ಕೃಷಿಹೊಂಡಕ್ಕೆ ಬಿದ್ದು ವಿದ್ಯಾರ್ಥಿಗಳ ಸಾವು ಎರಡು ಲಕ್ಷ ರೂ ಪರಿಹಾರ
Krushi honda student death
ಕೃಷಿಹೊಂಡಕ್ಕೆ ಬಿದ್ದು ವಿದ್ಯಾರ್ಥಿಗಳ ಸಾವು
ಎರಡು ಲಕ್ಷ ರೂ ಪರಿಹಾರ
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಬೊಮ್ಮಲಾಪುರ ಗ್ರಾಮದ ಕೃಷಿ ಹೊಂಡಕ್ಕೆ ಇಬ್ಬರು ಮಕ್ಕಳು ಬಿದ್ದು ಸಾವನ್ನಪ್ಪಿದ್ದರು. ಈ ಪ್ರಕರಣವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಪರಿಶೀಲನೆ ನಡೆಸಿದ್ದರು.
ಇದೀಗ ರಾಷ್ಟಿçÃಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಬೆಂಗಳೂರು ಕೇಂದ್ರ ಕಚೇರಿಯಿಂದ 2 ಲಕ್ಷ ರೂ. ಪರಿಹಾರ ಧನವನ್ನು ಬಿಡುಗಡೆ ಮಾಡಿದ್ದಾರೆ. ತಂದೆ ಮಾದಿಹಳ್ಳಿ ರಮೇಶ್ ಅವರಿಗೆ ಎರಡು ಲಕ್ಷ ರೂ. ಚೆಕ್‌ನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ. ಪ್ರಭುಸ್ವಾಮಿ, ಗ್ರಾಮಸ್ಥ ಯಡಿಯೂರಪ್ಪ ಸೇರಿದಂತೆ ಗ್ರಾಮಸ್ಥರು ಇದ್ದರು.