತರರು