ಕೆ.ಆರ್‌ಎಸ್.ಗೆ ಬಾಗಿನ

ಕೆ.ಆರ್‌ಎಸ್.ಗೆ ಬಾಗಿನ

ಕೆ.ಆರ್ೆಸ್.ಗೆ ಬಾಗಿನ

ಮೈಸೂರು ಜಿಲ್ಲೆ ಕಬಿನಿ ಜಲಾಶಯ ಭರ್ತಿಯಾಗಿರುವುದು ಸಂತಸ ತಂದಿದೆ. ಇದರಿಂದ ನಾಡಿನ ರೈತರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ನವೆಂಬರ್ ತಿಂಗಳಲ್ಲಿ ಬಾಗಿನ ಅರ್ಪಿಸುವುದು ವಿಶೇಷ. ಅಂತಾರಾಜ್ಯ ನೀರಿನ ವಿಚಾರ ಇದೆ. ನೀರು ತುಂಬಿರುವುದರಿAದ ತಮಿಳುನಾಡಿಗೂ ನೀರು ಕೊಡಬಹುದು, ನಾಲೆಗಳಿಗೂ ನೀರು ಹರಿಸಬಹುದು ಎಂದರು.

ಕಳೆದ ವರ್ಷ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ನಾನು ಕಬಿನಿ ಜಲಾಶಯಕ್ಕೆ ಬಾಗಿನ ಸಲ್ಲಿಸಲು ಬಂದಿದ್ದೆ. ನಾನು ಮುಖ್ಯಮಂತ್ರಿಯಾದ ನಂತರ ಅಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದೀನಿ. ಈಗ ಕಾವೇರಿ ಜಲಾನಯನ ಪ್ರದೇಶದ ಎರಡು ಜಲಾಶಯಗಳಿಗೆ ಬಾಗಿನ ಸಲ್ಲಿಸುತ್ತಿದ್ದೇನೆ ಎಂದರು.

ಕಬಿನಿ ಜಲಾಶಯದ ಕೆಳಭಾಗದಲ್ಲಿ ಬೃಂದಾವನ ಗಾರ್ಡನ್ ಮಾದರಿಯಲ್ಲಿ ಉದ್ಯಾನವನ ನಿರ್ಮಾಣವನ್ನು ಪಿ.ಪಿ.ಪಿ. ಮಾದರಿಯಲ್ಲಿ ಕೈಗೊಳ್ಳಲು ಪ್ರಸ್ತಾವನೆ ಬಂದಿದೆ. ಸರ್ಕಾರದಿಂದ ನೇರವಾಗಿಯೇ ಮಾಡಬೇಕು ಎಂಬ ವಿಚಾರವೂ ಇದೆ. ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಕಬಿನಿ ಜಲಾಶಯದಲ್ಲಿ  ಕೆಳಭಾಗದಲ್ಲಿ ಪ್ರವಾಹ ಬಂದಾಗ ನೀರು ನುಗ್ಗುವ ಪ್ರದೇಶದ ನಿವಾಸಿಗಳಿಗೆ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು. ಇದಕ್ಕೆ ಅವರ ಸಹಕಾರವೂ ಬೇಕೆಂದು ಹೇಳಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಕೊಳ್ಳೇಗಾಲ ಶಾಸಕ ಎನ್. ಮಹೇಶ್, ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ಇದ್ದರು.