ವಿಧಾನ ಪರಿಷತ್ :ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಾಂಗ್ರೆಸ್‌ನ ಎಂ.ಎಲ್.ಅನಿಲ್‌ಕುಮಾರ್ ಗೆ ಗೆಲುವು
kolar-chikkaballapur-mlc-congress-anilkumar-won

ವಿಧಾನ ಪರಿಷತ್ :ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರದಿಂದ
ಕಾಂಗ್ರೆಸ್‌ನ ಎಂ.ಎಲ್.ಅನಿಲ್‌ಕುಮಾರ್ ಗೆ ಗೆಲುವು
ಕೋಲಾರ: ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಎಲ್.ಅನಿಲ್‌ಕುಮಾರ್ 441 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಅನಿಲ್‌ಕುಮಾರ್ 2,340 ಮತಗಳನ್ನು ಪಡೆದರೆ ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಡಾ.ಕೆ.ಎನ್.ವೇಣುಗೋಪಾಲ್ 1,899 ಮತ ಗಳಿಸಿದರು. ಜೆಡಿಎಸ್ ಅಭ್ಯರ್ಥಿ ವಿ.ಇ.ರಾಮಚಂದ್ರ 1,438 ಮತ ಪಡೆದರು. ಪಕ್ಷೇತರ ಅಭ್ಯರ್ಥಿ ಎಂ.ಪಿ.ಅನಿಲ್‌ಕುಮಾರ್ 10 ಮತ ಗಳಿಸಿ ಠೇವಣಿ ಕಳೆದುಕೊಂಡರು.
ಅವಳಿ ಜಿಲ್ಲೆಯ ಒಟ್ಟು 5,600 ಮತದಾರರ ಪೈಕಿ 5,587 ಮಂದಿ ಮತ ಚಲಾಯಿಸಿದ್ದರು. ಈ ಪೈಕಿ 5,410 ಮತಗಳು ಸಿಂಧುವಾದವು. 177 ಮತಗಳು ತಿರಸ್ಕೃತಗೊಂಡವು. ಜಿಲ್ಲಾ ಕೇಂದ್ರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆಯಿತು .