ಪ್ರಾಥಮಿಕ ಶಿಕ್ಷಕರ ಕಡ್ಡಾಯ, ಹೆಚ್ಚುವರಿ ವರ್ಗಾವಣೆ ಪ್ರಕ್ರಿಯೆ ಸುಗಮ ಕೌನ್ಸಿಲಿಂಗ್‌ನಲ್ಲಿ 21 ಮಂದಿ ಸ್ಥಳ ಆಯ್ಕೆ- ಡಿಡಿಪಿಐ ಎಸ್.ಜಿ.ನಾಗೇಶ್

ಪ್ರಾಥಮಿಕ ಶಿಕ್ಷಕರ ಕಡ್ಡಾಯ, ಹೆಚ್ಚುವರಿ ವರ್ಗಾವಣೆ ಪ್ರಕ್ರಿಯೆ ಸುಗಮ ಕೌನ್ಸಿಲಿಂಗ್‌ನಲ್ಲಿ 21 ಮಂದಿ ಸ್ಥಳ ಆಯ್ಕೆ- ಡಿಡಿಪಿಐ ಎಸ್.ಜಿ.ನಾಗೇಶ್

ಪ್ರಾಥಮಿಕ ಶಿಕ್ಷಕರ ಕಡ್ಡಾಯ, ಹೆಚ್ಚುವರಿ ವರ್ಗಾವಣೆ ಪ್ರಕ್ರಿಯೆ ಸುಗಮ
ಕೌನ್ಸಿಲಿಂಗ್‌ನಲ್ಲಿ 21 ಮಂದಿ ಸ್ಥಳ ಆಯ್ಕೆ- ಡಿಡಿಪಿಐ ಎಸ್.ಜಿ.ನಾಗೇಶ್

