ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ-ಜಿಲ್ಲಾಧಿಕಾರಿ ಡಾ.ಸೆಲ್ವಮಣಿ

ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ
ಮುಂದುವರೆಯಲಿದೆ-ಜಿಲ್ಲಾಧಿಕಾರಿ ಡಾ.ಸೆಲ್ವಮಣಿ
ಕೋಲಾರ: ನಗರದಲ್ಲಿ ಪಾದಚಾರಿಗಳ ಅನುಕೂಲಕ್ಕಾಗಿ ನಗರದಲ್ಲಿ ನಿರ್ಮಿಸಿರುವ ಫುಟ್‌ಪಾತ್‌ಗಳನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಿ ಜಿಲ್ಲಾ ಕೇಂದ್ರವಾದ ಕೋಲಾರ ನಗರದ ಅಭಿವೃದ್ದಿಗೆ ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಮಾನ ಮನಸ್ಕರರ ವೇದಿಕೆಯಿಂದ ಸೋಮವಾರ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಲಾಯಿತು.
ನಿಯೋಗದ ನೇತೃತ್ವ ವಹಿಸಿದ್ದ ಕೋಲಾರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಓಂಶಕ್ತಿ ಚಲಪತಿ ಅವರು ಮಾತನಾಡಿ, ಬಡವರಿಗೆ ತೊಂದರೆ ನೀಡುವುದು ವೇದಿಕೆಯ ಉದ್ದೇಶವಲ್ಲ, ಪಾದಚಾರಿಗಳಿಗಾಗಿ ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ ಫುಟ್ ಪಾತ್ ಒತ್ತುವರಿ ತೆರವು ಮಾಡಿಸಬೇಕೆಂದು ಒತ್ತಾಯಿಸಿದರು.
ನಗರಸಭೆ, ಲೋಕೋಪಯೋಗಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಡ ವ್ಯಾಪಾರಿಗಳಿಗೆ ಫುಟ್ ಪಾತ್ ಹೊರತುಪಡಿಸಿ ಸೂಕ್ತವಾದ ಜಾಗದಲ್ಲಿ ವ್ಯಾಪಾರ ಮಾಡಲು ಜಾಗ ಗುರುತಿಸುವಂತೆ ಮನ್ವಂತರ ಪ್ರಕಾಶನದ ಹಿರಿಯ ಸಂಘಟನಾ ಕಾರ್ಯದರ್ಶಿ ಎಸ್.ಮಂಜುನಾಥ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು ತಿಳಿಸಿದರೆ, ಹಳೆ ಬಸ್ ನಿಲ್ದಾಣದಲ್ಲಿ ತಳ್ಳುವ ಗಾಡಿಗಳನ್ನು ನಿಲ್ಲಿಸಿಕೊಂಡು ವ್ಯಾಪಾರ ಮಾಡಲು ಅವಕಾಶ ಕಲ್ಪಿಸುವಂತೆ ಹಾಗೂ ಹೊಸ ಬಸ್ ನಿಲ್ದಾಣ ಹಿಂಭಾಗ ಇರುವ ಸರ್ವೆ ನಂ.೮೧ರ ನಿವೇಶನ ಹಾಗೂ ಎಂ.ಬಿ.ರಸ್ತೆಗೆ ಹೊಂದಿಕೊAಡಿರುವ ಸಂತೆ ಮೈದಾನದಲ್ಲಿ ಬೆಳಿಗ್ಗೆ ೬ರಿಂದ ೧೧ ಗಂಟೆವರೆಗೆ ತರಕಾರಿ ವ್ಯಾಪಾರ ನಡೆದು ನಂತರ ಖಾಲಿಯಾಗುವ ಜಾಗದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳಾವಕಾಶ ಮಾಡಿಕೊಡುವಂತೆ ಕನ್ನಡ ರಕ್ಷಣಾ ವೇದಿಕೆಯ ಜಿಲ್ಲಾದ್ಯಕ್ಷ ಮೇಡಿಹಾಳ ರಾಘವೇಂದ್ರ, ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ತ್ಯಾಗರಾಜ್ ಕೋರಿದರು.
ನಗರದಲ್ಲಿ ರಸ್ತೆಗಳು ಹಾಳಾಗಿರುವುದರಿಂದ ಸಂಬAಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಆದೇಶ ನೀಡಿ ಶೀಘ್ರ ದುರಸ್ತಿ ಕಾರ್ಯ ಮುಗಿಸುವಂತೆ ಸೂಚಿಸಬೇಕೆಂದು ಸಮಾನ ಮನಸ್ಕರರ ವೇದಿಕೆಯ ಹಿರಿಯ ಮುಖಂಡರಾದ ಹೊಳಲಿ ಪ್ರಕಾಶ್ ಆಗ್ರಹಿಸಿದರು. ರೈತ ಸಂಘದ ಮುಖಂಡರಾದ ರಾಮು ಶಿವಣ್ಣ, ಬಿಜೆಪಿ ನಾಮಾಲ ಮಂಜು, ನೀರಾವರಿ ಹೋರಾಟ ಸಮಿತಿಯ ಚಿನ್ನಿ ಶ್ರೀನಿವಾಸ್, ಸುದೀರ್, ಕನ್ನಡ ಪಕ್ಷದ ಹಿರಿಯ ಮುಖಂಡ ಅ.ಕೃ.ಸೋಮಶೇಖರ್, ರೆಡ್ ಕ್ರಾಸ್ ಸಂಸ್ಥೆಯ ವೆಂಕಟಕೃಷ್ಣ, ಕುರುಬ ಸಮಾಜದ ಮುಖಂಡ ಮುನಿರಾಜು ಇನ್ನಿತರರು ಕೋಲಾದಲ್ಲಿ ಹೆಚ್ಚುತ್ತಿರುವ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ತಿಳಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಫುಟ್‌ಪಾತ್ ತೆರವು ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ, ಪ್ರತಿವಾರ ಕಾರ್ಯಾಚರಣೆಯ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವೆ, ಜನ ಮತ್ತು ಸ್ಥಳೀಯ ಮುಖಂಡರು ಬೀದಿ ಬದಿ ವ್ಯಾಪಾರಿಗಳ ಪರ ಒತ್ತಡ ಹೇರದೆ ಕಾನೂನು ಪಾಲನೆಗೆ ಸಹಕರಿಸಬೇಕೆಂದರು. ರಸ್ತೆಗಳನ್ನು ಕಾಲಮಿತಿಯಲ್ಲಿ ಅಭಿವೃದ್ದಿಪಡಿಸುವುದಕ್ಕೆ ಗುತ್ತಿಗೆದಾರರು ಸಹಕರಿಸುತ್ತಿಲ್ಲ, ಕಸ ವಿಲೇವಾರಿಗೆ ನಗರಸಭೆಗೆ ಕೆಂದಟ್ಟಿ ಬಳಿ ೧೦ ಎಕರೆ ಭೂಮಿ ನೀಡಲಾಗಿದೆ, ವೈಜ್ಞಾನಿಕವಾಗಿ ಕಸ ವಿಲೇವಾರಿ
ಆದಲ್ಲಿ ಮಾತ್ರ ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.