ಕೋಲಾರ: ಪ್ರಾಥಮಿಕ ಶಾಲಾ ಶಿಕ್ಷಕರ ಕಡ್ಡಾಯ ಮತ್ತು ಹೆಚ್ಚುವರಿ ಹುದ್ದೆಗಳ ವರ್ಗಾವಣೆ ಪ್ರಕ್ರಿಯೆ ಯಾವುದೇ ಗೊಂದಲಗಳಿಲ್ಲದೇ ಮಂಗಳವಾರ ನಡೆದಿದ್ದು, 21 ಮಂದಿ ಸ್ಥಳ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಡಿಡಿಪಿಐ ಎಸ್.ಜಿ.ನಾಗೇಶ್ ತಿಳಿಸಿದರು.
ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ನಡೆದ ಕಡ್ಡಾಯ ಮತ್ತು ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ ಸ್ಥಳ ಆಯ್ಕೆ ಮಾಡಿಕೊಂಡ ಶಿಕ್ಷಕರಿಗೆ ಆದೇಶಪತ್ರ ವಿತರಿಸಿ ಅವರು ಮಾತನಾಡುತ್ತಿದ್ದರು.
ಇಂದಿನ ಕೌನ್ಸಿಲಿಂಗ್‌ನಲ್ಲಿ 33 ಶಿಕ್ಷಕರು ಭಾಗವಹಿಸಿದ್ದು, 21 ಮಂದಿ ಸ್ಥಳ ಆಯ್ಕೆ ಮಾಡಿಕೊಂಡರೆ ಉಳಿದ 11 ಮಂದಿ ಸ್ಥಳ ಆಯ್ಕೆಗೆ ನಿರಾಕರಿಸಿದರು ಮತ್ತು ಒಬ್ಬ ಶಿಕ್ಷಕರು ಕೌನ್ಸಿಲಿಂಗ್‌ಗೆ ಗೈರಾಗಿದ್ದಾರೆ ಎಂದು ಮಾಹಿತಿ ಮೀಡಿದ್ದಾರೆ. 
ವಿವಿಧ ಕಾರಣಗಳಿಂದ ನೆನೆಗುದಿಗೆ ಬಿದ್ದಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಇದೀಗ ಚಾಲನೆ ಸಿಕ್ಕಿದ್ದು, ಮೊದಲ ಹಂತವಾಗಿ ಕಡ್ಡಾಯ,ಹೆಚ್ಚುವರಿ ವರ್ಗಾವಣೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರದ ಸುತ್ತೋಲೆಯಂತೆ ಈಗಾಗಲೇ ಅ.25 ರಿಂದ 1-5ನೇ ತರಗತಿಗಳು ಆರಂಭಗೊAಡಿದ್ದು, ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ, ಪೋಷಕರು ಸ್ಪಂದಿಸಿದ್ದು, ಮಕ್ಕಳನ್ನು ಶಾಲೆಗೆ ಒಪ್ಪಿಗೆ ಪತ್ರದೊಂದಿಗೆ ಕಳುಹಿಸುತ್ತಿದ್ದಾರೆ ಎಂದು ತಿಳಿಸಿದರು.
ಮಕ್ಕಳ ಹಾಜರಾತಿ ಎರಡನೇ ದಿನವೂ ಜಿಲ್ಲೆಯಲ್ಲಿ ಶೇ.80ಕ್ಕಿಂತ ಹೆಚ್ಚಿದ್ದು, ಕೋವಿಡ್ ಹೆಮ್ಮಾರಿಯ ಆತಂಕ ದೂರವಾಗಿರುವುದು ಇದಕ್ಕೆ ನಿದರ್ಶನವಾಗಿದೆ ಎಂದ ಅವರು, ಪೋಷಕರ ಸ್ಪಂದನೆಯಿAದ ಶಾಲೆಗಳಲ್ಲಿ ಕಲಿಕೆಗೆ ಹೆಚ್ಚಿನ ಪ್ರೇರಣೆ ಸಿಕ್ಕಿದೆ ಎಂದು ತಿಳಿಸಿದರು.
ಶಾಲೆಗಳಲ್ಲಿ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸುವ ಮೂಲಕ ಮಕ್ಕಳ ಸುರಕ್ಷತೆಗೆ ಒತ್ತು ನೀಡಲು ಸೂಚಿಸಲಾಗಿದೆ, ಈ ಕುರಿತು ಮಕ್ಕಳಿಗೆ ಮೊದಲ ದಿನವೇ ಮಾರ್ಗದರ್ಶನ ನೀಡಲಾಗಿದೆ ಮತ್ತು ಪೋಷಕರು ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ ಕುರಿತು ದೃಢಪಡಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಲು ವರ್ಗಾವಣೆ ಪ್ರಕ್ರಿಯೆ ಸಹಕಾರಿಯಾಗಲಿದ್ದು, ಸ್ಥಳ ಆಯ್ಕೆಗೊಂಡ ಶಿಕ್ಷಕರಿಗೆ ಸ್ಥಳದಲ್ಲೇ ಆದೇಶ ಪತ್ರ ನೀಡಲಾಗಿದ್ದು, ಶೀಘ್ರ ಶಾಲೆಗಳಲ್ಲಿವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಶಿಕ್ಷಣಾಧಿಕಾರಿಗಳಾದ ಎ.ಎನ್.ನಾಗೇಂದ್ರಪ್ರಸಾದ್, ಸಿ.ಆರ್.ಅಶೋಕ್, ಬಿಇಒಗಳಾದ ರಾಮಕೃಷ್ಣಪ್ಪ, ಕೃಷ್ಣಮೂರ್ತಿ, ಉಮಾದೇವಿ, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಮಂಜುನಾಥ್,ವಿಷಯ ಪರಿವೀಕ್ಷಕರಾದ ಗಾಯತ್ರಿ, ಶಶಿವಧನ, ಕೃಷ್ಣಪ್ಪ, ಬಿ.ವೆಂಕಟೇಶಪ್ಪ, ಸಿರಾಜುದ್ದೀನ್, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಪ್ಪಯ್ಯಗೌಡ, ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್, ತಾಲ್ಲೂಕು ಅಧ್ಯಕ್ಷ ಅಶ್ವಥ್ಥನಾರಾಯಣ, ಕಾರ್ಯದರ್ಶಿ ಎಸ್.ನಾರಾಯಣಸ್ವಾಮಿ ಸೇರಿದಂತೆ ವಿವಿಧ ತಾಲ್ಲೂಕುಗಳ ಪದಾಧಿಕಾರಿಗಳು ಹಾಜರಿದ್ದರು.-____________________